- ಸಾಮಾಜಿಕ ನ್ಯಾಯದ ಒಳಮೀಸಲಾತಿ ನೀಡಿಯೇ 56432 ಹುದ್ದೆಗಳ ಭರ್ತಿಗೊಳಿಸಲು ತಾಕೀತು । ಹರಿಹರದಿಂದ ಪಾದಯಾತ್ರೆ
ಕನ್ನಡಪ್ರಭ ವಾರ್ತೆ ದಾವಣಗೆರೆ
ರಾಜ್ಯದಲ್ಲಿ 56432 ಹುದ್ದೆಗಳ ನೇಮಕಾತಿಯನ್ನು ಒಳಮೀಸಲಾತಿ ಆಧಾರದಲ್ಲೇ ನಡೆಸುವ ಮೂಲಕ ಮಾದಿಗ ಸಮುದಾಯಕ್ಕೆ ಒಳಮೀಸಲಾತಿ ಕಲ್ಪಿಸಿ, ಸಾಮಾಜಿಕ ನ್ಯಾಯ ಒದಗಿಸಲು ಒತ್ತಾಯಿಸಿ ಹರಿಹರದ ಪ್ರೊ. ಬಿ.ಕೃಷ್ಣಪ್ಪ ಸಮಾಧಿ ಸ್ಥಳ ಮೈತ್ರಿವನದಿಂದ ಬೆಂಗಳೂರುವರೆಗೆ ಪಾದಯಾತ್ರೆ ಆರಂಭಿಸಿದ್ದೇವೆ ಎಂದು ಹಿರಿಯೂರಿನ ಆದಿಜಾಂಬವ ಪೀಠದ ಶ್ರೀ ಷಡಕ್ಷರಿಮುನಿ ಸ್ವಾಮೀಜಿ ನುಡಿದರು.ನಗರದ ಎಂಪೈರ್ ಹೋಟೆಲ್‌ನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೂರೂವರೆ ದಶಕದಿಂದಲೂ ಒಳಮೀಸಲಾತಿಗಾಗಿ ಮಾದಿಗ ಸಮುದಾಯ, ಸಮಾಜದ ಸಂಘ, ಸಂಸ್ಥೆ, ಸಂಘಟನೆಗಳು ನಿರಂತರ ಹೋರಾಟ ನಡೆಯುತ್ತಿದೆ. ಇದೀಗ ಒಳಮೀಸಲಾತಿ ಕಲ್ಪಿಸುವ ಮೂಲಕ ಸಾಮಾಜಿಕ ನ್ಯಾಯ ನೀಡುವಂತೆ ಬೆಂಗಳೂರುವರೆಗೆ ಪಾದಯಾತ್ರೆ ಕೈಗೊಂಡಿದ್ದೇವೆ ಎಂದರು.
ರಾಜ್ಯ ಸರ್ಕಾರದ ನಡೆ ಗಮನಿಸಿದರೆ ತನ್ನ ಆಡಳಿತ ಅವಧಿಯಲ್ಲಿ ಮಾದಿಗ ಸಮುದಾಯವನ್ನು ಸಮಾಧಾನಪಡಿಸುವುದಕ್ಕಷ್ಟೇ ಸೀಮಿತವಾಗಿ ಅಧಿಕಾರ ಅವಧಿ ಮುಗಿಸಲು ಹೊರಟಂತಿದೆ. ಮಾದಿಗರಿಗೆ ಒಳಮೀಸಲಾತಿ ನೀಡುವ ಬಗ್ಗೆ ಈಗಾಗಲೇ ಸಚಿವ ಸಂಪುಟದಲ್ಲಿ ಅನುಮೋದನೆ ಪಡೆದಿದ್ದು, ರಾಜ್ಯಪಾಲರ ಅಂಕಿತವೂ ಸಿಕ್ಕಿದೆ. ರಾಜ್ಯ ಸರ್ಕಾರ ಮಾತ್ರ ಮೀನಾ-ಮೇಷ ಎಣಿಸುತ್ತ ಹಿಂದೇಟು ಹಾಕುತ್ತಿದೆ. ಇದು ಯಾಕೆ ಎಂಬುದೇ ಇಂದಿಗೂ ಅರ್ಥವಾಗುತ್ತಿಲ್ಲ ಎಂದು ಶ್ರೀಗಳು ಬೇಸರ ವ್ಯಕ್ತಪಡಿಸಿದರು.
ಸುಪ್ರೀಂ ಕೋರ್ಟ್ ಆದೇಶದಿಂದ ಮಾದಿಗರಿಗೆ ನ್ಯಾಯ ಸಿಕ್ಕದೆ. ಆದರೆ, ನಮಗೆ ಸಿಗಬೇಕಾದ ಒಳ ಮೀಸಲಾತಿ ನೀಡಲು ಸರ್ಕಾರ ಹಿಂದೇಟು ಹಾಕುತ್ತಿದೆ. ರಾಜ್ಯ ಸರ್ಕಾರವು ಶೇ.17ರ ಬದಲು ಶೇ.15ರಲ್ಲಿ ನೇಮಕಾತಿಗೆ ಯೋಜಿಸಿದ್ದು, 56432 ಹುದ್ದೆಗಳ ಭರ್ತಿಗೆ ಆದೇಶ ಹೊರಡಿಸಿತ್ತು. ಹಳೆ ಮೀಸಲಾತಿ ಅನ್ವಯ ನೇಮಕಾತಿಗೆ ಮಾದಿಗ ಸಂಘಟನಗೆಳು ತೀವ್ರ ವಿರೋಧ ವ್ಯಕ್ತಪಡಿಸಿದೆ. ಈಗಾಗಲೇ ದಾವಣಗೆರೆ ಬಂದ್ ಆಗಿದ್ದು, ರಾಜ್ಯವ್ಯಾಪಿ ಹೋರಾಟ ನಡೆದಿದೆ. ಇದು ಅತ್ಯಂತ ಸೂಕ್ಷ್ಮ ವಿಷಯವಾಗಿದ್ದು, ಒಳಮೀಸಲಾತಿ ಆದಾರದಲ್ಲೇ ಹುದ್ದೆಗಳ ಭರ್ತಿಗೆ ಮುಂದಾಗಲಿ ಎಂದು ಒತ್ತಾಯಿಸಿದರು.
ಪಾದಯಾತ್ರೆ:
- - -
- ಷಡಕ್ಷರಿಮುನಿ ಸ್ವಾಮೀಜಿ, ಆದಿಜಾಂಬವ ಪೀಠ, ಹಿರಿಯೂರು.
-12ಕೆಡಿವಿಜಿ1:
ದಾವಣಗೆರೆ ಎಂಪೈರ್ ಹೋಟೆಲ್‌ನಲ್ಲಿ ಗುರುವಾರ ಹಿರಿಯೂರಿನ ಶ್ರೀ ಆದಿಜಾಂಬವ ಪೀಠದ ಶ್ರೀ ಷಡಕ್ಷರಿಮುನಿ ಸ್ವಾಮೀಜಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.