ಕನ್ನಡಪ್ರಭ ವಾರ್ತೆ ಮದ್ದೂರು
ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಪ್ರವಾಸಿ ಮಂದಿರ ಆವರಣದಿಂದ ಶ್ರೀ ಉಗ್ರನರಸಿಂಹಸ್ವಾಮಿ ದೇವಾಲಯದವರೆಗೆ ಮ್ಯಾರಥಾನ್ ಮೂಲಕ ಉತ್ಸವಕ್ಕೆ ಚಾಲನೆ ನೀಡಲಾಗುವುದು ಎಂದರು.
ಏ.25 ರಿಂದ 30ರವರೆಗೆ ರಾಸುಗಳ ಜಾತ್ರೆ ನಡೆಯಲಿದೆ. ಉತ್ತಮ ರಾಸುಗಳನ್ನು ಚಾಂಪಿಯನ್ ಎಂದು ಘೋಷಿಸಿ ಕ್ರಮವಾಗಿ ಮೊದಲ ಸ್ಥಾನ 2 ಲಕ್ಷ ರು., ದ್ವೀತಿಯ 1 ಲಕ್ಷ ರು. ಮೂರನೇ ಸ್ಥಾನ 50 ಸಾವಿರ ರು. ಬಹುಮಾನ ಅಲ್ಲದೇ 10 ರಾಸುಗಳಿಗೆ 10 ಸಾವಿರ ರು. ಸಮಾಧಾನಕರ ಬಹುಮಾನ ನೀಡಲಾಗುವುದು ಎಂದು ಹೇಳಿದರು.ಇದೇ ಮೊದಲ ಬಾರಿ ಉತ್ಸವ ಪಾಲ್ಗೊಳ್ಳುವ ಟಗರುಗಳಿಗೂ ಕೂಡ ಕ್ರಮವಾಗಿ 10 ಸಾವಿರ ಹಾಗೂ 5 ಸಾವಿರ ನಗದು ಬಹುಮಾನ, ಬಹುಮಾನ ವಿಜೇತ ರಾಸುಗಳನ್ನು ಏ.30 ರಂದು ಮದ್ದೂರು ಪ್ರವಾಸಿ ಮಂದಿರ ಆವರಣದಿಂದ ಶ್ರೀ ಉಗ್ರ ನರಸಿಂಹಸ್ವಾಮಿ ದೇವಾಲಯದ ಆವರಣದವರೆಗೆ ಮೆರವಣಿಗೆ ಮೂಲಕ ಕರೆತಂದು ಬಹುಮಾನ ನೀಡಿ ಗೌರವಿಸಲಾಗುವುದು. ಭಾಗವಹಿಸುವರು ಶಿವಪುರದ ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ರೈತರು ಹೆಸರು ನೊಂದಾಯಿಸಿಕೊಳ್ಳಬಹುದು ಎಂದು ತಿಳಿಸಿದರು.
ಮೇ 1 ರಿಂದ 4 ರವರೆಗೆ ಪಟ್ಟಣದ ನಿವಾಸಿಗಳಿಗೆ ರಂಗೋಲಿ ಸ್ಪರ್ಧೆಯನ್ನು ಪ್ರತೀ ವಾರ್ಡ್ ಮಟ್ಟದಲ್ಲಿ ನಡೆಯಲಿದೆ. ವಿಜೇತ ಮಹಿಳೆಯರಿಗೆ ಮಿಕ್ಸಿ, ಕುಕ್ಕರ್, ಬಿಸಿ ನೀರು ಜಗ್ಗು ಬಹುಮಾನವಾಗಿ ನೀಡಲಾಗುವುದು. ವಿಜೇತರಾದ ಮಹಿಳೆಯರಿಗೆ ಮತ್ತೊಮ್ಮೆ ಸ್ಪರ್ಧೆ ಆಯೋಜಿಸಿ ವಾಷಿಂಗ್ ಮಷಿನ್, ರೆಪ್ರಿಜರೇಟರ್, ಗ್ರೈಂಡರ್ ಹಾಗೂ 10 ಸಮಾಧಾನಕರ ಬಹುಮಾನ ನೀಡಲಾಗುವುದು. ಕ್ಷೇತ್ರ ಶಿಕ್ಷಣಾಧಿಕಾರಿಗಳು ಸ್ಪರ್ಧೆಯ ಉಸ್ತುವಾರಿ ವಹಿಸಲಿದ್ದಾರೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ನಗರಸಭಾ ಮಾಜಿ ಅಧ್ಯಕ್ಷೆ ಕೋಕಿಲಾ ಅರುಣ್, ಮಾಜಿ ಉಪಾಧ್ಯಕ್ಷ ಟಿ.ಆರ್.ಪ್ರಸನ್ನಕುಮಾರ್, ಮಾಜಿ ಸದಸ್ಯರಾದ ಎಂ.ಬಿ.ಸಚಿನ್, ಸರ್ವಮಂಗಳಾ, ಸಿದ್ದರಾಜು, ಬಸವರಾಜು, ಕಾಂಗ್ರೆಸ್ ಮಹಿಳಾ ಘಟಕ ಅಧ್ಯಕ್ಷೆ ಮಮತಾ ಶಂಕರೇಗೌಡ, ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ. ಸಂದರ್ಶ, ಮನ್ಮುಲ್ ನಿರ್ದೇಶಕ ಹರೀಶ್‌ಬಾಬು, ಮುಖಂಡರಾದ ಎಂ.ಡಿ.ಮಹಾಲಿಂಗಯ್ಯ, ಸಿದ್ದರಾಮಣ್ಣ, ಚನ್ನೇಗೌಡನದೊಡ್ಡಿ ಹೊಂಬಯ್ಯ, ಮರಿದೇವರು, ಎಂ.ಸಿ.ಲಿಂಗರಾಜು, ಇಮ್ತಿಯಾಜ್ ಉಲ್ಲಾ ಖಾನ್, ಎಂ.ಎಲ್.ಸಂತೋಷ್, ಡಿ.ಸಿ.ರಾಜು, ರವಿ, ಅರುಣ್‌ಕುಮಾರ್, ವೆಂಕಟೇಶ್, ಇದ್ದರು.