ಕನ್ನಡಪ್ರಭ ವಾರ್ತೆ ಕೆ.ಎಂ.ದೊಡ್ಡಿ
2022ರ ಜುಲೈನಲ್ಲಿ ದಕ್ಷಿಣ ಕರ್ನಾಟಕ ಕಬ್ಬು ಸಾಗಾಣಿಕೆ ಲಾರಿ ಮಾಲೀಕರ ಸಂಘಗಳ ಒಕ್ಕೂಟ ದರ ಪರಿಷ್ಕರಣೆಗಾಗಿ ಮನವಿ ಸಲ್ಲಿಸಿತ್ತು. ಈ ಬಗ್ಗೆ ದಕ್ಷಿಣ ಭಾಗದ ಸಕ್ಕರೆ ಕಾರ್ಖಾನೆಗಳ ವ್ಯವಸ್ಥಾಪಕ ನಿರ್ದೇಶಕರು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಕಬ್ಬು ಕಟಾವು ಮತ್ತು ಸಾಗಾಣಿಕೆ ವೆಚ್ಚದ ಮಾರ್ಗಸೂಚಿ ಹೊರಡಿಸಿ ರಾಜ್ಯದ ಎಲ್ಲಾ ಸಕ್ಕರೆ ಕಾರ್ಖಾನೆಗಳು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಸೂಚಿಸಿದ್ದರೂ ಆಡಳಿತ ಮಂಡಳಿಗಳು ಇದುವರೆಗೂ ಕ್ರಮಕೈಗೊಂಡಿಲ್ಲ ಎಂದು ಕಿಡಿಕಾರಿದರು.
ದಕ್ಷಿಣ ಕರ್ನಾಟಕದ ಕಾರ್ಖಾನೆಗಳು ಜೂನ್ ತಿಂಗಳಿನಲ್ಲಿಯೇ ಪ್ರಾರಂಭವಾಗುತ್ತಿವೆ. ಪ್ರತಿ ವರ್ಷ ಕಾರ್ಖಾನೆ ಪ್ರಾರಂಭಕ್ಕೆ ಮುನ್ನವೇ ದರ ನಿಗದಿಪಡಿಸಬೇಕಿದೆ. ಸಾಗಾಣಿಕೆ ವೆಚ್ಚ ಮತ್ತು ಕಟಾವು ದರವನ್ನು ಪರಿಷ್ಕರಣೆ ಮಾಡುವಂತೆ ಒತ್ತಾಯಿಸಿದ್ದರೂ ಇದುವರೆಗೂ ದರ ಹೆಚ್ಚಳ ಮಾಡದಿರುವುದನ್ನು ಖಂಡಿಸಿದರು.ಲಾರಿ ಮತ್ತು ಟ್ರ್ಯಾಕ್ಟರ್ ಗಳಿಗೆ ಸಂಬಂಧಿಸಿದ ವಸ್ತುಗಳ ಬೆಲೆಗಳು ದಿನೇ ದಿನೇ ಹೆಚ್ಚಳವಾಗುತ್ತಿವೆ. ಈಗ ಕಾರ್ಖಾನೆಗಳು ನೀಡುತ್ತಿರುವ ಸಾಗಾಣಿಕೆ ವೆಚ್ಚ ಯಾವುದಕ್ಕೂ ಸಾಲದು. ಡೀಸೆಲ್ ಬೆಲೆಯೂ ಏರಿಕೆಯಾಗಿದೆ. ಹೀಗಾಗಿ ಕೂಡಲೇ 2021-22ನೇ ಸಾಲಿನಲ್ಲಿ ಹೊರಡಿಸಿರುವ ಕಬ್ಬು ಕಟಾವು, ಸಾಗಾಣಿಕೆ ವೆಚ್ಚದ ಮಾರ್ಗಸೂಚಿಗಳನ್ನು ಚಾಂಶುಗರ್ ಸಕ್ಕರೆ ಕಾರ್ಖಾನೆ ಕಟ್ಟು ನಿಟ್ಟಾಗಿ ಜಾರಿಗೊಳಿಸಿ ಲಾರಿ ಮತ್ತು ಟ್ರ್ಕಾಕ್ಟರ್ ಮಾಲೀಕರ ನೆರವಿಗೆ ಧಾವಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.