ಕನ್ನಡಪ್ರಭ ವಾರ್ತೆ ಪಾಂಡವಪುರ
ಸಂಘದಲ್ಲಿ 12 ಮಂದಿ ನಿರ್ದೇಶಕರಲ್ಲಿ 10 ಮಂದಿ ಜೆಡಿಎಸ್ ಹಾಗೂ ಇಬ್ಬರು ರೈತಸಂಘ-ಕಾಂಗ್ರೆಸ್ ಬೆಂಬಲಿತರಿದ್ದರು. ಸಂಘದ ನೂತನ ಆಡಳಿತ ಮಂಡಳಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದು ಕೆ.ಎಚ್.ಲೋಕೇಶ್‌ಗೌಡ ಹಾಗೂ ಕಲಾವತಿ ಹೊರತು ಪಡಿಸಿ ಬೇರೆ ಯಾರು ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ನಿರ್ಮಲ ಘೋಷಿಸಿದರು.
ಅಧ್ಯಕ್ಷ - ಉಪಾಧ್ಯಕ್ಷರಾಗಿ ಕೆ.ಎಚ್.ಲೋಕೇಶ್‌ಗೌಡ, ಕಲಾವತಿ ಆಯ್ಕೆಯಾಗುತ್ತಿದ್ದಂತೆಯೇ ಬೆಂಬಲಿಗರು ಪಟಾಕಿ ಸಿಡಿಸಿ ಸಿಹಿಹಂಚಿ ಸಂಭ್ರಮಿಸಿದರು. ನಂತರ ಎಲ್ಲಾ ನಿರ್ದೇಶಕರು, ಮುಖಂಡರು ಅಭಿನಂದಿಸಿದರು.ಅಧ್ಯಕ್ಷ ಕೆ.ಎಚ್.ಲೋಕೇಶ್‌ಗೌಡ ಮಾತನಾಡಿ, ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಆಶೀರ್ವಾದ ಹಾಗೂ ಎಲ್ಲಾ ನಿರ್ದೇಶಕರ ಬೆಂಬಲದಿಂದ ಅಧ್ಯಕ್ಷನಾಗಿದ್ದೇನೆ. ನಮ್ಮ ನಾಯಕರ ಸಲಹೆ, ಸೂಚನೆ, ಮಾರ್ಗದರ್ಶನದಂತೆ ಸಂಘದ ಅಭಿವೃದ್ಧಿಗೆ ಶ್ರಮಿಸುವ ಜತೆಗೆ ಸರ್ಕಾರದಿಂದ ರೈತರಿಗೆ ದೊರೆಯುವ ಸಾಲಸೌಲಭ್ಯ, ರಸಗೊಬ್ಬರ ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ಒದಗಿಸಿಕೊಡುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.