ಅಸಮಾನತೆ ವಿರುದ್ಧ ಹೋರಾಟ ಮಾಡಿದ್ದ ಮಡಿವಾಳ ಮಾಚಿದೇವರು

KannadaprabhaNewsNetwork |  
Published : Feb 02, 2024, 01:03 AM IST
ಚಿತ್ರಶೀರ್ಷಿಕೆ1ಎಂಎಲ್ ಕೆ1ಮೊಳಕಾಲ್ಮುರು ಪಟ್ಟಣದ ತಾಲೂಕುಆಡಳಿತ ಸೌಧದಲ್ಲಿ ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮ ಆಚರಿಸಲಾಯಿತು.  | Kannada Prabha

ಸಾರಾಂಶ

12ನೇ ಶತಮಾನದಲ್ಲಿ ತಾಂಡವಾಡುತ್ತಿದ್ದ ಅನಿಷ್ಟ ಪದ್ಧತಿಗಳ ವಿರುದ್ಧ ಹೋರಾಟ ಮಾಡಿದ್ದ ಬಸವಾದಿ ಶಿವರಣರಲ್ಲಿ ಮಡಿವಾಳ ಮಾಚಿದೇವರು ಒಬ್ಬರು. ಅವರ ತತ್ವಾದರ್ಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು.

ಮೊಳಕಾಲ್ಮುರು: 12ನೇ ಶತಮಾನದಲ್ಲಿ ತಾಂಡವಾಡುತ್ತಿದ್ದ ಅನಿಷ್ಟ ಪದ್ಧತಿಗಳ ವಿರುದ್ಧ ಹೋರಾಟ ಮಾಡಿದ್ದ ಬಸವಾದಿ ಶಿವರಣರಲ್ಲಿ ಮಡಿವಾಳ ಮಾಚಿದೇವರು ಒಬ್ಬರು. ಅವರ ತತ್ವಾದರ್ಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ತಹಸೀಲ್ದಾರ್ ಜಗದೀಶ್ ಹೇಳಿದರು.

ಪಟ್ಟಣದ ತಾಲೂಕು ಆಡಳಿತ ಸೌಧದಲ್ಲಿ ಗುರುವಾರ ಆಯೋಜಿಸಲಾಗಿದ್ದ ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

12ನೇ ಶತಮಾನದಲ್ಲಿ ತಾಂಡವಾಡುತ್ತಿದ್ದ ಅಸಮಾನತೆಯನ್ನು ಬಲವಾಗಿ ವಿರೋಧಿಸಿದ್ದ ಮಡಿವಾಳ ಮಾಚಿದೇವರು ಜಾತಿಯತೆಯನ್ನು ಧಿಕ್ಕರಿಸಿ ಸಮ ಸಮಾಜ ನಿರ್ಮಾಣಕ್ಕಾಗಿ ಶ್ರಮಿಸಿದ್ದರು. ಮೂಢ ನಂಬಿಕೆ ಕಂದಚಾರಗಳನ್ನು ದೂರ ಸರಿಸಿ ಎಲ್ಲರೂ ಸಮಾನರು ಎನ್ನುವುದನ್ನು ಸಾರಿದರು. ಬಸವಾದಿ ಶರಣರ ಹಾದಿಯಲ್ಲಿ ಸಾಗಿದ್ದ ಮಾಚಿದೇವರು ಸಮಾಜವನ್ನು ಜಾಗೃತರನ್ನಾಗಿಸುವ ಕಾರ್ಯ ಮಾಡಿದರು. ಅವರ ತತ್ವಾದರ್ಶಗಳನ್ನು ಪ್ರತಿಯೊಬ್ಬರು ಅರಿತುಕೊಂಡು ಬಾಳಬೇಕೆಂದು ತಿಳಿಸಿದರು.

ಶಿರೆಸ್ತೆದಾರ್ 7 ಕೋಟಿ ರು. ಮಡಿವಾಳ ಮಾಚಿದೇವ ಸಂಘದ ಗೌರವ ಅಧ್ಯಕ್ಷ ಬಸವರಾಜ, ಅಧ್ಯಕ್ಷ ನಾಗರಾಜ, ಉಪಾಧ್ಯಕ್ಷೆ ಸರೋಜಮ್ಮ, ರಾಂಪುರ ನಾಗರಾಜ, ನಾಗಸಮುದ್ರ ನಿಂಗರಾಜ ಅಂಜಿನಪ್ಪ, ಕೃಷ್ಣಪ್ಪ, ರಾಜಣ್ನ, ತಿಪ್ಪೇಸ್ವಾಮಿ, ವೆಂಕಟೇಶ, ಕರಿಬಸಪ್ಪ, ತಿಪ್ಪೇಸ್ವಾಮಿ, ತಿಮ್ಮಣ್ಣ, ಜನಸಂಸ್ಥಾನ ಸಂಸ್ಥೆಯ ವಿರುಪಾಕ್ಷಪ್ಪ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈಲ್ವೆ ಪರೀಕ್ಷೆಯಲ್ಲಿ ಮತ್ತೆ ಕನ್ನಡಕ್ಕೆ ಕೊಕ್
ಓಡಿ ಹೋದ ಹೇಡಿ ಎನಿಸಿಕೊಳ್ಳುವುದಿಲ್ಲ. ಅಲ್ಲೇ ರಾಜಕೀಯ ಅಸ್ತಿತ್ವ ಕಂಡುಕೊಳ್ಳುತ್ತೇನೆ : ನಿಖಿಲ್‌