ಎಂ.ಬಿ.ಪಾಟೀಲ ನಮ್ಮ ಹೆಮ್ಮೆ: ಬಕ್ಷಿ

KannadaprabhaNewsNetwork |  
Published : Jun 06, 2026, 03:00 AM IST
ನಮ್ಮ ಎಂ.ಬಿ.ಪಾಟೀಲ ನಮ್ಮ ಹೆಮ್ಮೆ: ಸೈಯ್ಯದ ಜಮೀರಅಹಮ್ಮದ ಬಕ್ಷಿ | Kannada Prabha

ಸಾರಾಂಶ

ವಿಜಯಪುರ: ಎಂ.ಬಿ.ಪಾಟೀಲರು ಜಲಸಂಪನ್ಮೂಲ ಸಚಿವರಾಗಿದ್ದಾಗ ಕಾಲುವೆಗಳನ್ನು ನಿರ್ಮಿಸಿ, ಕೆರೆಗಳನ್ನು ತುಂಬಿಸುವ ಮೂಲಕ ಜಿಲ್ಲೆಗೆ ಸಮಗ್ರ ನೀರಾವರಿ ಕಲ್ಪಿಸಿದ್ದಾರೆ. ಇದರಿಂದಾಗಿ ಇಂದು ರೈತರು ಉತ್ತಮ ಜೀವನ ಕಟ್ಟಿಕೊಳ್ಳಲು ಅನುಕೂಲವಾಗಿದೆ ವಿಜಯಪುರ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸೈಯ್ಯದ ಜಮೀರ ಅಹಮ್ಮದ ಬಕ್ಷಿ ಹೇಳಿದರು.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಬಳಿಕ ಗೃಹ ಸಚಿವರಾದಾಗಲೂ ಪೊಲೀಸ್ ಇಲಾಖೆಯಲ್ಲಿ ಉತ್ತಮ ಬದಲಾವಣೆಗಳನ್ನು ತಂದು ಸಿಬ್ಬಂದಿಗೆ ಅನುಕೂಲ ಕಲ್ಪಿಸಿದರು. ನಂತರದಲ್ಲಿ ಕೈಗಾರಿಕೆ ಹಾಗೂ ಮೂಲಸೌಕರ್ಯಗಳ ಅಭಿವೃದ್ಧಿ ಸಚಿವರಾಗಿ ವಿಮಾನ ನಿಲ್ದಾಣ, ಸೈಕ್ಲಿಂಗ್ ವೆಲೋಡ್ರೋಮ್ ಸೇರಿದಂತೆ ಹಲವು ಕೈಗಾರಿಕೆಗಳನ್ನು ಸ್ಥಾಪಿಸಲು ಶ್ರಮಿಸಿದ್ದಾರೆ. ಎಂ.ಬಿ.ಪಾಟೀಲರು ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದು, ಇದೀಗ ನಾಲ್ಕನೇ ಬಾರಿ ಸಚಿವರಾಗಿದ್ದು ನಮಗೆಲ್ಲ ಹೆಮ್ಮೆಯ ವಿಚಾರವಾಗಿದೆ. ಸಚಿವರಾದ ಬಳಿಕ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸುತ್ತಿರುವ ಅವರಿಗೆ ಹಾರ್ದಿಕ ಸ್ವಾಗತ. ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರ ಸಂಪುಟದಲ್ಲಿ ಮತ್ತಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಲೆಂದು ಹೃದಯಪೂರ್ವಕವಾಗಿ ಹಾರೈಸುತ್ತೇವೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅತಿಥಿ ತಂದು ಕೊಟ್ಟಿದ್ದ ಮಾವಿನ ಹಣ್ಣು ಸೇವಿಸಿ ಇಬ್ಬರು ಬಾಲಕಿಯರು ಸಾವು!
ಮೆಡಿಕಲ್‌ ಸೀಟು ಶುಲ್ಕ ಈ ವರ್ಷ ಹೆಚ್ಚಿಸದಿರಲು ಸರ್ಕಾರ ನಿರ್ಧಾರ