ಕೊಡಗು ಜಿಲ್ಲಾ ಆಯುಷ್ ಇಲಾಖೆ, ಜಿಲ್ಲಾಡಳಿತ, ಜಿಪಂ, ನೀಮಾ ಕೊಡಗು ಹಾಗೂ ವಿವಿಧ ಯೋಗ ಸಂಸ್ಥೆಗಳ ಸಹಯೋಗದಲ್ಲಿ ಜೂ. ೨೧ರಂದು ೧೨ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ನಗರದ ಕಾವೇರಿ ಹಾಲ್‌ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಆಯುಷ್ ಅಧಿಕಾರಿ ಶೈಲಜಾ ಹೇಳಿದರು.
ಮಡಿಕೇರಿ: ಕೊಡಗು ಜಿಲ್ಲಾ ಆಯುಷ್ ಇಲಾಖೆ, ಜಿಲ್ಲಾಡಳಿತ, ಜಿಪಂ, ನೀಮಾ ಕೊಡಗು ಹಾಗೂ ವಿವಿಧ ಯೋಗ ಸಂಸ್ಥೆಗಳ ಸಹಯೋಗದಲ್ಲಿ ಜೂ. ೨೧ರಂದು ೧೨ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ನಗರದ ಕಾವೇರಿ ಹಾಲ್‌ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಆಯುಷ್ ಅಧಿಕಾರಿ ಶೈಲಜಾ ಹೇಳಿದರು.
ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ ೬.೪೫ ಗಂಟೆಗೆ ಉದ್ಘಾಟನೆ ನಡೆಯಲಿದ್ದು, ಬೆಳಗ್ಗೆ ೭ ರಿಂದ ೮ ಗಂಟೆಯವರೆಗೆ ಯೋಗ ಪ್ರಾತ್ಯಕ್ಷಿಕೆ ನಡೆಯಲಿದೆ. ಜೂ.೧೯ರಂದು ಸಂಜೆ ೫ ಗಂಟೆಗೆ ಯೋಗಾಸನಗಳ ಪೂರ್ವಭ್ಯಾಸವನ್ನು ಜಿಲ್ಲಾ ಸರ್ಕಾರಿ ಆಯುರ್ವೇದ ಆಸ್ಪತ್ರೆಯಲ್ಲಿ ನಡೆಸಲಾಗುವುದು. ಜೂ. ೧೬ ರಂದು ಬೆಳಗ್ಗೆ ೮.೩೦ ಗಂಟೆಗೆ ಗಾಂಧಿ ಮೈದಾನದಿಂದ ಜನರಲ್ ತಿಮ್ಮಯ್ಯ ವೃತ್ತ, ಹಳೆಯ ಖಾಸಗಿ ಬಸ್ ನಿಲ್ದಾಣ, ಇಂದಿರಾ ಗಾಂಧಿ ವೃತ್ತದಿಂದ ಗಾಂಧಿ ಮೈದಾನದವರೆಗೆ ಯೋಗ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.ಜೂ.೨೧ರ ಕಾರ್ಯಕ್ರಮಕ್ಕೆ ಉಸ್ತುವಾರಿ ಸಚಿವರು ಹಾಗೂ ಜನಪ್ರತಿನಿದಿಗಳನ್ನು ಆಹ್ವಾನಿಸಲಾಗಿದೆ. ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ನಗರದ ನಿವಾಸಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.ವೈದ್ಯಾಧಿಕಾರಿ ಡಾ. ಅರುಣ್ ಮಾತನಾಡಿ, ಇಲಾಖೆ ವತಿಯಿಂದ ಪ್ರತಿಯೊಬ್ಬರಿಗೂ ಯೋಗ ತಲುಪಿಸುವ ನಿಟ್ಟಿನಲ್ಲಿ ಗ್ರಾಪಂ, ನ್ಯಾಯಾಲಯ, ಸರ್ಕಾರಿ ಕಚೇರಿ, ಸರ್ಕಾರೇತರ ಸಂಸ್ಥೆಗಳಲ್ಲಿ ೧೦-೧೫ ನಿಮಿಷ ಯೋಗ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಆಸಕ್ತರು https://moa.habit.yoga? ref=karnataka ಲಿಂಕ್ ಬಳಸಿ ಆನ್‌ಲೈನ್‌ನಲ್ಲಿ ಯೋಗ ತರಬೇತಿ ಪಡೆಯಬಹುದು. ಜೂ.೨೨ರಂದು ಆನ್‌ಲೈನ್‌ನಲ್ಲಿ ಗೂಗಲ್ ಮೀಟ್ ಫ್ಲಾಟ್‌ಫಾರಂನಲ್ಲಿ ಸ್ಥಳೀಯ ಯೋಗ ತರಬೇತುದಾರರಿಂದ ಬೆಳಗ್ಗೆ ೫.೩೦ರಿಂದ ೫.೩೦ರವರೆಗೆ ೪೫ ನಿಮಿಷ ಯೋಗ ತರಬೇತಿ ಮತ್ತು ೧೫ ನಿಮಿಷ ನುರಿತ ವೈದ್ಯರಿಂದ ಆರೋಗ್ಯಕ್ಕೆ ಸಂಬಂಧಿಸಿದಂತೆ ಉಪನ್ಯಾಸ ನೀಡಲಾಗುವುದು ಎಂದು ವಿವರಿಸಿದರು.
ಯೋಗ ಶಿಕ್ಷಕ ಕೆ.ಕೆ. ಮಹೇಶ್ ಕುಮಾರ್ ಮಾತನಾಡಿ, ಯೋಗವು ಶರೀರ ಮತ್ತು ಮನಸ್ಸನ್ನು ಸದೃಢಗೊಳಿಸುತ್ತದೆ. ಆದ್ದರಿಂದ ಪ್ರತಿಯೊಬ್ಬರು ಯೋಗ ಮಾಡುವುದು ಅಗತ್ಯವಾಗಿದೆ. ಈ ಕಾರ್ಯಕ್ರಮಕ್ಕೆ ಆಸಕ್ತ ಯೋಗಪಟುಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ಸಿಗೊಳಿಸಬೇಕು ಎಂದು ಮನವಿ ಮಾಡಿದರು.
ನೀಮಾ ಕೊಡಗು ಜಿಲ್ಲಾಧ್ಯಾಕ್ಷ ರಾಜರಾಮ್ ಮಾತನಾಡಿ, ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಯೋಗ ಕೇಂದ್ರಗಳಿಂದ ಸೆಲ್ಫಿ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಹೆಚ್ಚು ಸೆಲ್ಫ್ ಕಳುಹಿಸಿದವರಿಗೆ ಬಹುಮಾನ ನೀಡಲಾಗುವುದು ಎಂದು ವಿವರಿಸಿದರು. ಸುದ್ದಿಗೋಷ್ಠಿಯಲ್ಲಿ ಪ್ರಮುಖರಾದ ಸುಧಾಕರ್, ಕೆ.ಟಿ. ಕಾರ್ಯಪ್ಪ ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.