ಮದ್ದೂರು ತಾಲೂಕಿನ ಆಬಲವಾಡಿ ಗ್ರಾಮದ ತೋಪಿನ ತಿಮ್ಮಪ್ಪ ದೇವಾಲಯದ ಆವರಣದಲ್ಲಿ ನಡೆದ ಹರಿಸೇವೆಯಲ್ಲಿ ಸಾವಿರಾರು ಭಕ್ತಾದಿಗಳು ಪಾಲ್ಗೊಂಡು ಸಂಪ್ರದಾಯದಂತೆ ತಾವರೆ ಎಲೆಯಲ್ಲಿ ಭೋಜನಾ ಸವಿದರು. ಈ ವೇಳೆ ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಅವರಿಂದ ದೇವರಿಗೆ ವಿಶೇಷ ಪೂಜೆ ಸಲ್ಲಿಕೆ.
ಕನ್ನಡಪ್ರಭ ವಾರ್ತೆ ಮದ್ದೂರು
ತಾಲೂಕಿನ ಕೊಪ್ಪ ಹೋಬಳಿ ಆಬಲವಾಡಿ ಗ್ರಾಮದ ಶ್ರೀತೋಪಿನ ತಿಮ್ಮಪ್ಪನ ದೇವಾಲಯದ ಹರಿಸೇವೆ ಭಾನುವಾರ ವಿಜೃಂಭಣೆಯಿಂದ ನೆರವೇರಿತು.
ಮುಂಜಾನೆಯಿಂದಲೇ ದೇವಾಲಯದಲ್ಲಿ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ ಸಹಸ್ರಾರು ಭಕ್ತಾದಿಗಳು ನಂತರ ದೇಗುಲದ ಆವರಣದಲ್ಲಿ ನಡೆದ ಹರಿಸೇವೆಯಲ್ಲಿ ಪಾಲ್ಗೊಂಡು ಸಾಮೂಹಿಕವಾಗಿ ತಾವರೆ ಎಲೆಯಲಿ ಭೋಜನ ಸ್ವೀಕರಿಸಿ ಧನ್ಯತಾ ಭಾವ ಮೆರೆದರು.
ಶ್ರೀತೋಪಿನ ತಿಮ್ಮಪ್ಪನ ಹರಿಸೇವೆ ಅಂಗವಾಗಿ ಶನಿವಾರದಿಂದಲೇ ವಿಶೇಷ ಪೂಜಾ ಕಾರ್ಯಗಳು ನೆರವೇರಿದವು. ರಾತ್ರಿ ಶ್ರೀತೋಪಿನ ತಿಮ್ಮಪ್ಪ, ಲಕ್ಷ್ಮಿ ದೇವಿ, ಬಂಕದ ಘಟ್ಟಮ್ಮ ಹಾಗೂ ಮದ್ದನ ಟಮ್ಮ ದೇವರುಗಳ ಪುಷ್ಪಾಲಂಕಾರ ಸಹಿತ ಗ್ರಾಮದಲ್ಲಿ ಮೆರವಣಿಗೆ ನಡೆಸಲಾಯಿತು.
ಭಾನುವಾರ ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 12 ಗಂಟೆ ವರೆಗೆ ನಡೆದ ಅನ್ನ ಸಂತರ್ಪಣೆಯಲ್ಲಿ ಸಾವಿರಾರು ಭಕ್ತಾದಿಗಳು ಸಂಪ್ರದಾಯದಂತೆ ತಾವರೆಯಲ್ಲಿ ಊಟ ಸವಿದರು. ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಸೇರಿದಂತೆ ಗ್ರಾಮಸ್ಥರು, ಭಕ್ತಾದಿಗಳು, ದಾನಿಗಳು ತಾವರೆ ಎಲೆ, ಅಕ್ಕಿ, ಬೇಳೆ, ಸೌದೆ, ಬೆಲ್ಲ ಮತ್ತು ತುಪ್ಪ ಸೇರಿದಂತೆ ಮತ್ತಿತರ ವಸ್ತುಗಳು ಹಾಗೂ ಆರ್ಥಿಕ ನೆರವನ್ನು ಕಾಣಿಕೆ ರೂಪದಲ್ಲಿ ನೀಡಿದ್ದಾರೆ. ಆಬಲವಾಡಿ ಗ್ರಾಮದ ಶ್ರೀ ತೋಪಿನ ತಿಮ್ಮಪ್ಪನ ಹರಿಸೇವೆ ಅಂಗವಾಗಿ ವೃತ ನಿರೀಕ್ಷಕ ನಾರಾಯಣಿ ನೇತೃತ್ವದಲ್ಲಿ ಬಿಗಿಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.ಜಿಲ್ಲಾ ಮತ್ತು ತಾಲೂಕು ಮಟ್ಟದ ಕೃಷಿಕ ಪ್ರಶಸ್ತಿಗೆ ರೈತರಿಂದ ಅರ್ಜಿ ಆಹ್ವಾನ
ಪಾಂಡವಪುರ: ಕೃಷಿ ಇಲಾಖೆಯಿಂದ ನೀಡುವ ಆತ್ಮ ಯೋಜನೆಯಡಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಶ್ರೇಷ್ಟ ಕೃಷಿಕ ಪ್ರಶಸ್ತಿಗೆ ಪ್ರಸ್ತತ ಸಾಲಿನಲ್ಲಿ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.ಕೃಷಿಯಲ್ಲಿ ಸಮಗ್ರ ಬೆಳೆ ಪದ್ಧತಿ, ಸಮಗ್ರ ನೀರು ನಿರ್ವಹಣೆ ಸಾವಯವ ಕೃಷಿ ವೈಜ್ಙಾನಿಕ ಯಂತ್ರೋಪಕರಣಗಳ ಬಳಕೆ ತೋಟಗಾರಿಕೆ ಹೈನುಗಾರಿಕೆ ಕೋಳಿ ಸಾಕಾಣಿಕೆ ಮೀನುಗಾರಿಕೆ ರೇಷ್ಮೆ ಬೇಸಾಯ ಹೈಟೆಕ್ ಹಸಿರು ಮನೆ ಅಳವಡಿಕೆ ಕೃಷಿ ಸಂಸ್ಕರಣ ಅರಣ್ಯ ಕೃಷಿ ಆಡು ಕುರಿ ಮೋಲ ಇತ್ಯಾದಿ ಸಾಮಾಜಿಕ ಚಟುವಟಿಕೆಗಳಲ್ಲಿ ವಿಶೇಷ ಸಾಧನೆ ಮಾಡಿರುವ ರೈತರು ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು. ಜಿಲ್ಲೆಯ 10 ರೈತರಿಗೆ ಜಿಲ್ಲಾ ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿ ಹಾಗೂ 25 ಸಾವಿರ ರು.ನಗದು ತಾಲೂಕಿನ 5 ರೈತರರಿಗೆ ತಾಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿ ಹಾಗೂ 10 ಸಾವಿರ ನಗದು ಬಹುಮಾನ ನೀಡಲಾಗುವುದು, ಆಸಕ್ತ ರೈತರು ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಭರ್ತಿ ಮಾಡಿದ ಅರ್ಜಿಗಳನ್ನು ಆಗಸ್ಟ್ 10 ರೊಳಗೆ ತಲುಪಿಸುವಂತೆ ಕೃಷಿ ನಿರ್ದೇಶಕ ಟಿ.ಎಸ್.ಮಂಜುನಾಥ್ ತಿಳಿಸಿದ್ದಾರೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.