ಹೆಚ್ಚು ಶಬ್ದ ಮಾಡುವ ಪಟಾಕಿಗಳು ನಿಷೇಧ

KannadaprabhaNewsNetwork |  
Published : Oct 25, 2024, 01:10 AM IST
ಜಿಲ್ಲಾಧಿಕಾರಿ ಶುಭ ಕಲ್ಯಾಣ್ | Kannada Prabha

ಸಾರಾಂಶ

ದೀಪಾವಳಿ ಹಬ್ಬವನ್ನು ಪರಿಸರಸ್ನೇಹಿ ಹಬ್ಬವನ್ನಾಗಿ ಆಚರಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ 125 ಡೆಸಿಬಲ್‌ಗಳಿಗಿಂತಲೂ ಹೆಚ್ಚಿನ ಶಬ್ದ ಮಾಡುವ ಪಟಾಕಿಗಳನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚಿಸಿದ್ದಾರೆ.

ಕನ್ನಡಪ್ರಭ ವಾರ್ತೆ ತುಮಕೂರು

ದೀಪಾವಳಿ ಹಬ್ಬವನ್ನು ಪರಿಸರಸ್ನೇಹಿ ಹಬ್ಬವನ್ನಾಗಿ ಆಚರಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ 125 ಡೆಸಿಬಲ್‌ಗಳಿಗಿಂತಲೂ ಹೆಚ್ಚಿನ ಶಬ್ದ ಮಾಡುವ ಪಟಾಕಿಗಳನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚಿಸಿದ್ದಾರೆ. ಜಿಲ್ಲೆಯ ಸಾರ್ವಜನಿಕರ ಆಸ್ತಿ ಮತ್ತು ಆರೋಗ್ಯದ ಸಂರಕ್ಷಣೆ, ಪರಿಸರ ಮಾಲಿನ್ಯ ಹಾಗೂ ಶಬ್ದ ಮಾಲಿನ್ಯವನ್ನು ನಿಯಂತ್ರಣದಲ್ಲಿಡುವ ಉದ್ದೇಶದಿಂದ ಈ ನಿಷೇಧಕ್ಕೆ ಸೂಚನೆ ನೀಡಲಾಗಿದೆ. ದೀಪಾವಳಿ ಹಬ್ಬವನ್ನು ಸಿಡಿಮದ್ದು ಪಟಾಕಿಗಳನ್ನು ಉಪಯೋಗಿಸದೆ ದೀಪದ ಹಬ್ಬವನ್ನಾಗಿ ಆಚರಿಸಬೇಕು ಎಂದರು.

ದೀಪಾವಳಿ ಹಬ್ಬದ ಸಂದರ್ಭದಲ್ಲಿ ರಾತ್ರಿ 10 ರಿಂದ ಬೆಳಿಗ್ಗೆ 6 ಗಂಟೆಯವರೆಗೆ ಪಟಾಕಿಗಳನ್ನು ಸಿಡಿಸುವುದು, ಹೆಚ್ಚು ಶಬ್ದ ಮಾಡುವ ಪಟಾಕಿ ಹಾಗೂ ಸಿಡಿ ಮದ್ದುಗಳ ಮಾರಾಟವನ್ನು ನಿಷೇಧಿಸಲಾಗಿದೆ. ದಿನದ ಯಾವುದೇ ಸಮಯದಲ್ಲಿ ನಿಶಬ್ದ ವಲಯಗಳೆಂದು ಘೋಷಿಸಲ್ಪಟ್ಟಿರುವ ಆಸ್ಪತ್ರೆ, ಶಾಲೆ, ಪ್ರಾರ್ಥನಾ ಮಂದಿರದ ಸುತ್ತ-ಮುತ್ತ ಯಾವುದೇ ರೀತಿಯ ಶಬ್ದ ಉಂಟು ಮಾಡುವ ನಿಷೇಧಿತ ಪಟಾಕಿ, ಸಿಡಿಮದ್ದುಗಳನ್ನು ಬಳಸಬಾರದು. ಸಾರ್ವಜನಿಕರು ನಗರ ಮತ್ತು ಪಟ್ಟಣದ ಚಿಕ್ಕ-ಚಿಕ್ಕ ಬೀದಿಗಳಲ್ಲಿ ಪಟಾಕಿ, ಸಿಡಿಮದ್ದು ಹಾಗೂ ಬಾಣ-ಬಿರುಸುಗಳನ್ನು ಉಪಯೋಗಿಸುವುದರಿಂದ ಅಲ್ಲಿನ ನಿವಾಸಿಗಳಿಗೆ ಹಾನಿ ಅಥವಾ ಬೆಂಕಿ ಹಾಗೂ ಸ್ಪೋಟದಿಂದ ಅಪಾಯವಾಗುವ ಸಾಧ್ಯತೆಯಿದ್ದು, ಪಟಾಕಿ ಹಾಗೂ ಸಿಡಿ ಮದ್ದುಗಳನ್ನು ವಸತಿ ಪ್ರದೇಶಗಳ ಬದಲು ಮೈದಾನಗಳಲ್ಲಿ ಸಿಡಿಸಬೇಕೆಂದು ಮನವಿ ಮಾಡಿದ್ದಾರೆ. ದೀಪಾವಳಿ ಹಬ್ಬದ ಆಚರಣೆಯ ಸಂದರ್ಭದಲ್ಲಿ ಹಸಿರು ಪಟಕಿಗಳನ್ನು ಮಾತ್ರ ಬಳಸಬೇಕು ಮತ್ತು ಪ್ರಮುಖವಾಗಿ ಹಸಿರು ಪಟಾಕಿ ಮಳಿಗೆಯಲ್ಲಿ ತಯಾರಕರು, ಮಾರಾಟಗಾರರು ಮತ್ತು ಎಜೆಂಟ್‌ಗಳಿಗೆ ಮಾತ್ರ ಅನುಮತಿಸಲಾಗುವುದು.

