ಕನ್ನಡ ಪ್ರೀತಿ ಎಂಬುದು ತೋರಿಕೆಯಾಗದಿರಲಿ: ಚವ್ಹಾಣ

KannadaprabhaNewsNetwork |  
Published : Nov 02, 2026, 02:30 AM IST
ಚಿತ್ರ 1ಬಿಡಿಆರ್57 | Kannada Prabha

ಸಾರಾಂಶ

ಕನ್ನಡದ ಮೇಲಿನ ಪ್ರೀತಿ ಕೇವಲ ತೋರಿಕೆಗೆ ಸೀಮಿತವಾಗಬಾರದು. ಅದು ಪ್ರತಿಯೊಬ್ಬರ ಅಂತರಾಳದಿಂದ ಮೂಡಿಬರಬೇಕು. ಕನ್ನಡ ಮಾತನಾಡುವುದಷ್ಟೇ ಅಲ್ಲ, ನಮ್ಮ ನೆಲ, ಜಲ, ಭಾಷೆ, ಸಂಸ್ಕೃತಿ, ಪರಂಪರೆ ಮತ್ತು ಅಸ್ಮಿತೆಯನ್ನು ಉಳಿಸಿ ಬೆಳೆಸಲು ಪ್ರಾಮಾಣಿಕವಾಗಿ ಶ್ರಮಿಸಬೇಕು ಎಂದು ಔರಾದ್‌ ಬಿ ಶಾಸಕರಾದ ಪ್ರಭು ಬಿ. ಚವ್ಹಾಣ ತಿಳಿಸಿದರು.

ಕನ್ನಡಪ್ರಭ ವಾರ್ತೆ ಔರಾದ್

ಕನ್ನಡದ ಮೇಲಿನ ಪ್ರೀತಿ ಕೇವಲ ತೋರಿಕೆಗೆ ಸೀಮಿತವಾಗಬಾರದು. ಅದು ಪ್ರತಿಯೊಬ್ಬರ ಅಂತರಾಳದಿಂದ ಮೂಡಿಬರಬೇಕು. ಕನ್ನಡ ಮಾತನಾಡುವುದಷ್ಟೇ ಅಲ್ಲ, ನಮ್ಮ ನೆಲ, ಜಲ, ಭಾಷೆ, ಸಂಸ್ಕೃತಿ, ಪರಂಪರೆ ಮತ್ತು ಅಸ್ಮಿತೆಯನ್ನು ಉಳಿಸಿ ಬೆಳೆಸಲು ಪ್ರಾಮಾಣಿಕವಾಗಿ ಶ್ರಮಿಸಬೇಕು ಎಂದು ಔರಾದ್‌ (ಬಿ) ಶಾಸಕರಾದ ಪ್ರಭು ಬಿ. ಚವ್ಹಾಣ ತಿಳಿಸಿದರು.

ಕನ್ನಡ ರಾಜ್ಯೋತ್ಸವದ ಅಂಗವಾಗಿ ತಾಲ್ಲೂಕು ಆಡಳಿತದಿಂದ ನ.1ರಂದು ಔರಾದ (ಬಿ) ತಾಲ್ಲೂಕು ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಧ್ವಜಾರೋಹಣ ಕಾರ್ಯ ಕ್ರಮದಲ್ಲಿ ಮಾತನಾಡಿ, ಕನ್ನಡದ ಗೌರವಕ್ಕೆ ಧಕ್ಕೆಯಾಗುವಂತಹ ವರ್ತನೆ ಯಾರಿಂದಲೂ ಆಗಬಾರದು. ಕೊರಳಿಗೆ ಕನ್ನಡ ಶಾಲು ಹಾಕಿಕೊಂಡು ಮದ್ಯಪಾನ ಮಾಡಿ ಕುಣಿಯುವುದು ಅಥವಾ ಕನ್ನಡ ಬಾವುಟಕ್ಕೆ ಅಗೌರವ ತೋರುವುದನ್ನು ಅಲ್ಲಲ್ಲಿ ಕಾಣುತ್ತಿದ್ದೇವೆ. ಇದು ಕನ್ನಡ ಪ್ರೇಮ ಎನಿಸಿಕೊಳ್ಳುವುದಿಲ್ಲ. ನಮ್ಮ ನೆಲ, ಜಲ, ಭಾಷೆ, ಬಾವುಟ ಮತ್ತು ನಾಡಿನ ಗೌರವವನ್ನು ಕಾಪಾಡುವುದು ಪ್ರತಿಯೊಬ್ಬ ಕನ್ನಡಿಗನ ಆದ್ಯ ಕರ್ತವ್ಯವಾಗಿದೆ ಎಂದು ಹೇಳಿದರು.

ನಾಗಮಾರಪಳ್ಳಿ ಪ್ರೌಢಶಾಲೆಯ ಶಿಕ್ಷಕ ಜಗನ್ನಾಥ ದೇಶಮುಖ ವಿಶೇಷ ಉಪನ್ಯಾಸ ನೀಡಿದರು. ಕಸಾಪ ತಾಲ್ಲೂಕು ಅಧ್ಯಕ್ಷ ಬಾಲಾಜಿ ಅಮರವಾಡಿ ಮಾತ ನಾಡಿ, ಔರಾದ್‌(ಬಿ) ಇತಿಹಾಸಕ್ಕೆ ಸಂಬಂಧಿಸಿದ ಅಮರೇಶ್ವರ ದೇವಸ್ಥಾನದಲ್ಲಿರುವ ಶಾಸನಗಳು ನಿರ್ಲಕ್ಷ್ಯಕ್ಕೆ ಒಳಗಾಗಿವೆ. ಅವುಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ತಾಲ್ಲೂಕು ಆಡಳಿತ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.

ತಹಸೀಲ್ದಾರ್ ಮಹೇಶ ಪಾಟೀಲ ಧ್ವಜಾರೋಹಣ ನೆರವೇರಿಸಿದರು. ತಾ.ಪಂ ಅಧಿಕಾರಿ ಕಿರಣ ಪಾಟೀಲ, ಲೋಕೋಪಯೋಗಿ ಇಲಾಖೆಯ ಸಹಾಯಕ ಅಭಿಯಂತರ ಪ್ರೇಮಸಾಗರ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಅಭಿಯಂತರ ಮಾರುತಿ ರಾಠೋಡ, ತಾಲ್ಲೂಕು ಆರೋಗ್ಯಾಧಿಕಾರಿ ಅನೀಲಕುಮಾರ ಎಕಲಾರೆ, ತಾಲ್ಲೂಕು ಪಂಚಾಯತ್ ಸಹಾಯಕ ನಿರ್ದೇಶಕ ಶಿವಕುಮಾರ ಘಾಟೆ, ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಕಾಶ ರಾಠೋಡ, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು, ಶಿಕ್ಷಕರು, ಸಂಘ-ಸಂಸ್ಥೆಗಳ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜ್ಞಾನೇಶ್ ಕುಮಾರ್‌ ಜೈಲಿಗಟ್ಟುತ್ತೇವೆ : ರಾಹುಲ್‌ ಗುಡುಗು
ಕನ್ನಡ ಬಾವುಟಕ್ಕೆ ನಾಡಧ್ವಜ ಸ್ಥಾನಮಾನ: ಸಿಎಂ