ಕನ್ನಡಪ್ರಭ ವಾರ್ತೆ ವಿಜಯಪುರ
ತಿಕೋಟಾ ತಾಲೂಕಿನ ಬಿಜ್ಜರಗಿ ಗ್ರಾಮದಲ್ಲಿ ಭಾನುವಾರ ಜರುಗಿದ ಹಂಜಗಿಸಿದ್ಧೇಶ್ವರ, ಹಿರೋಡೇಶ್ವರ ಮೂರ್ತಿ ಪ್ರತಿಷ್ಠಾಪನೆ, ಕಳಸಾರೋಹಣ ಹಾಗೂ ಕನಕದಾಸ ಸರ್ಕಲ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸಚಿವ ಎಂ.ಬಿ. ಪಾಟೀಲರು ಸಮರ್ಥ ನಾಯಕರಾಗಿದ್ದು, ಜಲಸಂಪನ್ಮೂಲ ಸಚಿವರಾಗಿದ್ದಾಗ ಸಾವಿರಾರು ಕೋಟಿ ರೂಪಾಯಿ ಖರ್ಚು ಮಾಡಿ ಈ ಭಾಗದ ರೈತರ ಬಾಳಿಗೆ ಬೆಳಕಾಗಿದ್ದಾರೆ. ಕೊಟ್ಟ ಖಾತೆಗಳನ್ನು ಸಮರ್ಥವಾಗಿ ನಿಭಾಯಿಸಿ ಅಭಿವೃದ್ಧಿ ಮಾಡುತ್ತಾರೆ. ಈಗ ಕೈಗಾರಿಕೆ ಸಚಿವರಾಗಿ ವಿದೇಶಗಳಿಂದ ಬಂಡವಾಳ ಹೂಡಿಕೆದಾರರನ್ನು ರಾಜ್ಯಕ್ಕೆ ಕರೆತರುತ್ತಿದ್ದಾರೆ ಎಂದು ಹೇಳಿದರು.
ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಮಾತನಾಡಿ, ನಡೆದಾಡುವ ದೇವರು ಸಿದ್ದೇಶ್ವರ ಸ್ವಾಮೀಜಿಗಳ ತತ್ವಾದರ್ಶಗಳು ನಮಗೆಲ್ಲ ಮಾದರಿಯಾಗಿದ್ದು, ಅವರು ಹಾಕಿಕೊಟ್ಟ ಮಾರ್ಗದಲ್ಲಿ ಮುಡೆಯುತ್ತಿದ್ದೇವೆ. ಬಿಜ್ಜರಗಿ ಸಿದ್ದೇಶ್ವರ ಸ್ವಾಮೀಜಿಗಳ ಜನ್ಮಭೂಮಿಯಾಗಿದ್ದು, ಸ್ವಾಮೀಜಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಿದ್ದ ತತ್ವಾದರ್ಶಗಳು ನಮಗೆ ಸದಾ ಪ್ರೇರಣೆಯಾಗಿದೆ. ನಮ್ಮ ಮನಸ್ಸು, ಮನೆ, ಓಣಿ, ಗ್ರಾಮ ಸ್ವಚ್ಛವಾಗಿರಬೇಕು ಎಂದು 50 ವರ್ಷಗಳ ಕಾಲ ಪ್ರವಚನಗಳ ಮೂಲಕ ಸ್ವಾಮೀಜಿಗಳು ಪ್ರತಿಪಾದಿಸಿದ್ದ ನೈರ್ಮಲ್ಯವನ್ನು ಕೇಂದ್ರ ಸರಕಾರ ಸ್ವಚ್ಛ ಭಾರತ ಹೆಸರಿನಲ್ಲಿ ಜಾರಿಗೆ ತಂದಿತು. ಸ್ವಾಮೀಜಿಗಳ ತತ್ವ ಸಿದ್ಧಾಂತಗಳು, ಬಸವ, ಕನಕರ ಚಿಂತನೆಗಳಡಿ ಸಿದ್ದರಾಮಯ್ಯನವರು ಸಿಎಂ ಆಗಿದ್ದಾಗ ಜನಕಲ್ಯಾಣ ಯೋಜನೆಗಳನ್ನು ಜಾರಿಗೆ ತಂದರು. ಶ್ರೀಗಳ ಆಶಯದಂತೆ ಈ ಭಾಗದಲ್ಲಿ ನಾನು ಜಲಸಂಪನ್ಮೂಲ ಸಚಿವನಾಗಿದ್ದಾಗ ಅಂದಿನ ಸಿಎಂ ಸಿದ್ದರಾಮಯ್ಯನವರು ಸಂಪೂರ್ಣ ಸಹಕಾರ ನೀಡಿದ್ದರಿಂದ ಜಲಕ್ರಾಂತಿ ಮಾಡಲು ಸಾಧ್ಯವಾಯಿತು. ಈ ಕಾರ್ಯಕ್ರಮಕ್ಕೆ ಅನಿವಾರ್ಯ ಕಾರಣಗಳಿಂದ ಸಿದ್ದರಾಮಯ್ಯನವರು ಬಂದಿಲ್ಲ. ಆದರೆ, ಅವರ ಪುತ್ರ ಮತ್ತು ಸಚಿವ ಯತೀಂದ್ರ ಸಿದ್ದರಾಮಯ್ಯ ಪಾಲ್ಗೊಂಡಿದ್ದಾರೆ. ಬಿಜ್ಜರಗಿ ಗ್ರಾಮಸ್ಥರ ದೈವಭಕ್ತಿಯಿಂದಾಗಿ ಈ ಕಾರ್ಯಕ್ರಮ ವಿಜೃಂಭಣೆಯಿಂದ ನಡೆದಿದೆ ಎಂದು ಹೇಳಿದರು.ವಿವಿಧ ಮಠಾಧೀಶರಾದ ರೇವಣಸಿದ್ದೇಶ್ವರ ಶಾಂತಮಯ ಸ್ವಾಮೀಜಿ, ಸಿದ್ದಯೋಗಿ ಅಮರೇಶ್ವರ ಮಹಾರಾಜರು, ಮಾಳಿಂಗರಾಯ ಮಹಾರಾಜರು, ಅಡಿವೆಪ್ಪ ಮಹಾರಾಜರು, ಸೋಮೇಶ್ವರ ಮಹಾರಾಜರು, ಹೂವಣ್ಣ ಪೂಜಾರಿ, ಮಾಯಣ್ಣ ಪೂಜಾರಿ, ವಿಡಿಎ ಅಧ್ಯಕ್ಷ ಡಾ.ಗಂಗಾಧರ ಸಂಬಣ್ಣಿ, ಮುಖಂಡರಾದ ಸೋಮನಾಥ ಬಾಗಲಕೋಟ, ಬಿ.ಡಿ. ಪಾಟೀಲ ಹಂಜಗಿ, ಭೀಮರಾಯ ಮಸಳಿ, ಎ.ಎಂ. ಪಾಟೀಲ, ಎಂ.ಎಸ್. ಲೋಣಿ, ಆರ್.ಎಂ. ಮೆಂಡೆಗಾರ, ಮುದುಕು ಶಿಗ್ಗಾಂವಿ, ಸಾಬು ಕೆಂಪರಾಯಪ್ಪಗೋಳ, ಮಲ್ಲಪ್ಪ ಹಿರೇಕುರಬರ ಉಪಸ್ಥಿತರಿದ್ದರು.