ಓದುಗರ ಸಂಖ್ಯೆ ಕಡಿಮೆ, ಸಮಾಜದ ಮೇಲೆ ದುಷ್ಪರಿಣಾಮ: ವಿಜಯ ಸಂಕೇಶ್ವರ

KannadaprabhaNewsNetwork |  
Published : Nov 20, 2024, 12:31 AM IST
17ವಿಜಯ | Kannada Prabha

ಸಾರಾಂಶ

ಗಾಂಧಿ ಮೈದಾನದಲ್ಲಿ ಕೋಟ ಪಂಚವರ್ಣ ಯುವಕ ಮಂಡಲ - ಪಂಚವರ್ಣ ಮಹಿಳಾ ಮಂಡಲ ನೀಡುವ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿಯನ್ನು ಗಾಂಧಿ ಮೈದಾನದಲ್ಲಿ ಕೋಟ ಪಂಚವರ್ಣ ಯುವಕ ಮಂಡಲ - ಪಂಚವರ್ಣ ಮಹಿಳಾ ಮಂಡಲ ನೀಡುವ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಿದರು.

ಕನ್ನಡಪ್ರಭ ವಾರ್ತೆ ಕೋಟ

ಇಂದು ಎಲ್ಲವೂ ಡಿಜಿಟಲ್ ಆಗುತ್ತಿದ್ದು, ಇದರಿಂದ ಪುಸ್ತಕ ಓದುಗರ ಸಂಖ್ಯೆ ಕಡಿಮೆಯಾಗುತ್ತಿದೆ. ಇದು ಸಮಾಜದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ಉದ್ಯಮಿ ಪದ್ಮಶ್ರೀ ವಿಜಯ ಸಂಕೇಶ್ವರ ಆತಂಕ ವ್ಯಕ್ತಪಡಿಸಿದರು.ಅವರು ಶನಿವಾರ ಇಲ್ಲಿನ ಗಾಂಧಿ ಮೈದಾನದಲ್ಲಿ ಕೋಟ ಪಂಚವರ್ಣ ಯುವಕ ಮಂಡಲ - ಪಂಚವರ್ಣ ಮಹಿಳಾ ಮಂಡಲ ನೀಡುವ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು.

