ಅಂಬೇಡ್ಕರ ಅವರು ದಲಿತ್ತೋದ್ಧಾರಕ್ಕಾಗಿ ಮಿಸಲಾತಿ ಕಲ್ಪಿಸಿದ್ದು, ಮಾದಿಗ ಜನಾಂಗಕ್ಕೆ ಒಳಮಿಸಲಾತಿಯು ಲಭ್ಯವಾಗಿದೆ. ಅದನ್ನು ಸಮರ್ಪಕವಾಗಿ ಬಳಸಿಕೊಳ್ಳುವದರ ಜೊತೆಗೆ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದರು.
ಮಾದಿಗ ಸಮಾಜದಿಂದ ಆಯೋಜಿಸಿದ್ದ ಮಾದರ ಚನ್ನಯ್ಯನವರ ಮೂರ್ತಿ ಪ್ರತಿಷ್ಠಾಪನೆ ಹಾಗೂ 975ನೇ ಜಯಂತ್ಯುತ್ಸವ ಹಾಗೂ ಮಾದಿಗರ ಬಹೃತ್ ಜನ ಜಾಗೃತಿ ಸಮಾವೇಶ ಉದ್ಘಾಟಿಸಿ ಮಾತನಾಡಿದರು. ಫೆಬ್ರುವರಿಯಲ್ಲಿ ಬೃಹತ್ ಜಾಗೃತಿ ಕಾರ್ಯಕ್ರಮ ನಡೆಸಲಾಗುತ್ತದೆ ಎಂದು ಹೇಳಿದರು.
ಅಬಕಾರಿ ಸಚಿವ ಆರ್.ಬಿ ತಿಮ್ಮಾಪೂರ ಮಾತನಾಡಿ, ಮಾದಿಗ ಸಮಾಜ ಒಗ್ಗಟ್ಟಿದ್ದರೆ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯ. ಅದಕ್ಕಾಗಿ ಸಮಾಜವನ್ನು ಒಗ್ಗಟ್ಟಾಗಿ ನಡೆಸಿಕೊಂಡು ಹೋಗಬೇಕೆಂದು ಹೇಳಿದರು.
ಶಾಸಕ ಡಾ.ಅಜಯಸಿಂಗ್ ಮಾತನಾಡಿ, ಕಾಂಗ್ರೆಸ್ ಸರ್ಕಾರ ಶೋಷಿತ, ದೀನ ದಲಿತ, ಬಡವರ, ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಶೋಷಿತರ ಅಭಿವೃದ್ದಿಗೆ ಆದ್ಯತೆ ನೀಡಲಾಗುತ್ತದೆ ಎಂದು ಹೇಳಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.