ಲಾರಿ- ಕೆಎಸ್‌ಆರ್‌ಟಿಸಿ ಅಪಘಾತ

KannadaprabhaNewsNetwork |  
Published : Oct 08, 2023, 12:01 AM IST
ಪೋಟೋ 6 : ಅಪಘಾತಕ್ಕೀಡಾದ ಬಸ್ಸು | Kannada Prabha

ಸಾರಾಂಶ

ದಾಬಸ್‌ಪೇಟೆ: ಕಳೆದ ಐದು ದಿನಗಳ ಹಿಂದೆ ಸಂಭವಿಸಿದ ಅಪಘಾತ ಮಾಸುವ ಮುನ್ನವೇ ಅದೇ ಸ್ಥಳದಲ್ಲಿ ಮತ್ತೊಂದು ಅಪಘಾತವಾಗಿರುವ ಘಟನೆ ಸೋಂಪುರ ಹೋಬಳಿಯ ಗುಂಡೇನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ-48ರ ಬೆಂಗಳೂರು-ತುಮಕೂರು ರಸ್ತೆಯಲ್ಲಿ ನಡೆದಿದೆ.

ದಾಬಸ್‌ಪೇಟೆ: ಕಳೆದ ಐದು ದಿನಗಳ ಹಿಂದೆ ಸಂಭವಿಸಿದ ಅಪಘಾತ ಮಾಸುವ ಮುನ್ನವೇ ಅದೇ ಸ್ಥಳದಲ್ಲಿ ಮತ್ತೊಂದು ಅಪಘಾತವಾಗಿರುವ ಘಟನೆ ಸೋಂಪುರ ಹೋಬಳಿಯ ಗುಂಡೇನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ-48ರ ಬೆಂಗಳೂರು-ತುಮಕೂರು ರಸ್ತೆಯಲ್ಲಿ ನಡೆದಿದೆ. ಶನಿವಾರ ಮಧ್ಯಾಹ್ನ 3.45 ಗಂಟೆಯಲ್ಲಿ ತುಮಕೂರಿಂದ ಬೆಂಗಳೂರಿಗೆ ಹೋಗುತ್ತಿದ್ದ ಲಾರಿ ಗುಂಡೇನಹಳ್ಳಿ ಬಳಿ ರಸ್ತೆ ತಿರುವು ಪಡೆದುಕೊಳ್ಳುತ್ತಿದ್ದ ಸಂದರ್ಭದಲ್ಲಿ ಅದೇ ಮಾರ್ಗವಾಗಿ ಬಂದ ಕೆಎಸ್‌ಆರ್‌ಟಿಸಿ ಬಸ್ ಲಾರಿಗೆ ಡಿಕ್ಕಿ ಹೊಡೆದಿದೆ. 40 ಪ್ರಯಾಣಿಕರು ಪಾರು: ಅಪಘಾತವಾದ ಬಸ್‌ನಲ್ಲಿ 40ಕ್ಕೂ ಹೆಚ್ಚು ಜನ ಪ್ರಯಾಣಿಸುತ್ತಿದ್ದರು. 25ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದಾರೆ. ನೆಲಮಂಗಲ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV

Recommended Stories

ತುಮಕೂರಲ್ಲಿ 20 ನವಿಲುಗಳ ಸಾವು
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