ಮುಧೋಳ ಸಬ್ ರಿಜಿಸ್ಟ್ರಾರ್ ಕಚೇರಿಗೆ ಲೋಕಾ ತಂಡ ಭೇಟಿ

KannadaprabhaNewsNetwork |  
Published : Nov 26, 2026, 03:00 AM IST
ಪೊಟೋ ನ.25ಎಂಡಿಎಲ್ 2. ಸಬ್ ರಜಿಸ್ಟರ್ ಕಚೇರಿಯ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಬಾಂಡ್ ರೈಟರ್‌ಗಳ (ಪತ್ರ ಬರಹಗಾರರ) ಪರವಾನಗಿ (ಲೈಸೆನ್ಸ್) ಹಾಗೂ ದಾಖಲೆಗಳನ್ನು ಲೋಕಾಯುಕ್ತ ತಂಡವು ತಪಾಸಣೆಗೆ ನಡಿಸಿತು. | Kannada Prabha

ಸಾರಾಂಶ

ಸಾರ್ವಜನಿಕರಿಂದ ಕೇಳಿಬಂದ ದೂರುಗಳ ಹಿನ್ನೆಲೆ ಧಾರವಾಡದ ಲೋಕಾಯುಕ್ತ ಇನ್ಸ್‌ಪೆಕ್ಟರ್ ಹಿರೇಮಠ ನೇತೃತ್ವದ ತಂಡ ಮಂಗಳವಾರ ನಗರದ ಸಬ್ ರಿಜಿಸ್ಟ್ರಾರ್ (ಉಪ ನೋಂದಣಾಧಿಕಾರಿ) ಕಚೇರಿಗೆ ದಿಢೀರ್ ಭೇಟಿ ನೀಡಿ ತೀವ್ರ ಪರಿಶೀಲನೆ ನಡೆಸಿತು.

ಕನ್ನಡಪ್ರಭ ವಾರ್ತೆ ಮುಧೋಳ

ಸಾರ್ವಜನಿಕರಿಂದ ಕೇಳಿಬಂದ ದೂರುಗಳ ಹಿನ್ನೆಲೆ ಧಾರವಾಡದ ಲೋಕಾಯುಕ್ತ ಇನ್ಸ್‌ಪೆಕ್ಟರ್ ಹಿರೇಮಠ ನೇತೃತ್ವದ ತಂಡ ಮಂಗಳವಾರ ನಗರದ ಸಬ್ ರಿಜಿಸ್ಟ್ರಾರ್ (ಉಪ ನೋಂದಣಾಧಿಕಾರಿ) ಕಚೇರಿಗೆ ದಿಢೀರ್ ಭೇಟಿ ನೀಡಿ ತೀವ್ರ ಪರಿಶೀಲನೆ ನಡೆಸಿತು.

ಕಚೇರಿಯ ಕಾರ್ಯವೈಖರಿ ಹಾಗೂ ನೋಂದಣಿ ಪ್ರಕ್ರಿಯೆಯಲ್ಲಿನ ಅಕ್ರಮಗಳ ಕುರಿತು ಸಾರ್ವಜನಿಕರ ದೂರು ದುಮ್ಮಾನ ಆಲಿಸಿದ ಅಧಿಕಾರಿಗಳು, ಕಚೇರಿಯ ಪ್ರಮುಖ ದಾಖಲೆಗಳನ್ನು ಕಲೆಹಾಕಿ ಪರಿಶೀಲಿಸಿದರು.

​ಬಾಂಡ್ ರೈಟರ್‌ಗಳ ಪರವಾನಗಿ ತಪಾಸಣೆ:-ಇದೇ ವೇಳೆ ಕಚೇರಿ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಬಾಂಡ್ ರೈಟರ್‌ಗಳ (ಪತ್ರ ಬರಹ ಗಾರರ) ಪರವಾನಗಿ (ಲೈಸೆನ್ಸ್) ಹಾಗೂ ದಾಖಲೆಗಳನ್ನು ಲೋಕಾಯುಕ್ತ ತಂಡ ತಪಾಸಣೆಗೆ ಒಳಪಡಿಸಿತು. ಲೋಕಾಯುಕ್ತ ಪೊಲೀಸರು ದಾಳಿ ನಡೆಸಿರುವ ಸುದ್ದಿ ತಿಳಿಯುತ್ತಿದ್ದಂತೆಯೇ, ಕೆಲವು ಬಾಂಡ್ ರೈಟರ್‌ಗಳು ಸ್ಥಳದಿಂದ ಕಾಲ್ಕಿತ್ತಿರುವುದು ಕಂಡುಬಂತು.

ಕಚೇರಿಯಲ್ಲಿ ಸಾರ್ವಜನಿಕರಿಗೆ ಆಗುತ್ತಿರುವ ಅನಗತ್ಯ ವಿಳಂಬ ಹಾಗೂ ಮಧ್ಯವರ್ತಿಗಳ ಹಾವಳಿಯ ಕುರಿತು ಅಧಿಕಾರಿಗಳು ಮಾಹಿತಿ ಸಂಗ್ರಹಿಸಿದ್ದು, ತಪಾಸಣೆಯ ಸಂಪೂರ್ಣ ವರದಿಯನ್ನು ಮೇಲಾಧಿಕಾರಿಗಳಿಗೆ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

5394 ಕೋಟೀಲಿ 2875 ಕಿಮೀ ರಸ್ತೆ ಅಭಿವೃದ್ಧಿ: ಕೃಷ್ಣ
ಭದ್ರಾ ಡ್ಯಾಂ ಬಲ, ಎಡದಂಡೆ ನಾಲೆಗಳಿಗೆ ನೀರು ಹರಿಸಿ