ಯಾವುದೇ ಹಸಿರು ಪಟಾಕಿಗಳ ಪ್ಯಾಕೆಟ್ಟುಗಳನ್ನು ರ್‍ಯಾಡಮ್ ಆಗಿ ಸಂಗ್ರಹಿಸಿ, ನಿಗಧಿತ ವಿಧಿ ವಿಧಾನಗಳ ಮೂಲಕ ಅವುಗಳಲ್ಲಿನ ಶಬ್ದ ಮಟ್ಟವನ್ನು ಮಾಪನ ಮಾಡಲಾಗುವುದು. ನಿಗಧಿತ ಗುಣಮಾಪನಗಳಿಗೆ ಸರಿ ಹೊಂದದಿದ್ದಲ್ಲಿ, ಅವುಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುವುದು.

ದೀಪಾವಳಿ ಹಬ್ಬದ ಆಚರಣೆಯ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು ಹಾಗೂ ಇವುಗಳನ್ನು ಬಳಸುವಾಗ ಯಾವುದೇ ಪ್ರಾಣಿ, ಪಕ್ಷಿ, ಮಕ್ಕಳು ಹಾಗು ವೃದ್ಧರಿಗೆ ತೊಂದರೆಯಾಗದಂತೆ ಬಳಸಬೇಕು.

ಹಸಿರು ಪಟಾಕಿ ಬಳಸುವ ಬಗ್ಗೆ ಜಿಲ್ಲಾಡಳಿತದಿಂದ ಸಾರ್ವಜನಿಕರು ಹಾಗೂ ಮಕ್ಕಳಲ್ಲಿ ಅರಿವು ಮೂಡಿಸಲು ಪರಿಣಾಮಾಕಾರಿಯಾಗಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು.

