ಮಡಂತ್ಯಾರು: ಬಾಲಕಿಯರ ವಿದ್ಯಾರ್ಥಿ ನಿಲಯ ಉದ್ಘಾಟನೆ

KannadaprabhaNewsNetwork |  
Published : Oct 12, 2025, 01:02 AM IST
ಮಡಂತ್ಯಾರಿನ ಸಬರಬೈಲಿನಲ್ಲಿ ಬಾಲಕಿಯರ ವಿದ್ಯಾರ್ಥಿ ನಿಲಯ ಉದ್ಘಾಟಿಸಲಾಯಿತು. | Kannada Prabha

ಸಾರಾಂಶ

ಮಡಂತ್ಯಾರಿನ ಸಬರಬೈಲಿನಲ್ಲಿ 3.50 ಕೋಟಿ ರು. ಅನುದಾನದಲ್ಲಿ ನಿರ್ಮಾಣವಾದ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯವನ್ನು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಶನಿವಾರ ಲೋಕಾರ್ಪಣೆಗೊಳಿಸಿದರು.

ಕನ್ನಡಪ್ರಭ ವಾರ್ತೆ ಬೆಳ್ತಂಗಡಿ

ಮಡಂತ್ಯಾರಿನ ಸಬರಬೈಲಿನಲ್ಲಿ 3.50 ಕೋಟಿ ರು. ಅನುದಾನದಲ್ಲಿ ನಿರ್ಮಾಣವಾದ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯವನ್ನು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಶನಿವಾರ ಲೋಕಾರ್ಪಣೆಗೊಳಿಸಿದರು.ಬಳಿಕ ಮಾತನಾಡಿದ ಅವರು, ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶಿಕ್ಷಣದ ದೃಷ್ಟಿಯಿಂದ ವಸತಿ ನಿಲಯ ನಿರ್ಮಾಣವಾಗಿದ್ದು, ಇದು ಅನೇಕರಿಗೆ ಸಹಕಾರಿಯಾಗಲಿದೆ. ಇಂದು ಹೆಣ್ಣುಮಕ್ಕಳಿಗೆ ಸಾಕಷ್ಟು ಅವಕಾಶಗಳನ್ನು ಸರ್ಕಾರ ನೀಡುತ್ತಿದೆ. ಅವರು ಸರಿಸಮಾನರಾಗಿ ಸಮಾಜದ ಮುಂದೆ ಬದುಕನ್ನು ರೂಪಿಸಿಕೊಳ್ಳುತ್ತಿದ್ದಾರೆ ಎಂದರು.ಅಧ್ಯಕ್ಷತೆ ವಹಿಸಿದ್ದ ಶಾಸಕ ಹರೀಶ್ ಪೂಂಜ ಮಾತನಾಡಿ, ತಾಲೂಕಿಗೆ ಇನ್ನೂ ೫ ವಿದ್ಯಾರ್ಥಿ ನಿಲಯದ ಅವಶ್ಯಕತೆಯಿದ್ದು, ಸಚಿವರು ಒದಿಗಿಸಬೇಕು. ಲೋಕರ್ಪಾಣೆಗೊಂಡ ವಿದ್ಯಾರ್ಥಿನಿಲಯದ ತಡೆಗೋಡೆ ರಚನೆಗೆ ಶಾಸಕರ ನಿಧಿಯಿಂದ ೧೦ ಲಕ್ಷ ರು. ಅನುದಾನ ನೀಡುವುದಾಗಿ ತಿಳಿಸಿದರು.ಶಾಸಕ ಹರೀಶ್ ಪೂಂಜ ಅವರನ್ನು ಹಾಗೂ ಕಟ್ಟಡ ನಿರ್ಮಾಣದ ಗುತ್ತಿಗೆದಾರ ಪ್ರಶಾಂತ್ ಪಾರೆಂಕಿ, ದೀಕ್ಷಿತ್ ಕುಮಾರ್ ಹಾಗೂ ನಿರ್ಮಿತ್ ಕೇಂದ್ರದ ಅಭಿಯಂತರ ನವೀನ್ ಹಾಗೂ ಮಲಾಡಿ ಗ್ರಾ.ಪಂ. ಸದಸ್ಯ ಬೇಬಿ ಸುವರ್ಣ ಅವರನ್ನು ಸನ್ಮಾನಿಸಲಾಯಿತು.ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷೆ ಮಮತಾ ಡಿ.ಎಸ್.ಗಟ್ಟಿ, ಕರ್ನಾಟಕ ಪರಿಸರ ಮತ್ತು ಪ್ರವಾಸೋಧ್ಯಮ ಅಭಿವೃದ್ಧಿ ಮಂಡಳಿ ಅಧ್ಯಕ್ಷೆ ಶಾಲೆಟ್ ಪಿಂಟೋ, ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣ ಸಂಸೆ ಅಧ್ಯಕ್ಷೆ ಲಾವಣ್ಯ ಬಲ್ಲಾಳ್ ಜೈನ್, ಜಿಲ್ಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಡೆ ವಿನಾಯಕ್ ಕಾರ್ಭಾರಿ, ಜಿಲ್ಲಾ ಕೆಡಿಪಿ ಸದಸ್ಯ ಸಂತೋಷ್ ಕುಮಾರ್ ಲಾಯಿಲ, ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಪದ್ಮನಾಭ್ ಸಾಲ್ಯಾನ್ ಮಾಲಾಡಿ, ಮಲಾಡಿ ಗ್ರಾ.ಪಂ. ಅಧ್ಯಕ್ಷ ಪುನೀತ್ ಕುಮಾರ್, ಮಡಂತ್ಯಾರು ಗ್ರಾ.ಪಂ. ಅಧ್ಯಕ್ಷೆ ರೂಪಾ ನವೀನ್, ಮಡಂತ್ಯಾರು ಸಿಎ ಬ್ಯಾಂಕ್ ಅಧ್ಯಕ್ಷ ಜೋಯಲ್ ಮೆಂಡೋನ್ಸಾ, ಜಿಲ್ಲಾ ನಿರ್ಮಿತಿ ಕೇಂದ್ರದ ಕಾರ್ಯನಿರ್ವಾಹಕ ರಾಜೇಂದ್ರ ಕಲ್ಬಾನಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಬಿಂದಿಯಾ ಎನ್. ನಾಯಕ, ತಾ.ಪಂ. ಇಒ ಭವಾನಿಶಂಕರ್ ಎನ್. ಉಪಸ್ಥಿತರಿದ್ದರುಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಂ, ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ, ಪಕ್ಷದ ಪ್ರಮುಖರು, ವಿದ್ಯಾರ್ಥಿಗಳು ಸಹಿತ ಅಧಿಕಾರಿಗಳು ಭಾಗವಹಿಸಿದ್ದರು. ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜೋಸೆಫ್ ಪಿ.ಎಸ್. ಸ್ವಾಗತಿಸಿದರು. ಶಿಕ್ಷಕ ಅಜಿತ್ ಕೊಕ್ರಾಡಿ ಕಾರ್ಯಕ್ರಮ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಪಿಎಲ್‌ ಮಾನದಂಡ ಬದಲಿಗೆ ಮುಂದಾದ ರಾಜ್ಯ
ಸರ್ಕಾರಿ ಶಾಲೆಗೆ ಶೀಘ್ರ 11000 ಶಿಕ್ಷಕರ ನೇಮಕ : ಮಧು