ಲಾರಿ ಡಿಕ್ಕಿ: ಕಾಲೇಜು ವಿದ್ಯಾರ್ಥಿ ಮೃತ್ಯು, ಸಹ ಸವಾರೆ ಗಂಭೀರ

KannadaprabhaNewsNetwork |  
Published : Apr 30, 2026, 02:30 AM IST
ಕಾರ್ತಿಕ್‌ | Kannada Prabha

ಸಾರಾಂಶ

ಇಲ್ಲಿಗೆ ಸಮೀಪದ ಬಜತ್ತೂರು ಗ್ರಾಮದ ನೀರಕಟ್ಟೆ ಬಳಿ ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಕಾರ್ತಿಕ್ (೨೩) ಎಂಬ ಕಾಲೇಜು ವಿದ್ಯಾರ್ಥಿ ಮೃತಪಟ್ಟು, ಸಹ ಸವಾರೆ ಕಾಲೇಜು ವಿದ್ಯಾರ್ಥಿನಿ ನೇಹಾ ಎಂಬಾಕೆ ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ಸಂಭವಿಸಿದೆ.

ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಬಜತ್ತೂರು ಗ್ರಾಮದ ನೀರಕಟ್ಟೆ ಬಳಿ ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಕಾರ್ತಿಕ್ (೨೩) ಎಂಬ ಕಾಲೇಜು ವಿದ್ಯಾರ್ಥಿ ಮೃತಪಟ್ಟು, ಸಹ ಸವಾರೆ ಕಾಲೇಜು ವಿದ್ಯಾರ್ಥಿನಿ ನೇಹಾ ಎಂಬಾಕೆ ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ಸಂಭವಿಸಿದೆ.

ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳ ತಂಡ ದ್ವಿಚಕ್ರ ವಾಹನಗಳಲ್ಲಿ ಪರಿಚಿತರ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿಂತಿರುಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ದ್ವಿಚಕ್ರ ವಾಹನ ಸವಾರ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ತಲೆ ಹಾಗೂ ಕಾಲಿಗೆ ಗಾಯಗೊಂಡ ನೇಹಾ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತ ಕಾರ್ತಿಕ್ ಕಾಲೇಜಿನ ಅಂತಿಮ ಬಿಬಿಎ ವಿದ್ಯಾರ್ಥಿಯಾಗಿದ್ದು, ಉಪ್ಪಿನಂಗಡಿಯ ಶಿವಕುಮಾರ್ ಗಾಂಧೀ ಪಾರ್ಕ್ ಎಂಬವರ ಪುತ್ರ.

ಕಾಲೇಜು ಶಿಕ್ಷಣ ಪಡೆಯುತ್ತಿದ್ದಾಗಲೇ ಬಿಡುವಿನ ವೇಳೆಯಲ್ಲಿ ಸಣ್ಣಪುಟ್ಟ ಕೆಲಸ ಕಾರ್ಯಗಳನ್ನು ನಿರ್ವಹಿಸುತ್ತಾ ಸ್ವಾವಲಂಭಿ ಬದುಕು ಕಟ್ಟಿಕೊಂಡು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು. ಗಂಭೀರ ಗಾಯಗೊಂಡಿರುವ ನೇಹಾ ಹಿರೆಬಂಡಾಡಿ ಗ್ರಾಮದ ನಿವಾಸಿಯಾಗಿದ್ದು, ಕಾಲೇಜಿನ ಅಂತಿಮ ಬಿಎ ವಿದ್ಯಾರ್ಥಿನಿಯಾಗಿದ್ದಾರೆ. ಪುತ್ತೂರು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

(ಫೋಟೋ - ಯುಪಿಪಿ ಕಾರ್ತಿಕ್ )

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಇಂದು ಬಹಿರಂಗ ಸಭೆ, ಅದ್ಧೂರಿ ಜಯಂತ್ಯುತ್ಸವ
ಶಿವಬೋಧರಂಗ ಸೊಸೈಟಿಗೆ ₹7.30 ಕೋಟಿ ಲಾಭ