ಸುಳ್ಳು ಹೇಳುವುದೇ ಬಿಜೆಪಿ ನಾಯಕರ ಹವ್ಯಾಸ: ಸಚಿವ ತಂಗಡಗಿ

KannadaprabhaNewsNetwork |  
Published : May 18, 2025, 01:05 AM IST
ಪೋಟೊ17ಕೆಎಸಟಿ3: ಕುಷ್ಟಗಿ ಪಟ್ಟಣದ ಅಮರೇಗೌಡ ಬಯ್ಯಾಪೂರ ನಿವಾಸದಲ್ಲಿ ಸಚಿವರಾದ ಶಿವರಾಜ ತಂಗಡಗಿ, ಎನ್ ಎಸ್ ಭೋಸರಾಜ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು | Kannada Prabha

ಸಾರಾಂಶ

ಕಾಂಗ್ರೆಸ್‌ ಸರ್ಕಾರದ ಸಾಧನೆ ಅರಗಿಸಿಕೊಳ್ಳದ ಬಿಜೆಪಿಯ ನಾಯಕರು ಇಲ್ಲಸಲ್ಲದ ಆರೋಪ ಮಾಡುತ್ತಾ ಜನರ ದಿಕ್ಕು ತಪ್ಪಿಸುತ್ತಿದ್ದಾರೆ. ಆದರೆ, ಸರ್ಕಾರ ನುಡಿದಂತೆ ನಡೆಯುತ್ತಿದ್ದು ಗ್ಯಾರಂಟಿ ಯೋಜನೆ ಅನುಷ್ಠಾನ ಮಾಡಿದೆ. ಇದನ್ನು ಸಹಿಸಿಕೊಳ್ಳದೆ ಆರೋಪ ಮಾಡಲಾಗುತ್ತಿದೆ.

ಕುಷ್ಟಗಿ:

ಕಾಂಗ್ರೆಸ್‌ ಸರ್ಕಾರದ ಅಭಿವೃದ್ಧಿ ಕಾರ್ಯ ಸಹಿಸಿಕೊಳ್ಳದ ಬಿಜೆಪಿ ನಾಯಕರಿಗೆ ಸುಳ್ಳು ಹೇಳುವುದೇ ಹವ್ಯಾಸವಾಗಿದೆ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದರು.

ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರದ ಸಾಧನೆ ಅರಗಿಸಿಕೊಳ್ಳದ ಬಿಜೆಪಿಯ ನಾಯಕರು ಇಲ್ಲಸಲ್ಲದ ಆರೋಪ ಮಾಡುತ್ತಾ ಜನರ ದಿಕ್ಕು ತಪ್ಪಿಸುತ್ತಿದ್ದಾರೆ. ಆದರೆ, ಸರ್ಕಾರ ನುಡಿದಂತೆ ನಡೆಯುತ್ತಿದ್ದು ಗ್ಯಾರಂಟಿ ಯೋಜನೆ ಅನುಷ್ಠಾನ ಮಾಡಿದೆ. ಇದನ್ನು ಸಹಿಸಿಕೊಳ್ಳದೆ ಆರೋಪ ಮಾಡಲಾಗುತ್ತಿದೆ ಎಂದು ಕಿಡಿಕಾರಿದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಸರ್ಕಾರದ ಬಳಿ ಸಾಕಷ್ಟು ಅನುದಾನವಿದ್ದು ಅಭಿವೃದ್ಧಿ ವಿಚಾರದಲ್ಲಿ ಯಾವುದೇ ಹಿಂದೇಟು ಹಾಕುವ ಪ್ರಶ್ನಿಯೇ ಇಲ್ಲ. ಬಜೆಟ್‌ನಲ್ಲಿ ಕಲ್ಯಾಣ ಕರ್ನಾಟಕ ಭಾಗಕ್ಕ ₹ 5000 ಕೋಟಿ ಮೀಸಲು ಇಡಲಾಗಿದೆ. ಪ್ರತಿ ವರ್ಷ ಒಂದು ಕ್ಷೇತ್ರಕ್ಕೆ ₹ 200 ಕೋಟಿ ಅನುದಾನ ನೀಡಲಾಗುತ್ತಿದೆ, ನಮ್ಮ ಸರ್ಕಾರದಲ್ಲಿ 150 ಹಾಸ್ಟೆಲ್ ಮಂಜೂರಾತಿ ಮಾಡಲಾಗಿದೆ. ಕಲ್ಯಾಣ ಕರ್ನಾಟಕ ವ್ಯಾಪ್ತಿಯಲ್ಲಿ ದೇವದುರ್ಗ ಬಿಟ್ಟರೆ ಕುಷ್ಟಗಿಗೆ ಹೆಚ್ಚು ಅನುದಾನ ಕೊಡಲಾಗಿದೆ. ಬಿಜೆಪಿ ಶಾಸಕರು ಅಭಿವೃದ್ಧಿ ವಿಚಾರದಲ್ಲಿ ಅನುದಾನ ಕೊಡುತ್ತಿಲ್ಲ ಎನ್ನುವುದು ಸತ್ಯಕ್ಕೆ ದೂರವಾದ ಮಾತು ಎಂದ ಅವರು, ಕೇವಲ ಸುಳ್ಳು ಹೇಳುವುದು ಹಾಗೂ ಸರ್ಕಾರದ ದೂಷಣೆ ಮಾಡುವುದೇ ಅವರ ಒಂದು ಹವ್ಯಾಸವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಣ್ಣ ನೀರಾವರಿ ಇಲಾಖೆಯ ಸಚಿವ ಎನ್‌.ಎಸ್. ಬೋಸರಾಜ ಮಾತನಾಡಿ, ಕೆರೆ ತುಂಬಿಸುವ ಕಾರ್ಯವೂ ರಾಷ್ಟ್ರೀಯ ಹೆದ್ದಾರಿ ಮಾರ್ಗ ಸೂಚಿಯನ್ವಯ ಹಾಗೂ ರೈತರ ತಕರಾರು ತೊಂದರೆ ಹಾಗೂ ಸರ್ವೇ ಕಾರ್ಯ, ಅರಣ್ಯ ಇಲಾಖೆಯ ನಿಯಮಗಳು ಸೇರಿದಂತೆ ಅನೇಕ ತೊಡಕುಗಳಿಂದಾಗಿ ಕೆರೆ ತುಂಬಿಸುವುದು ಸ್ವಲ್ಪ ವಿಳಂಬವಾಗುತ್ತಿದೆ. ಈ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ಇನ್ನೊಂದು ವಾರದಲ್ಲಿ ಎಲ್ಲ ಸಮಸ್ಯೆ ನಿವಾರಣೆಯಾಗುವ ಲಕ್ಷಣಗಳಿದ್ದು ಶೀಘ್ರದಲ್ಲಿ ಕಾಮಗಾರಿ ಮುಗಿಸಿಕೊಡಲಾಗುತ್ತದೆ ಎಂದರು.

ಈ ವೇಳೆ ಮಾಜಿ ಸಚಿವ ಅಮರೇಗೌಡ ಬಯ್ಯಾಪುರ, ಕಾಡಾ ನಿಗಮ ಅಧ್ಯಕ್ಷ ಹಸನಸಾಬ್‌ ದೋಟಿಹಾಳ ಇದ್ದರು.

PREV

Recommended Stories

ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