ಕನ್ನಡಪ್ರಭ ವಾರ್ತೆ ಶಿವಮೊಗ್ಗ
ನಗರದ ಕುವೆಂಪು ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಮಡಿವಾಳ ಸಮಾಜ ಸಂಘ ಸಹಯೋಗದಲ್ಲಿ ಗುರುವಾರ ಏರ್ಪಡಿಸಿದ್ದ ಶ್ರೀ ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
12ನೇ ಶತಮಾನದಲ್ಲಿ ಜಾತಿ ಪದ್ಧತಿ, ಅಸಮಾನತೆ ಪೆಡಂಭೂತದಂತೆ ಇತ್ತು. ದಾರ್ಶನಿಕರ, ಶರಣರ ಹೋರಾಟ ಪ್ರತಿಭಟನೆಯಿಂದ, ಆ ಧ್ವನಿಯಿಂದಾಗಿ ಇಂದು ನೆಮ್ಮದಿಯಿಂದ ಇದ್ದೇವೆ. ಒಬ್ಬ ವ್ಯಕ್ತಿಯ ಸನ್ನಡತೆ, ಉತ್ತಮ ವ್ಯಕ್ತಿತ್ವದಿಂದ ಮಾನ್ಯನಾಗುತ್ತಾನೆ. ಮಾಚಿದೇವ ಅವರ ಸನ್ನಡತೆಯಿಂದ ಬಿಜ್ಜಳ ಮಹಾರಾಜರೇ ಸ್ವತಃ ಅವರ ಮನೆಗೆ ಬರುತ್ತಾರೆ. ಎಷ್ಟೇ ಕಷ್ಟವಾದರೂ ನುಡಿದಂತೆ ನಡೆದ ಶ್ರೇಷ್ಠ ಪರಂಪರೆ ಮಾಚಿದೇವರ ಅವರದು. ಅಕ್ಕ ಮಹಾದೇವಿ ಸಹ ಮಾಚಿದೇವ ಅವರನ್ನು ತಮ್ಮ ತಂದೆ ಎನ್ನುತ್ತಾರೆ. ಇದು ನಮ್ಮ ಸಂಸ್ಕೃತಿಯ ಹೆಗ್ಗಳಿಕೆ ಎಂದರು.ಆದಿಚುಂಚನಗಿರಿ ಶಾಲಾ ಶಿಕ್ಷಕ ಎಂ.ಎನ್. ಮಧುಕುಮಾರ್ ಉಪನ್ಯಾಸ ನೀಡಿ ಮಾತನಾಡಿ, 12ನೇ ಶತಮಾನದ ದಾರ್ಶನಿಕರು ಮಡಿವಾಳ ಮಾಚಿದೇವರು. ಎಲ್ಲ ಮಹಾಪುರುಷರ ಜನ್ಮದ ಹಿಂದೆ ಒಂದು ಪೌರಾಣಿಕ ಹಿನ್ನೆಲೆ ಇರುತ್ತದೆ. ಅನುಭವ ಮಂಟಪ ಕಟ್ಟುವಲ್ಲಿ ಮಾಚಿದೇವರ ಕಾಯಕ ಅತಿ ಮಹತ್ವದ್ದಾಗಿದ್ದು, ವೀರಗಣಾಚಾರಿ ಹಾಗೂ ವೀರಭದ್ರನ ದೇವಾಂಶ ಸಂಭೂತ, ಅವತಾರ ಪುರುಷ ಎಂದು ಕರೆಯಲಾಗುತ್ತಿತ್ತು. ಬಸವಣ್ಣನೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದ ಇವರು ವಚನಗಳ ಸಂರಕ್ಷಕರಾಗಿದ್ದಾರೆ ಎಂದರು.
ಶಾಸಕಿ ಶಾರದಾ ಪೂರ್ಯಾ ನಾಯ್ಕ ಮಾತನಾಡಿ, ಮಡಿವಾಳ ಮಾಚಿದೇವರು ಮಡಿ ಬಟ್ಟೆಗಳನ್ನು ಗಂಟೆ ಬಾರಿಸುತ್ತ, ತಲೆ ಮೇಲೆ ಹೊತ್ತು ತರುವ ಮೂಲಕ ಅತ್ಯಂತ ಶ್ರದ್ಧೆಯಿಂದ ಶ್ರೇಷ್ಠ ಕಾಯಕ ಎಂದು ಅವರು ಮಾಡುತ್ತಿದ್ದರು ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಎಚ್.ಉಮೇಶ್ ಸ್ವಾಗತಿಸಿದರು. ಪಾಲಿಕೆ ಆಡಳಿತಾಧಿಕಾರಿ ತುಷಾರ್ ಗಿರಿನಾಥ್, ಸಮಾಜ ಸಂಘದ ಇತರೇ ಪದಾಧಿಕಾರಿಗಳು, ಸದಸ್ಯರು, ಸಮಾಜದ ಮುಖಂಡರು ಹಾಜರಿದ್ದರು.
-1ಎಸ್‌ಎಂಜಿಕೆಪಿ14: