ಫಸಲ್ ಬಿಮಾ ಯೋಜನೆ: ಗರಿಷ್ಠ ನೋಂದಣಿಗೆ ಜಿಲ್ಲಾಧಿಕಾರಿ ಕರೆ

KannadaprabhaNewsNetwork |  
Published : Jul 08, 2026, 02:15 AM IST
ರೈತರಿಗೆ ಸಮಗ್ರ ಮಾಹಿತಿ ನೀಡುವ ಜಾಗೃತಿ ಪೋಸ್ಟರ್‌ ಬಿಡುಗಡೆಗೊಳಿಸಲಾಯಿತು. | Kannada Prabha

ಸಾರಾಂಶ

ಜಿಲ್ಲೆಯ ಅರ್ಹ ರೈತರೆಲ್ಲರೂ 2026ನೇ ಸಾಲಿನ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ನೋಂದಣಿ ಮಾಡಿಕೊಳ್ಳುವ ಮೂಲಕ ಈ ಮಹತ್ವಾಕಾಂಕ್ಷಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು.

ಫಸಲ್ ಬಿಮಾ ಯೋಜನೆ ಕುರಿತು ಸಮಗ್ರ ಮಾಹಿತಿ ನೀಡುವ ಜಾಗೃತಿ ಪೋಸ್ಟರ್‌ ಬಿಡುಗಡೆ

ಕನ್ನಡಪ್ರಭ ವಾರ್ತೆ ಕಾರವಾರ

ಜಿಲ್ಲೆಯ ಅರ್ಹ ರೈತರೆಲ್ಲರೂ 2026ನೇ ಸಾಲಿನ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ನೋಂದಣಿ ಮಾಡಿಕೊಳ್ಳುವ ಮೂಲಕ ಈ ಮಹತ್ವಾಕಾಂಕ್ಷಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಕರೆ ನೀಡಿದರು.

ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ವಿಶೇಷ ಕಾರ್ಯಕ್ರಮದಲ್ಲಿ ಪ್ರಸಕ್ತ ಸಾಲಿನ ಫಸಲ್ ಬಿಮಾ ಯೋಜನೆಯ ಕುರಿತು ರೈತರಿಗೆ ಸಮಗ್ರ ಮಾಹಿತಿ ನೀಡುವ ಜಾಗೃತಿ ಪೋಸ್ಟರ್‌ ಬಿಡುಗಡೆಗೊಳಿಸಿ ಮಾತನಾಡಿದರು.

ನೈಸರ್ಗಿಕ ವಿಕೋಪಗಳಿಂದ ಉಂಟಾಗುವ ಬೆಳೆಹಾನಿ ಹಾಗೂ ಆರ್ಥಿಕ ನಷ್ಟದಿಂದ ಅನ್ನದಾತರನ್ನು ರಕ್ಷಿಸಲು ಈ ಯೋಜನೆಯು ಅತ್ಯಂತ ಸಹಕಾರಿಯಾಗಿದೆ ಎಂದು ವಿವರಿಸಿದರು. ಇದೇ ವೇಳೆ ಸಂಬಂಧಿತ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಅವರು, ಕೃಷಿ ಇಲಾಖೆ ಹಾಗೂ ವಿಮಾ ಕಂಪನಿಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸುವ ಮೂಲಕ ಜಿಲ್ಲೆಯ ಗರಿಷ್ಠ ಸಂಖ್ಯೆಯ ರೈತರನ್ನು ಈ ಯೋಜನೆಯ ವ್ಯಾಪ್ತಿಗೆ ತರಬೇಕು ಮತ್ತು ನೋಂದಣಿ ಪ್ರಕ್ರಿಯೆಯನ್ನು ಮತ್ತಷ್ಟು ಚುರುಕುಗೊಳಿಸಬೇಕು ಎಂದು ನಿರ್ದೇಶನ ನೀಡಿದರು.

2026ನೇ ಸಾಲಿನಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸುವ ಮಹತ್ವದ ಜವಾಬ್ದಾರಿಯನ್ನು ಇಪ್ಕೋ ಟೋಕಿಯೋ ವಿಮಾ ಕಂಪನಿಗೆ ವಹಿಸಲಾಗಿದೆ ಎಂಬ ಮಾಹಿತಿಯನ್ನು ಈ ಸಂದರ್ಭದಲ್ಲಿ ಹಂಚಿಕೊಳ್ಳಲಾಯಿತು.

ಈ ಸಂದರ್ಭ ಜಿಪಂ ಸಿಇಒ ಡಾ. ದಿಲೀಷ್ ಶಶಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್., ಜಿಪಂ ಮುಖ್ಯ ಯೋಜನಾಧಿಕಾರಿ ಸೋಮಶೇಖರ್ ಮೆಸ್ತಾ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವಪ್ರಸಾದ್ ಗಾಂವ್ಕರ್, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕ ಮಂಜುನಾಥ್ ರೇವಣಕರ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಉಮೇಶ್ ಉಪಸ್ಥಿತರಿದ್ದರು.

ಇವರೊಂದಿಗೆ ಇಪ್ಕೋ ಟೋಕಿಯೋ ವಿಮಾ ಕಂಪನಿಯ ಉತ್ತರ ಕನ್ನಡ ಜಿಲ್ಲಾ ಸಂಯೋಜಕ ರವೀಂದ್ರ ಮೊಗವೀರ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೆಪಿಟಿಸಿಎಲ್ ಗ್ರಿಡ್ ನಿರ್ಮಾಣಕ್ಕೆ ಭೂಮಿ ನೀಡಿದ ರೈತರಿಗೆ ಪರಿಹಾರ ನೀಡಲು ಆಗ್ರಹ
ಎಸ್ಸಿ, ಎಸ್ಟಿ ಅಭಿವೃದ್ಧಿ ಅನುದಾನ ಸದ್ಬಳಕೆಯಾಗಲಿ: ಶ್ರೀಧರ್ ಚಿನಗುಂಡಿ