ಕಾಡಾನೆ ಸ್ಥಳಾಂತರ ಸಂಘರ್ಷದ ನಡುವೆಯೇ ವಿದ್ಯುತ್ ಪ್ರವಹಿಸಿ ಒಂಟಿ ಸಲಗ ಸಾವು

KannadaprabhaNewsNetwork |  
Published : Nov 24, 2026, 12:15 AM IST
 | Kannada Prabha

ಸಾರಾಂಶ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಂದೆಡೆ ಕಾಡಾನೆಗಳ ಸ್ಥಳಾಂತರ ವಿಚಾರವಾಗಿ ಸಂಘರ್ಷ, ಪ್ರತಿಭಟನೆಗಳು ನಡೆಯುತ್ತಿದ್ದರೆ, ಮತ್ತೊಂದೆಡೆ ವಿದ್ಯುತ್ ಪ್ರವಹಿಸಿ ಒಂಟಿ ಸಲಗವೊಂದು ಮೃತಪಟ್ಟಿರುವ ಘಟನೆ ನಡೆದಿದೆ.

ವಿದ್ಯುತ್ ತಂತಿ ತಗುಲಿ ಸುಮಾರು 15 ವರ್ಷದ ಗಂಡು ಕಾಡಾನೆ ಮೃತ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಂದೆಡೆ ಕಾಡಾನೆಗಳ ಸ್ಥಳಾಂತರ ವಿಚಾರವಾಗಿ ಸಂಘರ್ಷ, ಪ್ರತಿಭಟನೆಗಳು ನಡೆಯುತ್ತಿದ್ದರೆ, ಮತ್ತೊಂದೆಡೆ ವಿದ್ಯುತ್ ಪ್ರವಹಿಸಿ ಒಂಟಿ ಸಲಗವೊಂದು ಮೃತಪಟ್ಟಿರುವ ಘಟನೆ ನಡೆದಿದೆ.ಕಡೂರು ತಾಲೂಕು ಎಮ್ಮೆದೊಡ್ಡಿ ಸಮೀಪದ ಸಗನಿ ಬಸವನಹಳ್ಳಿ ಗ್ರಾಮದಲ್ಲಿ ಜೋಳದ ಹೊಲಕ್ಕೆ ಅಳವಡಿಸಿದ್ದ ವಿದ್ಯುತ್ ತಂತಿ ತಗುಲಿ ಸುಮಾರು 15 ವರ್ಷದ ಗಂಡು ಕಾಡಾನೆ ಮೃತಪಟ್ಟಿದೆ.ಕಡೂರು ವಲಯ ಅರಣ್ಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಆಹಾರ ಅರಸಿ ಕಾಡಿನಿಂದ ಜಮೀನಿನತ್ತ ಬಂದಿದ್ದ ಒಂಟಿ ಸಲಗಕ್ಕೆ ಹೊಲದ ಸುತ್ತಲೂ ಅಳವಡಿಸಿದ್ದ ವಿದ್ಯುತ್ ತಂತಿ ತಗುಲಿ ವಿದ್ಯುತ್ ಪ್ರವಹಿಸಿದ ಪರಿಣಾಮ ಆನೆ ಸ್ಥಳದಲ್ಲೇ ಮೃತಪಟ್ಟಿದೆ ಎಂದು ತಿಳಿದುಬಂದಿದೆ.ಕಾಡುಪ್ರಾಣಿಗಳ ಹಾವಳಿಯಿಂದ ಬೆಳೆಗಳನ್ನು ರಕ್ಷಿಸುವ ಉದ್ದೇಶದಿಂದ ಜಮೀನಿಗೆ ವಿದ್ಯುತ್ ತಂತಿ ಅಳವಡಿಸಿದ್ದು ಅದು ಕಾಡಾನೆಯ ಸಾವಿಗೆ ಕಾರಣವಾಗಿದೆ. ಘಟನೆ ಬಳಿಕ ಜಮೀನಿಗೆ ವಿದ್ಯುತ್ ತಂತಿ ಅಳವಡಿಸಿದ್ದ ವ್ಯಕ್ತಿ ಸ್ಥಳದಿಂದ ಪರಾರಿ ಯಾಗಿದ್ದಾನೆ ಎಂದು ತಿಳಿದುಬಂದಿದೆ.ವಿಷಯ ತಿಳಿಯುತ್ತಿದ್ದಂತೆ ಕಡೂರು ವಲಯ ಅರಣ್ಯಾಧಿಕಾರಿ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆನೆ ಸಾವಿಗೆ ನಿಖರ ಕಾರಣ, ವಿದ್ಯುತ್ ಸಂಪರ್ಕದ ಮೂಲ ಹಾಗೂ ಜಮೀನಿನಲ್ಲಿ ತಂತಿ ಅಳವಡಿಸಿರುವ ಕುರಿತು ಅರಣ್ಯ ಇಲಾಖೆ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸೃಜನತ್ಮಕ ಸಾಧ್ಯತೆಗಳ ಗುರುತಿಸಿ ಮುನ್ನಡೆಯಿರಿ
ಖಂಡೇರಾಯನಪಲ್ಲಿಯಲ್ಲಿ ವಿದ್ಯುತ್‌ ಉಪಕೇಂದ್ರ ಉದ್ಘಾಟನೆ