ಮದ್ದೂರು: ಸಂಚಾರ ನಿಯಮ ಪಾಲನೆ ಕುರಿತು ಜಾಗೃತಿ ಜಾಥಾ

KannadaprabhaNewsNetwork |  
Published : Feb 03, 2026, 01:45 AM IST
2ಕೆಎಂಎನ್ ಡಿ25 | Kannada Prabha

ಸಾರಾಂಶ

ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವುದು, ಅಪ್ರಾಪ್ತ ವಯಸ್ಕರಿಗೆ ವಾಹನ ಚಾಲನೆಗೆ ಅವಕಾಶ ನೀಡುವುದು, ವಾಹನ ಚಾಲನೆಯಲ್ಲಿ ಮೊಬೈಲ್ ಬಳಸುವುದು, ವೇಗದ ಮಿತಿ, ವಾಹನಕ್ಕೆ ಸಂಬಂಧಿಸಿದ ವಿಮೆ, ಚಾಲನಾ ಪರವಾನಗಿ ಸೇರಿದಂತೆ ಅಗತ್ಯ ದಾಖಲಾತಿಗಳನ್ನು ಹೊಂದುವಂತೆ ನಾಟಕದ ಮೂಲಕ ಅರಿವು.

ಕನ್ನಡಪ್ರಭ ವಾರ್ತೆ ಮದ್ದೂರು

ಕೇಂದ್ರ ಸರ್ಕಾರದ 37ನೇ ರಸ್ತೆ ಸುರಕ್ಷತಾ ಅಭಿಯಾನದ ಅಂಗವಾಗಿ ಬೆಂಗಳೂರು ನೆನಪು ಕಲಾತಂಡದಿಂದ ಸೋಮವಾರ ಸಂಜೆ ಪಟ್ಟಣದ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದ ಆವರಣದಲ್ಲಿ ನಾಟಕ ಪ್ರದರ್ಶನದೊಂದಿಗೆ ಸಾರ್ವಜನಿಕರಲ್ಲಿ ಸಂಚಾರ ನಿಯಮ ಕುರಿತು ಜಾಗೃತಿ ಮೂಡಿಸಲಾಯಿತು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ, ಮಳವಳ್ಳಿ ಉಪ ವಿಭಾಗ ಹಾಗೂ ಮದ್ದೂರು ಸಂಚಾರಿ ಠಾಣೆ ಸಹಯೋಗದಲ್ಲಿ ನಡೆದ ಅಭಿಯಾನದಲ್ಲಿ ಕಲಾತಂಡದ ಕಲಾವಿದರು ರಸ್ತೆ ಸುರಕ್ಷತಾ ಕುರಿತು ನಾಟಕ ಪ್ರದರ್ಶನದೊಂದಿಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.

ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವುದು, ಅಪ್ರಾಪ್ತ ವಯಸ್ಕರಿಗೆ ವಾಹನ ಚಾಲನೆಗೆ ಅವಕಾಶ ನೀಡುವುದು, ವಾಹನ ಚಾಲನೆಯಲ್ಲಿ ಮೊಬೈಲ್ ಬಳಸುವುದು, ವೇಗದ ಮಿತಿ, ವಾಹನಕ್ಕೆ ಸಂಬಂಧಿಸಿದ ವಿಮೆ, ಚಾಲನಾ ಪರವಾನಗಿ ಸೇರಿದಂತೆ ಅಗತ್ಯ ದಾಖಲಾತಿಗಳನ್ನು ಹೊಂದುವಂತೆ ನಾಟಕದ ಮೂಲಕ ಅರಿವು ಮೂಡಿಸಲಾಯಿತು.

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಂಚಾರಿ ಠಾಣೆ ಪಿಎಸ್ಐ ಕಮಲಾಕ್ಷಿ ಮಾತನಾಡಿ, ಅತಿ ವೇಗದಲ್ಲಿ ವಾಹನ ಚಲಾಯಿಸುವಾಗ ಸಾವು, ನೋವು ಸಂಭವಿಸುವ ಸಂದರ್ಭಗಳಿವೆ. ಸಂಚಾರಿ ನಿಮಯಗಳನ್ನು ಮೀರಿ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವುದು ಅಪಾಯಕಾರಿ. ಇದರಿಂದ ನಿಮ್ಮನ್ನು ನಂಬಿಕೊಂಡಿರುವ ಅವಲಂಬಿತ ಕುಟುಂಬಗಳು ಅನಾಥರಾಗುವ ಪರಿಸ್ಥಿತಿ ಎದುರಾಗುತ್ತದೆ ಎಂದು ಎಚ್ಚರಿಸಿದರು.

ಈ ವೇಳೆ ಸಂಚಾರಿ ಠಾಣೆ 1ನೇಪಿಎಸ್ಐ ರಾಮಸ್ವಾಮಿ, ಕಲಾತಂಡದ ಮುಖ್ಯಸ್ಥ ಚಿಕ್ಕ ರೆಡ್ಡಪ್ಪ, ಎಎಸ್ಐ ರಮೇಶ್ ಹಾಗೂ ಸಂಚಾರಿ ಠಾಣೆ ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.ರಸ್ತೆ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ

ಹಲಗೂರು: ಎರಡು ಬೈಕ್‌ಗಳ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಓರ್ವ ಬೈಕ್ ಸವಾರನ ಕಾಲಿಗೆ ತೀವ್ರ ಪೆಟ್ಟಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ- 948 ರ ತೊರೆಕಾಡನಹಳ್ಳಿ ಗೇಟ್ ಬಳಿ ನಡೆದಿದೆ. ಸಮೀಪದ ಕೆಂಪಯ್ಯನದೊಡ್ಡಿ ಗ್ರಾಮದ ದೇವರಾಜು ಬೆಂಗಳೂರು ಜಲಮಂಡಳಿಯಲ್ಲಿ ಕೆಲಸ ಮಾಡುತ್ತಿದ್ದರು. ಕಾರ್ಯ ನಿಮಿತ್ತ ಹೊರಗೆ ಬಂದಿದ್ದ ಈತ ಬೆಂಗಳೂರು ಜಲ ಮಂಡಳಿ ಒಳಗೆ ಹೋಗಲು ಬೈಕ್ ತಿರುಗಿಸಿಕೊಳ್ಳುತ್ತಿದಾಗ ಹಿಂಬದಿಯಿಂದ ಬಂದ ಮೊತ್ತೊಂದು ಬೈಕ್ ಸವಾರ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿ ಹೊಡೆದ ರಭಸಕ್ಕೆ ದೇವರಾಜು ಬಲಗಾಲಿಗೆ ಗಂಭೀರ ಗಾಯಗಳಾಗಿದ್ದು, ಮೈಸೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಾವೇರಿ 33 ಹಳ್ಳಿಗಳಲ್ಲಿ ಪ್ರತಿ ದಿನ ಸಂಜೆ 7- 9 ಗಂಟೆವರೆಗೆ ಮೊಬೈಲ್‌, ಟಿವಿ ಬಂದ್‌
ಗೃಹಲಕ್ಷ್ಮೀಯರಿಗೆ ಗುಡ್ ನ್ಯೂಸ್ ಕೊಟ್ರು ಸಚಿವೆ ಲಕ್ಷ್ಮೀ