ಮಧುಸೂದನ್‌ಗೆ ಯುವ ಕಾಂಗ್ರೆಸ್‌ ಸಂಯೋಜಕ ಹೊಣೆ

KannadaprabhaNewsNetwork |  
Published : Aug 27, 2026, 01:45 AM IST
ಪೊಟೋ: 26ಎಸ್‌ಎಂಜಿಕೆಪಿ02: .ಜಿ.ಮಧುಸೂಧನ | Kannada Prabha

ಸಾರಾಂಶ

ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ರಾಜ್ಯ ಸಂಯೋಜಕರಾಗಿ ಸಿ.ಜಿ. ಮಧುಸೂದನ್ ಅವರನ್ನು ನೇಮಕ ಮಾಡಲಾಗಿದ್ದು, ಭಾರತ ಜೋಡೋ ಯುವ ಸಂಘ ರಚನೆ, ಯುವಕರ ನೋಂದಣಿ ಹಾಗೂ ಸಂಘಟನಾ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಶಿವಮೊಗ್ಗ ಸೇರಿದಂತೆ ರಾಜ್ಯದ 11 ಜಿಲ್ಲೆಗಳ ಜವಾಬ್ದಾರಿಯನ್ನು ಅವರಿಗೆ ವಹಿಸಲಾಗಿದೆ.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ರಾಜ್ಯ ಸಂಯೋಜಕರಾಗಿ ಸಿ.ಜಿ. ಮಧುಸೂದನ್ ಅವರನ್ನು ನೇಮಕ ಮಾಡಲಾಗಿದ್ದು, ಭಾರತ ಜೋಡೋ ಯುವ ಸಂಘ ರಚನೆ, ಯುವಕರ ನೋಂದಣಿ ಹಾಗೂ ಸಂಘಟನಾ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಶಿವಮೊಗ್ಗ ಸೇರಿದಂತೆ ರಾಜ್ಯದ 11 ಜಿಲ್ಲೆಗಳ ಜವಾಬ್ದಾರಿಯನ್ನು ಅವರಿಗೆ ವಹಿಸಲಾಗಿದೆ.

ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಸಂಘಟನೆಯನ್ನು ರಾಜ್ಯಾದ್ಯಂತ ಮತ್ತಷ್ಟು ಬಲಪಡಿಸುವ ಹಾಗೂ ಸಕ್ರಿಯಗೊಳಿಸುವ ಉದ್ದೇಶದಿಂದ ಅಖಿಲ ಭಾರತ ಯುವ ಕಾಂಗ್ರೆಸ್ ಅಧ್ಯಕ್ಷ ಉದಯ್ ಭಾನು ಚಿಬ್ ಅವರ ನಿರ್ದೇಶನದಂತೆ ಹಾಗೂ ಅಖಿಲ ಭಾರತ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಉಸ್ತುವಾರಿ ನಿಗಮ್ ಭಂಡಾರಿ ಅವರ ಅನುಮೋದನೆಯೊಂದಿಗೆ ರಾಜ್ಯ ಸಂಯೋಜಕರ ನೇಮಕ ಮಾಡಲಾಗಿದೆ.

ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಚ್.ಎಸ್. ಮಂಜುನಾಥ್ ಅವರು ಆ.25ರಂದು ಹೊರಡಿಸಿರುವ ಆದೇಶದಲ್ಲಿ ನಾಗೇಶ್ ಕರಿಯಪ್ಪ, ಸಿ.ಜಿ. ಮಧುಸೂದನ್ ಹಾಗೂ ಸಿದ್ದು ಹಾಲೇಗೌಡ ಅವರನ್ನು ರಾಜ್ಯ ಸಂಯೋಜಕರನ್ನಾಗಿ ನೇಮಕ ಮಾಡಲಾಗಿದೆ. ಈ ಪೈಕಿ ಸಿ.ಜಿ. ಮಧುಸೂದನ್ ಅವರಿಗೆ ಶಿವಮೊಗ್ಗ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ದಾವಣಗೆರೆ, ಹುಬ್ಬಳ್ಳಿ-ಧಾರವಾಡ, ಧಾರವಾಡ ಗ್ರಾಮಾಂತರ, ದಕ್ಷಿಣ ಕನ್ನಡ, ಉಡುಪಿ, ಕೊಡಗು ಮತ್ತು ಚಿತ್ರದುರ್ಗ ಜಿಲ್ಲೆಗಳ ಜವಾಬ್ದಾರಿ ನೀಡಲಾಗಿದೆ. ರಾಜ್ಯಾದ್ಯಂತ ‘ಭಾರತ ಜೋಡೋ ಯುವ ಸಂಘ’ಗಳನ್ನು ರಚಿಸುವುದು, ಯುವಕರನ್ನು ನೋಂದಾಯಿಸುವುದು ಹಾಗೂ ತಮಗೆ ವಹಿಸಲಾದ ಜಿಲ್ಲೆಗಳಿಗೆ ಭೇಟಿ ನೀಡಿ ಸಂಘಟನಾ ಕಾರ್ಯವನ್ನು ಚುರುಕುಗೊಳಿಸುವ ಜವಾಬ್ದಾರಿಯನ್ನು ರಾಜ್ಯ ಸಂಯೋಜಕರಿಗೆ ವಹಿಸಲಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಂಘಟನೆಯ ಕಾರ್ಯವನ್ನು ಚುರುಕುಗೊಳಿಸಿ ಯುವಕರನ್ನು ಒಗ್ಗೂಡಿಸುವ ಕೆಲಸದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಆದೇಶದಲ್ಲಿ ಸೂಚಿಸಲಾಗಿದೆ.

ನಾಗೇಶ್ ಕರಿಯಪ್ಪ ಅವರಿಗೆ ಮೈಸೂರು ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು ನಗರ, ತುಮಕೂರು, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಪಶ್ಚಿಮ ಮತ್ತು ಬೆಂಗಳೂರು ಕೇಂದ್ರದ ಜವಾಬ್ದಾರಿ ವಹಿಸಲಾಗಿದೆ. ಸಿದ್ದು ಹಾಲೇಗೌಡ ಅವರಿಗೆ ಬೀದರ್, ಗುಲ್ಬರ್ಗ, ಯಾದಗಿರಿ, ರಾಯಚೂರು, ಬಳ್ಳಾರಿ ಗ್ರಾಮಾಂತರ, ಬಳ್ಳಾರಿ ನಗರ, ವಿಜಯನಗರ, ಕೊಪ್ಪಳ, ಬಾಗಲಕೋಟೆ, ವಿಜಯಪುರ, ಚಿಕ್ಕೋಡಿ, ಬೆಳಗಾವಿ ನಗರ, ಬೆಳಗಾವಿ ಗ್ರಾಮಾಂತರ, ಹಾವೇರಿ ಹಾಗೂ ಗದಗ ಜಿಲ್ಲೆಗಳ ಹೊಣೆ ನೀಡಲಾಗಿದೆ. ಈ ನೇಮಕಾತಿ ಆದೇಶವನ್ನು ಸಂಬಂಧಪಟ್ಟ ಎಲ್ಲ ಜಿಲ್ಲಾ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ರವಾನಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನ್ಯಾಯಬೆಲೆ ಅಂಗಡಿಗಳಲ್ಲಿ ಬಿಗಡಾಯಿಸಿದ ಸರ್ವರ್ ಸಮಸ್ಯೆ
ಮಠಗಳು ಸಾಮಾಜಿಕ ಕಾರ್ಯಗಳಲ್ಲಿ ಸದಾ ಮುಂದು: ಸುತ್ತೂರು ಶ್ರೀಗಳು