ವಿಶೇಷ ಆಹ್ವಾನಿತರಾಗಿ ಆಗಮಿಸಿದ್ದ ಹಿರಿಯ ನಟ ಎಸ್. ದೊಡ್ಡಣ್ಣ ಮಾತನಾಡಿ, ಪಂಚವರ್ಣ ಸಂಸ್ಥೆಯು ತಾಯಿ ಭಾಷೆ ಕನ್ನಡವನ್ನು ಉಳಿಸಿ ಬೆಳೆಸುವ ಜತೆಗೆ ಸಮಾಜಮುಖಿ ಕಾರ್ಯವೇ ರಾಜ್ಯ ಹಾಗೂ ದೇಶಕ್ಕೆ ಮಾದರಿಯಾಗಿದೆ ಎಂದು ಕೊಂಡಾಡಿದರು.ಇದೇ ವೇಳೆ ಕಾರ್ಕಳದ ಸ್ವಚ್ಛ ಬ್ರಿಗೇಡ್‌ಗೆ ವಿಶೇಷ ಪುರಸ್ಕಾರ ಪ್ರದಾನ ಮಾಡಲಾಯಿತು. ಬಹುಮುಖ ಪ್ರತಿಭೆಗಳಾದ ಸುಶ್ಮಿತಾ ಕೃಷ್ಣಮೂರ್ತಿ ಸಾಲಿಗ್ರಾಮ, ಪ್ರಜ್ಞಾ ಗೀತಾ ಪೂಜಾರಿ ಹಂದಟ್ಟು ಅವರಿಗೆ ಬಾಲಪ್ರತಿಭಾ ಪುರಸ್ತಾರ ನೀಡಲಾಯಿತು. ಕಾರ್ಯಕ್ರಮವನ್ನು ಸಮಾಜಸೇವಕ ಆನಂದ್ ಸಿ. ಕುಂದರ್ ಉದ್ಘಾಟಿಸಿದರು. ಮುಂಬೈಯ ಸಮಾಜಸೇವಕ ಬನ್ನಾಡಿ ನಾರಾಯಣ ಆಚಾರ್ ಉಪಸ್ಥಿತರಿದ್ದರು. ಪಂಚವರ್ಣದ ಅಧ್ಯಕ್ಷ ಅಜಿತ್ ಆಚಾರ್ ಅಧ್ಯಕ್ಷತೆ ವಹಿಸಿದ್ದರು.ಅತಿಥಿಗಳಾಗಿ ಲಯನ್ಸ್ ಜಿಲ್ಲಾ ಮಾಜಿ ಗವರ್ನರ್ ಸುರೇಶ್ ಪ್ರಭು, ರಾಜ್ಯ ಕರಕುಶಲ ನಿಗಮದ ಮಾಜಿ ಅಧ್ಯಕ್ಷ ಡಾ.ಬಿ. ರಾಘವೇಂದ್ರ ಶೆಟ್ಟಿ, ಸುಜ್ಞಾನ ಎಜುಕೇಶನ್ ಟ್ರಸ್ಟ್ ಮುಖ್ಯಸ್ಥ ರಮೇಶ್ ಶೆಟ್ಟಿ, ಉದ್ಯಮಿಗಳಾದ ಬಡಾಮನೆ ರತ್ನಾಕರ್ ಶೆಟ್ಟಿ, ಜಯರಾಜ್ ವಿ. ಶೆಟ್ಟಿ, ಕರುಣಾಕರ ಖಲಾಸೆ, ಸಾಂಸ್ಕ್ರತಿಕ ಚಿಂತಕ ಋಷಿರಾಜ್ ಸಾಸ್ತಾನ, ಪಾಂಡೇಶ್ವರ ರಕ್ತೇಶ್ವರಿ ದೇಗುಲದ ಧರ್ಮದರ್ಶಿ ಕೆ.ವಿ. ರಮೇಶ್ ರಾವ್, ಪಂಚವರ್ಣ ಗೌರವಾಧ್ಯಕ್ಷ ಸತೀಶ್ ಎಚ್. ಕುಂದರ್, ಸ್ಥಾಪಾಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಪಂಚವರ್ಣ ಮಹಿಳಾ ಮಂಡಲ ಅಧ್ಯಕ್ಷೆ ಲಲಿತಾ ಪೂಜಾರಿ, ಗೌರವಾಧ್ಯಕ್ಷೆ ಕುಸುಮ ದೇವಾಡಿಗ, ಗೆಳೆಯರ ಬಳಗ ಕಾರ್ಕಡ ಅಧ್ಯಕ್ಷ ಕೆ.ತಾರಾನಾಥ ಹೊಳ್ಳ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.ಪಂಚವರ್ಣದ ಕಾರ್ಯಾಧ್ಯಕ್ಷ ರವೀಂದ್ರ ಕೋಟ ಸ್ವಾಗತಿಸಿದರು. ಶಿಕ್ಷಕರಾದ ಸತೀಶ್ಚಂದ್ರ ಶೆಟ್ಟಿ, ಸಂತೋಷ್ ಕುಮಾರ್ ಕೋಟ ನಿರೂಪಿಸಿದರು. ಪಂಚವರ್ಣದ ಕಾರ್ಯದರ್ಶಿ ಸುಧೀಂದ್ರ ಜೋಗಿ ವಂದಿಸಿದರು. ಪಂಚವರ್ಣ ಮಹಿಳಾ ಮಂಡಲದ ಸಂಚಾಲಕಿ ಸುಜಾತ ಬಾಯರಿ ಸಹರಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''