ಹೊರ ರಾಜ್ಯಗಳಿಂದ ಅನಧಿಕೃತವಾಗಿ ಯಾವುದೇ ರೀತಿಯ ನಿಷೇಧಿತ ಪಟಾಕಿಗಳನ್ನು ಸಾಗಾಟ ಮಾಡುತ್ತಿದ್ದಲ್ಲಿ ಕೂಡಲೇ ವಾಣಿಜ್ಯ ತೆರಿಗೆ ಇಲಾಖೆಯ ವತಿಯಿಂದ ರಾಜ್ಯದ ಗಡಿಗಳಲ್ಲಿರುವ ತನಿಖಾ ಠಾಣೆಗಳ ಮುಖಾಂತರ ನಿಷೇಧಿತ ಪಟಾಕಿಗಳು ಹಾಗೂ ಸಂಬಂಧಿತ ವಸ್ತು ಹಾಗೂ ಸಾಗಾಟ ಮಾಡುವ ವಾಹನವನ್ನು ಸಾರಿಗೆ ಇಲಾಖೆ ವತಿಯಿಂದ ಮುಟ್ಟುಗೋಲು ಹಾಕಿಕೊಳ್ಳಲಾಗುವುದು.ಮಳೆಯಿಂದ ಜಿಲ್ಲೆಯ ಒಟ್ಟು 59.52 ಹೆಕ್ಟೇರ್ ಪ್ರದೇಶದ ಬೆಳೆ ಹಾನಿಯಾಗಿದ್ದು, ಹಾನಿಗೊಳಗಾದ ಬೆಳೆ ಪರಿಹಾರ ನೀಡಲು ಅಗತ್ಯ ಕ್ರಮವಹಿಸಲಾಗಿದೆ. ಅಲ್ಲದೆ 133 ಮನೆ ಹಾನಿ, 3 ಸಂಪೂರ್ಣ/ತೀವ್ರ ಮನೆ ಹಾನಿ ಹಾಗೂ 130 ಭಾಗಶಃ ಮನೆಗಳು ಹಾನಿಯಾಗಿವೆ.ಪಟಾಕಿ ಮಾರಾಟಗಾರರು ತಮ್ಮ ಮಳಿಗೆ, ಗೋದಾಮುಗಳಲ್ಲಿ ಹಸಿರು ಪಟಾಕಿ ಅಲ್ಲದೆ ಇನ್ನಾವುದೇ ನಿಷೇಧಿತ ಪಟಾಕಿಗಳನ್ನು ದಾಸ್ತಾನು ಮಾಡುವಂತಿಲ್ಲ. ದಾಸ್ತಾನು ಮಾಡಿದ್ದಲ್ಲಿ ಇಡೀ ಮಳಿಗೆ/ ಗೋದಾಮುಗಳನ್ನು ಮುಟ್ಟುಗೋಲು ಹಾಕಿಕೊಂಡು ಸಂಬಂಧಪಟ್ಟ ವ್ಯಕ್ತಿಗಳ ಮೇಲೆ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು. ಎಲ್ಲಾ ಹಸಿರು ಪಟಾಕಿಗಳ ಮೇಲೆ ಹಾಗೂ ಅವುಗಳ ಪ್ಯಾಕೆಟ್ ಮೇಲೆ ಹಸಿರು ಪಟಾಕಿಯ ಚಿಹ್ನೆ ಹಾಗೂ ಕ್ಯೂಆರ್ ಕೋಡ್ ಇರುತ್ತದೆ. ಚಿಹ್ನೆ ಇಲ್ಲದ ಯಾವುದೇ ಪಟಾಕಿ ಹಸಿರು ಪಟಾಕಿಯೆನಿಸುವುದಿಲ್ಲ. ಅಂತಹ ಪಟಾಕಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಎಂದು ಡೀಸಿ ಶುಭ ಕಲ್ಯಾಣ್‌ ಸೂಚಿಸಿದರು.ಮಳೆಯಿಂದ ಮರ ಬಿದ್ದು ಜಿಲ್ಲೆಯ ಶಿರಾ ತಾಲೂಕಿನಲ್ಲಿ ಒಂದು ಮಾನವ ಜೀವ ಹಾನಿಯಾಗಿದ್ದು, ಮೃತರ ವಾರಸುದಾರರಿಗೆ 5 ಲಕ್ಷ ರು. ಪರಿಹಾರವನ್ನು ವಿತರಿಸಲಾಗಿದೆ. ಜಿಲ್ಲೆಯಲ್ಲಿ 2024ರ ಜನವರಿ 1 ರಿಂದ ಈವರೆಗೂ ವಾಸ್ತವವಾಗಿ 926 ಮಿ.ಮೀ. ಮಳೆಯಾಗಿದೆ. ಸಿಡಿಲಿನಿಂದ ಶಿರಾ ಹಾಗೂ ತುರುವೇಕೆರೆ ತಾಲ್ಲೂಕಿನ 2 ಹಸು/ಎಮ್ಮೆ ಹಾಗೂ ಪಾವಗಡ ತಾಲ್ಲೂಕಿನ 6 ಕುರಿ ಮತ್ತು ತುರುವೇಕೆರೆ ತಾಲೂಕಿನ 17(13 ಮೇಕೆ + 4 ಕುರಿ) ಸೇರಿ ಒಟ್ಟು 25 ಜಾನುವಾರುಗಳ ಪ್ರಾಣ ಹಾನಿಯಾಗಿದೆ. ಈ ಪೈಕಿ ಜಾನುವಾರು ಮಾಲೀಕರಿಗೆ 37,500 ರೂ.(ತಲಾ ಒಂದು ಜಾನುವಾರಿಗೆ)ಗಳ ಪರಿಹಾರ ಹಾಗೂ 4000 ರೂ.ಗಳ (ತಲಾ ಒಂದು ಕುರಿ/ಮೇಕೆ) ಪರಿಹಾರವನ್ನು ವಿತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಹೇಳಿದರು.

PREV

Recommended Stories

2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...