ಉಡುಪಿ: ಮಸಾಲೆ ಪುಡಿ ತಯಾರಿ ತರಬೇತಿ ಸಂಪನ್ನ

KannadaprabhaNewsNetwork |  
Published : May 29, 2026, 02:45 AM IST
27ಮಸಾಲೆ | Kannada Prabha

ಸಾರಾಂಶ

ಮಣಿಪಾಲದ ಭಾರತೀಯ ವಿಕಾಸ ಟ್ರಸ್ಟ್, ತೆಂಕನಿಡಿಯೂರು ಗ್ರಾಮ ಪಂಚಾಯಿತಿ ಮತ್ತು ಪ್ರಗತಿ ಸಂಜೀವಿನಿ ಒಕ್ಕೂಟದ ಸಹಯೋಗದಲ್ಲಿ ತೆಂಕನಿಡಿಯೂರು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ 6 ದಿನಗಳ ಮಸಾಲೆ ಪುಡಿ ತಯಾರಿಕಾ ತರಬೇತಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

ಉಡುಪಿ: ಮಣಿಪಾಲದ ಭಾರತೀಯ ವಿಕಾಸ ಟ್ರಸ್ಟ್, ತೆಂಕನಿಡಿಯೂರು ಗ್ರಾಮ ಪಂಚಾಯಿತಿ ಮತ್ತು ಪ್ರಗತಿ ಸಂಜೀವಿನಿ ಒಕ್ಕೂಟದ ಸಹಯೋಗದಲ್ಲಿ ತೆಂಕನಿಡಿಯೂರು ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ 6 ದಿನಗಳ ಮಸಾಲೆ ಪುಡಿ ತಯಾರಿಕಾ ತರಬೇತಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ದಯಾನಂದ ಬೆನ್ನೂರು ಅವರು ತರಬೇತಿಯಲ್ಲಿ ಭಾಗವಹಿಸಿದ ಮಹಿಳೆಯರಿಗೆ ಪ್ರಮಾಣ ಪತ್ರಗಳನ್ನು ವಿತರಿಸಿ, ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಇಂತಹ ಕೌಶಲ್ಯ ತರಬೇತಿಗಳು ಸಹಕಾರಿಯಾಗಿವೆ ಎಂದು ತಿಳಿಸಿದರು.ಡಿಆರ್‌ಪಿ ರೂಪಶ್ರೀ ಅವರು ಪಿಎಂಎಫ್‌ಎಂಇ ಯೋಜನೆಯ ಕುರಿತು ಮಾಹಿತಿ ನೀಡಿದರು. ಕೃಷಿ ಇಲಾಖೆಯ ಬ್ಲಾಕ್ ಮ್ಯಾನೇಜರ್ ಸಂಜನಾ ಅವರು ರೈತರಿಗೆ ಸರ್ಕಾರದಿಂದ ದೊರೆಯುವ ವಿವಿಧ ಯೋಜನೆಗಳು ಹಾಗೂ ಸೌಲಭ್ಯಗಳ ಕುರಿತು ಉಪನ್ಯಾಸ ನೀಡಿದರು.ಸಂಪನ್ಮೂಲ ವ್ಯಕ್ತಿಯಾಗಿ ಮೋಹಿನಿ ಪೆರ್ಡೂರು ಹಾಗೂ ಭಾರತೀಯ ವಿಕಾಸ ಟ್ರಸ್ಟ್‌ನ ಕಾರ್ಯಕ್ರಮ ಅಧಿಕಾರಿ ಪ್ರತಿಮಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಈ ತರಬೇತಿ ಕಾರ್ಯಕ್ರಮದಿಂದ ಒಟ್ಟು 29 ಮಹಿಳೆಯರು ಪ್ರಯೋಜನ ಪಡೆದರು. ರಾಧಾ ಮತ್ತು ಸಂಜನಾ ಕಾರ್ಯಕ್ರಮ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಲ್ಲಟ ಜೆಸ್ಕಾಂ ಉಪ ಕಚೇರಿಗೆ ಬೆಂಕಿ: ಸಿಬ್ಬಂದಿಗೆ ಹಲ್ಲೆ, ದೂರು
3 ರಾಜ್ಯ ಸಿಎಂಗಳೆದುರು ಇಂದು ಟಿಬಿ ಡ್ಯಾಂ ಗೇಟ್‌ ಉದ್ಘಾಟನೆ