ಶಿಕಾರಿಪುರ: ಬಿಜೆಪಿಗೆ ನಿಷ್ಠಾವಂತ ಕಾರ್ಯಕರ್ತರು ಬಲಿಷ್ಠ ಶಕ್ತಿಯಾಗಿದ್ದು, ಕಾರ್ಯಕರ್ತರ ಸದೃಢ ಸಂಕಲ್ಪದಿಂದ ಮಾತ್ರ ಚುನಾವಣೆಯಲ್ಲಿ ಪಕ್ಷ ಜಯ ಸಾಧಿಸಲು ಸಾಧ್ಯ. ಈ ದಿಸೆಯಲ್ಲಿ ಬರಲಿರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ನಿಷ್ಠಾವಂತ ಕಾರ್ಯಕರ್ತರಿಗೆ ಸ್ಪರ್ಧಿಸಲು ಅವಕಾಶ ಕಲ್ಪಿಸಿ ತಾಲೂಕು, ಜಿಲ್ಲೆಯನ್ನು ಬಿಜೆಪಿ ಭದ್ರ ಕೋಟೆ ಎಂಬುದನ್ನು ಪುನಃ ಸಾಬೀತುಪಡಿಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಶಾಸಕ ಬಿ.ವೈ.ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.
ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, ಸಹಕಾರಿ ಕ್ಷೇತ್ರದಿಂದ ರಾಜಕೀಯ ಜೀವನ ಆರಂಭಿಸಿದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು, ನಾಲ್ಕು ಬಾರಿ ಮುಖ್ಯಮಂತ್ರಿಯಾಗಿದ್ದು ಸಂಘಟನೆಯಿಂದ ಎಂದ ಅವರು, ಬರಲಿರುವ ಟಿಎಪಿಸಿಎಂಎಸ್ ಚುನಾವಣೆಯನ್ನು ಸಂಕಟನಾತ್ಮಕವಾಗಿ ಎದುರುಸಿ ಎಲ್ಲರೂ ಜಯ ಸಾಧಿಸಬೇಕು ಎಂದರು.
ಕಳೆದ 40 ವರ್ಷಗಳಿಂದ ತಾಲೂಕಿನ ಟಿಎಪಿಸಿಎಂಎಸ್ ಬಿಜೆಪಿ ಬೆಂಬಲಿತ ಸದಸ್ಯರ ವಶದಲ್ಲಿದ್ದು ಪುನಃ ಉಳಿಸಿಕೊಳ್ಳುವ ಜವಾಬ್ದಾರಿ ಎಲ್ಲರ ಮುಂದಿದೆ ಎಂದು ಹೇಳಿದರು.ಇದೇ ವೇಳೆ ಜಿಲ್ಲಾ ಸಹಕಾರಿ ಯೂನಿಯನ್ ಚುನಾವಣೆಯಲ್ಲಿ ಜಯಗಳಿಸಿದ ಹಾಗೂ ಪರಾಜಿತ ಅಭ್ಯರ್ಥಿಗಳನ್ನು ಸನ್ಮಾನಿಸಲಾಯಿತು.ತಾ.ಬಿಜೆಪಿ ಅಧ್ಯಕ್ಷ ಹನುಮಂತಪ್ಪ ಸಂಕ್ಲಾಪುರ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಎಂಎಡಿಬಿ ಮಾಜಿ ಅಧ್ಯಕ್ಷ ಗುರುಮೂರ್ತಿ, ಪುರಸಭಾ ಅಧ್ಯಕ್ಷೆ ಸುನಂದ ಮಂಜುನಾಥ್, ಜಿಪಂ ಮಾಜಿ ಸದಸ್ಯ ಹಾಲಪ್ಪ, ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಚನ್ನವೀರಪ್ಪ, ಮಾಹಿತಿ ಹಕ್ಕು ಆಯೋಗದ ನಿವೃತ್ತ ಆಯುಕ್ತ ಕೆ.ಪಿ.ಮಂಜುನಾಥ್, ಹಿರಿಯ ಸ್ವಯಂಸೇವಕ ಎಸ್.ಬಿ.ಮಠದ್, ಡಾ.ಬಿ.ಡಿ.ಭೂಕಾಂತ್, ಅಗಡಿ ಅಶೋಕ್, ಡಿ.ಎಲ್.ಬಸವರಾಜ್, ರುದ್ರಮನಿ, ಶಿವಪ್ಪ ಬಿಎಸ್‌ಎನ್‌ಎಲ್ ಮತ್ತಿತರರು ಉಪಸ್ಥಿತರಿದ್ದರು.