ಬಿಡದಿ ಟೌನ್ ಶಿಪ್ ವಿರೋಧಿಸಿ ಪಾದಯಾತ್ರೆಗೆ ಎಂ.ಎಂ.ಫೌಂಡೇಶನ್ ಬೆಂಬಲ

KannadaprabhaNewsNetwork |  
Published : Aug 11, 2026, 01:45 AM IST
10ಕೆಎಂಎನ್ 32 | Kannada Prabha

ಸಾರಾಂಶ

ಸಾವಿರಾರು ವರ್ಷಗಳಿಂದ ಕೃಷಿಯನ್ನೇ ಬದುಕಾಗಿಸಿಕೊಂಡ ರೈತರ ಹಕ್ಕು ರಕ್ಷಿಸಬೇಕು. ಹೀಗಾಗಿ ರೈತರು, ಜೆಡಿಎಸ್ ಪಾದಯಾತ್ರೆ ಬೆಂಬಲ ವ್ಯಕ್ತಪಡಿಸಿ ಎರಡನೇ ದಿನದ ಪಾದಯಾತ್ರೆಯಲ್ಲಿ ಫೌಂಡೇಶನ ಅಧ್ಯಕ್ಷ ಮಹಾಲಿಂಗೇಗೌಡ ಮುದ್ದನಘಟ್ಟ ಹಾಗೂ ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಿದ್ದರು.

ಕನ್ನಡಪ್ರಭ ವಾರ್ತೆ ಮಂಡ್ಯ

ಬಿಡದಿ ಟೌನ್‌ಶಿಪ್ ವಿರೋಧಿಸಿ ರೈತರು, ಜೆಡಿಎಸ್ ಪಕ್ಷದ ವತಿಯಿಂದ ಹಮ್ಮಿಕೊಂಡಿರುವ ಬೆಂಗಳೂರಿನವರೆಗೆ ಪಾದಯಾತ್ರೆಗೆ ಎಂ.ಎಂ.ಫೌಂಡೇಶನ್ ಬೆಂಬಲ ವ್ಯಕ್ತಪಡಿಸಿ ಪಾಲ್ಗೊಂಡಿತು.

ಸಾವಿರಾರು ವರ್ಷಗಳಿಂದ ಕೃಷಿಯನ್ನೇ ಬದುಕಾಗಿಸಿಕೊಂಡ ರೈತರ ಹಕ್ಕು ರಕ್ಷಿಸಬೇಕು. ಹೀಗಾಗಿ ರೈತರು, ಜೆಡಿಎಸ್ ಪಾದಯಾತ್ರೆ ಬೆಂಬಲ ವ್ಯಕ್ತಪಡಿಸಿ ಎರಡನೇ ದಿನದ ಪಾದಯಾತ್ರೆಯಲ್ಲಿ ಫೌಂಡೇಶನ ಅಧ್ಯಕ್ಷ ಮಹಾಲಿಂಗೇಗೌಡ ಮುದ್ದನಘಟ್ಟ ಹಾಗೂ ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಿದ್ದರು.

ಸಾವಿರಾರು ವರ್ಷಗಳಿಂದ ಭೂಮಿ ನಂಬಿ ಕೃಷಿ ಮಾಡಿಕೊಂಡು ಬಂದಿರುವ ರೈತರು ಕೇವಲ ಭೂಮಿ ಮಾಲೀಕರಲ್ಲ. ನಮ್ಮ ಅನ್ನದಾತರು. ದೇಶದ ಆಹಾರ ಭದ್ರತೆಯ ಬೆನ್ನೆಲುಬು. ರೈತರ ಕೃಷಿಭೂಮಿ ಹಾಗೂ ಬದುಕಿನ ಮೇಲೆ ಪರಿಣಾಮ ಬೀರುವ ಯಾವುದೇ ಅಭಿವೃದ್ಧಿ ಯೋಜನೆಯನ್ನು ಜಾರಿಗೆ ತರುವ ಮುನ್ನ ಅವರ ಹಿತಾಸಕ್ತಿಯನ್ನು ಮೊದಲ ಆದ್ಯತೆಯಾಗಿ ಪರಿಗಣಿಸಬೇಕು ಎಂದು ಎಂ.ಎಂ.ಫೌಂಡೇಶನ್‌ ಒತ್ತಾಯಿಸಿತು.

ಬಿಡದಿ ಟೌನ್‌ಶಿಪ್‌ ಯೋಜನೆಗೆ ರೈತರು, ಸ್ಥಳೀಯರ ಸಮಸ್ಯೆಯನ್ನು ಸರ್ಕಾರ ಮುಕ್ತ ಮನಸ್ಸಿನಿಂದ ಆಲಿಸಬೇಕು. ರೈತರ ಒಪ್ಪಿಗೆ, ನ್ಯಾಯಸಮ್ಮತ ಪರಿಹಾರ, ಪುನರ್ವಸತಿ ಮತ್ತು ಅವರ ಭವಿಷ್ಯದ ಜೀವನೋಪಾಯಕ್ಕೆ ಭದ್ರತೆ ಕಲ್ಪಿಸದೆ ಯಾವುದೇ ನಿರ್ಧಾರ ಕೈಗೊಳ್ಳಬಾರದು ಎಂದು ಆಗ್ರಹಿಸಿತು.

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಮಾರ್ಗದರ್ಶನದೊಂದಿಗೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಮತ್ತು ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆಯುತ್ತಿರುವ ಪಾದಯಾತ್ರೆಯಲ್ಲಿ ಪಾಲ್ಗೊಳ್ಳುತ್ತಿರುವುದಾಗಿ ಮಹಾಲಿಂಗೇಗೌಡ ತಿಳಿಸಿದರು.

ರೈತ ಉಳಿದರೆ ಕೃಷಿ ಉಳಿಯುತ್ತದೆ, ಕೃಷಿ ಉಳಿದರೆ ಅನ್ನ ಉಳಿಯುತ್ತದೆ, ಅನ್ನ ಉಳಿದರೆ ದೇಶ ಉಳಿಯುತ್ತದೆ. ರೈತರ ಕಣ್ಣೀರು ಸುರಿಯುವ ಅಭಿವೃದ್ಧಿ ನಮಗೆ ಬೇಡ, ರೈತರ ಬದುಕು ಉಳಿಸುವ, ಭವಿಷ್ಯದ ಪೀಳಿಗೆಗೆ ಆಹಾರ ಭದ್ರತೆ ನೀಡುವ ಅಭಿವೃದ್ಧಿ ಬೇಕು ಎಂದು ಒತ್ತಾಯಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಂತಾರಾಷ್ಟ್ರೀಯ ಕರಾಟೆ ಸ್ಪರ್ಧೆಯಲ್ಲಿ ಹಾಸನದ ಕ್ರೀಡಾಪಟುಗಳ ಸಾಧನೆ
ಕನಿಷ್ಠ ವೇತನ ಪರಿಷ್ಕರಣೆ ಆದೇಶ ತಕ್ಷಣ ಜಾರಿಯಾಗಲಿ