ಕನ್ನಡಪ್ರಭ ವಾರ್ತೆ ಮದ್ದೂರು
ಪಟ್ಟಣದ ಪೂರ್ಣಪ್ರಜ್ಞಾ ಶಾಲೆಯಲ್ಲಿ ತಾಲೂಕು ಶಾಲಾ ಶಿಕ್ಷಣ ಇಲಾಖೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡಿಸುವ ಸಂಬಂಧ ಮುಖ್ಯ ಶಿಕ್ಷಕರ ಸಮಾಲೋಚನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕಳೆದ 15 ವರ್ಷಗಳಿಂದ ತಾಲೂಕು ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶದಲ್ಲಿ ಮಂಡ್ಯ ಜಿಲ್ಲೆಗೆ ಪ್ರಥಮ ಸ್ಥಾನಗಳಿಸುತ್ತಿತ್ತು. ಆದರೆ, ಈ ಪ್ರಸಕ್ತ ಸಾಲಿನಲ್ಲಿ ಫಲಿತಾಂಶ ತೀರಾ ಕಳೆಪೆಯಾಗಿದೆ. ಶಾಲೆಗಳ ಮುಖ್ಯ ಶಿಕ್ಷಕರು ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಎಚ್ಚರಿಸಿದರು.ಶಿಕ್ಷಕರು ಮತ್ತು ಪೋಷಕರು ಪ್ರತಿನಿತ್ಯ ಮಕ್ಕಳ ವಿದ್ಯಾಭ್ಯಾಸದ ಕಡೆಗೆ ಹೆಚ್ಚಿನ ಗಮನ ಹರಿಸಬೇಕು. ಭಯ ಮುಕ್ತವಾಗಿ ಪರೀಕ್ಷೆ ಬರೆಯಲು ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬಬೇಕು. ನಮ್ಮಿಂದ ಶಾಲೆಗಳಿಗೆ ಏನು ಸೌಕರ್ಯ, ಸವಲತ್ತು ಬೇಕಾಗುತ್ತೋ ಕೇಳಿ ಶಾಸಕರ ಅನುದಾನ ಹಾಗೂ ಉದಯ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಪೂರೈಕೆ ಮಾಡಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಕಳೆದ ಸಾಲಿನಲ್ಲಿ ಶೇ.100 ರಷ್ಟು ಫಲಿತಾಂಶ ಪಡೆದ ಶಾಲೆಗಳ ಮುಖ್ಯ ಶಿಕ್ಷಕರಿಗೆ ಎಸ್ಸೆಸ್ಸೆಲ್ಸಿ ಮಂಡಳಿ ವತಿಯಿಂದ ಪ್ರಶಸ್ತಿ ಪ್ರದಾನ ಮಾಡಿ ಅಭಿನಂದಿಸಲಾಯಿತು. ಈ ವೇಳೆ ತಾಲೂಕು ಫ್ರೌಢ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಅನಂತೇಗೌಡ, ಪೂರ್ಣ ಪ್ರಜ್ಞಾ ಸಂಸ್ಥೆ ಅಧ್ಯಕ್ಷೆ ಕಸ್ತೂರಿ ಅನಂತೇಗೌಡ, ಅಕ್ಷರ ದಾಸೋಹ ಸಹಾಯಕ ನಿರ್ದೆಶಕಿ ರಾಜೇಶ್ವರಿ.
ಜಿಲ್ಲಾ ಮುಖ್ಯ ಶಿಕ್ಷಕರ ಸಂಘದ ಕಾರ್ಯದರ್ಶಿ ನಾಗೇಶ್, ತಾಲೂಕು ಕಾರ್ಯದರ್ಶಿ ಚಂದ್ರಶೇಖರ್ ಮತ್ತಿತರರು ಇದ್ದರು.