ಮಡಿಕೇರಿ : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಕೊಡಗು ಜಿಲ್ಲಾ ಅಂಧತ್ವ ನಿಯಂತ್ರಣ ಸಂಸ್ಥೆಯ ಸಹಯೋಗದಲ್ಲಿ 41 ನೇ ರಾಷ್ಟ್ರೀಯ ನೇತ್ರದಾನ ಪಾಕ್ಷಿಕ ಆಚರಿಸಲಾಯಿತು.ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಪ್ರಾಂಶುಪಾಲ ಡಾ.ವಿಶಾಲ್ ಕುಮಾರ್, ಮುಖ್ಯ ಆಡಳಿತಾಧಿಕಾರಿ ರೋಹಿಣಿ, ವೈದ್ಯಕೀಯ ಅಧೀಕ್ಷಕ ಡಾ.ಸೋಮಶೇಖರ್, ಜಿಲ್ಲಾ ಅಂಧತ್ವ ನಿಯಂತ್ರಣ ಸಂಸ್ಥೆಯ ಕಾರ್ಯಕ್ರಮ ಅಧಿಕಾರಿ ಡಾ.ಸನತ್ ಕುಮಾರ್, ಆರ್‌ಎಂಒ ಡಾ.ಅಭಿನಂದನ್. ಬಿ, ನೇತ್ರ ವಿಭಾಗದ ಮುಖ್ಯಸ್ಥೆ ಡಾ.ಕೃಪಾಲಿನಿ ಅಯ್ಯಪ್ಪ, ಸೋಟ್ಟೋ ನೋಡಲ್ ಅಧಿಕಾರಿ ಡಾ.ನಿಶೀದ್ ಜೋಸೆಫ್, ಅಕಾಡೆಮಿಕ್ ರಿಜಿಸ್ಟ್ರಾರ್ ಡಾ.ರವಿಕಿರಣ್ ಕಿಸಾನ್, ಇಎನ್‌ಟಿ ವಿಭಾಗದ ಮುಖ್ಯಸ್ಥೆ ಡಾ.ಶ್ವೇತಾ ಹಾಗೂ ಸಹ ಪ್ರಾಧ್ಯಾಪಕ ಡಾ. ಸತ್ಯಕಿ ಉಪಸ್ಥಿತರಿದ್ದರು.
ವೈದ್ಯಕೀಯ ಅಧೀಕ್ಷಕ ಡಾ.ಸೋಮಶೇಖರ್ ಅವರು ಕಣ್ಣಿನ ದಾನ ಮಾತ್ರವಲ್ಲದೆ ಅಂಗಾಂಗ ದಾನವು ಅನೇಕ ಜೀವಗಳಿಗೆ ಹೊಸ ಆಶಾಕಿರಣವಾಗುತ್ತದೆ ಎಂದು ಹೇಳಿದರು.ಜಿಲ್ಲಾ ಅಂಧತ್ವ ನಿಯಂತ್ರಣ ಸಂಸ್ಥೆಯ ಕಾರ್ಯಕ್ರಮಾಧಿಕಾರಿ ಡಾ.ಸನತ್ ಕುಮಾರ್ ಪ್ರತಿಯೊಬ್ಬರೂ ನೇತ್ರದಾನದ ಪ್ರತಿಜ್ಞೆ ಕೈಗೊಂಡು ಅದರ ಮಹತ್ವವನ್ನು ತಮ್ಮ ಕುಟುಂಬ ಹಾಗೂ ಬಂಧುಗಳಿಗೂ ತಿಳಿಸಬೇಕೆಂದು ಕರೆ ನೀಡಿದರು.
ಅಕಾಡೆಮಿಕ್ ರಿಜಿಸ್ಟ್ರಾರ್ ಡಾ.ರವಿಕಿರಣ್ ಕಿಸಾನ್ , ನೇತ್ರ ವಿಭಾಗದ ಮುಖ್ಯಸ್ಥೆ ಡಾ.ಕೃಪಾಲಿನಿ ಅಯ್ಯಪ್ಪ ಮಾತನಾಡಿದರು.ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ನೇತ್ರಾಧಿಕಾರಿ ಕಾವ್ಯ ನಿರೂಪಿಸಿದರು. ಪ್ರಥಮ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿ ಡಾ. ಶಿವಪ್ರಸನ್ನ ವಂದಿಸಿದರು.ದ್ವಿತೀಯ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿನಿ ಡಾ.ನಿಶಾ, ನೇತ್ರಾಧಿಕಾರಿ ಚೇತನ್, ರಾಘವೇಂದ್ರ, ಯಜ್ಞ ಪೂಜಾರಿರ, ಸಿಸ್ಟಮ್ ಎಂಜಿನಿಯರ್ ಅಪ್ಪಯ್ಯ, ಅಮಿತಾ, ಡಿಇಒ ಹಾಗೂ ಜಿಲ್ಲಾ ಅಂಧತ್ವ ನಿಯಂತ್ರಣ ಸಂಸ್ಥೆಯ ಡಿಇಒ ಕೌಶಿ ಸೇರಿದಂತೆ ಎಂಬಿಬಿಎಸ್ ಮತ್ತು ಪ್ಯಾರಾಮೆಡಿಕಲ್ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಇದ್ದರು. ನೇತ್ರ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ಕಿರಣ್ ಭಟ್ ಸ್ವಾಗತಿಸಿದರು.