ಜಗಳೂರು: ರಾಷ್ಟ್ರೀಯ ಹೆದ್ದಾರಿ-50ರ ಕಾನನಕಟ್ಟೆ ಟೋಲ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ, ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಲಾರಿ ಚಾಲಕನನ್ನು ಅಗ್ನಿಶಾಮಕ ಸಿಬ್ಬಂದಿ ಸಾಹಸಮಯವಾಗಿ ರಕ್ಷಿಸಿ, ಆಸ್ಪತ್ರೆಗೆ ಸೇರಿಸುವ ಮೂಲಕ ಜೀವ ಉಳಿಸಿದ್ದಾರೆ.
ಸಾಹಸಮಯ ರಕ್ಷಣಾ ಕಾರ್ಯಾಚರಣೆ:
ಅಪಘಾತದ ವಿಷಯ ತಿಳಿದ ತಕ್ಷಣವೇ ಜಗಳೂರು ಅಗ್ನಿಶಾಮಕ ಠಾಣಾಧಿಕಾರಿ ಎಂ.ಎನ್. ಖಾಸಿಂ ಸಾಬ್ ಹಾಗೂ ಅವರ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರು. ಪರಿಸ್ಥಿತಿ ಗಂಭೀರತೆ ಅರಿತ ಸಿಬ್ಬಂದಿ, ತಮ್ಮ ಜಲವಾಹನದಲ್ಲಿದ್ದ ವಿಶೇಷ ರಕ್ಷಣಾ ಉಪಕರಣಗಳನ್ನು ಬಳಸಿ, ಜಂಖಗೊಂಡ ಕ್ಯಾಬಿನ್ ಅನ್ನು ಜಾಗ್ರತೆಯಿಂದ ಸೀಳಿದರು. ರಕ್ತಸಿಕ್ತವಾಗಿದ್ದ ಚಾಲಕನನ್ನು ರಕ್ಷಿಸುವಲ್ಲಿ ಅಗ್ನಿಶಾಮಕ ಸಿಬ್ಬಂದಿ ಯಶಸ್ವಿಯಾದರು. ಬಳಿಕ ಸ್ಥಳದಲ್ಲೇ ಸಿದ್ಧವಾಗಿದ್ದ ಆಂಬ್ಯುಲೆನ್ಸ್ ಮೂಲಕ ಗಾಯಾಳು ಮಲ್ಲಪ್ಪ ಅವರನ್ನು ತಕ್ಷಣವೇ ಜಗಳೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಪ್ರಾಥಮಿಕ ಚಿಕಿತ್ಸೆ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಲ್ಲಪ್ಪ ಅವರನ್ನು ದಾವಣಗೆರೆ ಆಸ್ಪತ್ರೆಗೆ ರವಾನಿಸಲಾಯಿತು.ಮೃತ್ಯುವಿನ ದವಡೆಯಲ್ಲಿದ್ದ ಲಾರಿ ಚಾಲಕನ ಜೀವ ಉಳಿಸಿದ ಅಗ್ನಿಶಾಮಕ ಅಧಿಕಾರಿ ಎಂ.ಎನ್. ಖಾಸಿಂ ಸಾಬ್ ಮತ್ತವರ ಸಿಬ್ಬಂದಿ ಕಾರ್ಯಕ್ಷಮತೆ, ಸಮಯಪ್ರಜ್ಞೆಗೆ ಸ್ಥಳೀಯರು ಹಾಗೂ ಸಾರ್ವಜನಿಕರು ಪ್ರಶಂಸಿಸಿದರು.
-08ಜೆ.ಜಿ.ಎಲ್.1: