ಮಡಿಕೇರಿ: ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಮಂತ್ರಿಮಂಡಲದಲ್ಲಿ ಕೊಡಗು ಜಿಲ್ಲೆಯ ಶಾಸಕದ್ವಯರಾದ ಡಾ. ಮಂತರ್ ಗೌಡ ಹಾಗೂ ಎ.ಎಸ್. ಪೊನ್ನಣ್ಣ ಅವರಿಗೆ ಸಚಿವ ಸ್ಥಾನ ಲಭಿಸಲಿ ಎಂದು ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಯು ನಗರದ ಕೋಟೆ ಶ್ರೀ ಮಹಾಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿತು.ಪೂಜೆಯ ನೇತೃತ್ವ ವಹಿಸಿ ಮಾತನಾಡಿದ ಪ್ರಚಾರ ಸಮಿತಿ ಅಧ್ಯಕ್ಷ ವಿ.ಜಿ. ಮೋಹನ್ ಅವರು, ಜಿಲ್ಲೆಯ ಇಬ್ಬರು ಶಾಸಕರು ಸಚಿವ ಸ್ಥಾನವನ್ನು ಹೊಂದಲು ಸಮರ್ಥರಾಗಿದ್ದಾರೆ. ನಾಡಿನ ಒಳಿತಿಗಾಗಿ ಸಚಿವ ಸ್ಥಾನ ಲಭಿಸಲಿ ಎಂದು ಪ್ರಾರ್ಥಿಸಿರುವುದಾಗಿ ತಿಳಿಸಿದರು. ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ.ವೈ. ರಾಜೇಶ್, ಶ್ರೀ ಓಂಕಾರೇಶ್ವರ ದೇವಾಲಯ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಚುಮ್ಮಿ ದೇವಯ್ಯ, ಕೆಪಿಸಿಸಿ ಸದಸ್ಯ ಎಚ್.ಎಂ. ನಂದ ಕುಮಾರ್, ನಗರಾಧ್ಯಕ್ಷ ಪ್ರಕಾಶ್ ಆಚಾರ್ಯ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಶಿ, ಕಾರ್ಮಿಕ ಘಟಕದ ಅಧ್ಯಕ್ಷ ದಿನೇಶ್, ಪ್ರಚಾರ ಸಮಿತಿ ಉಪಾಧ್ಯಕ್ಷ ದೇರಾಜೆ ಕಿರಣ್, ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ಹರಿಪ್ರಸಾದ್ ಕೋಚನ, ಮನು ಮುದ್ದಪ್ಪ, ಪ್ರಚಾರ ಸಮಿತಿ ಕಾರ್ಯದರ್ಶಿ ಕೀರ್ತನ್ ಮೂವನ್, ಕವನ್ ಕೊತ್ತೋಳಿ, ಶರಣ್, ವಸಂತ್ ಭಟ್, ಅರ್ಜುನ್, ಕೋಚನ ಚೇತನ, ಮಿನಾಜ್ ಪ್ರವೀಣ್, ಹಬೀಬ್, ಜಿ.ಸಿ. ಜಗದೀಶ್ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.