)
ಮಡಿಕೇರಿ: ಕೇಂದ್ರ ಸರ್ಕಾರವು ದೇಶದಲ್ಲಿ ಮುಂಬರುವ ಖರೀದಿ ಋತುವಿನ ಹಿನ್ನಲೆಯಲ್ಲಿ ಮತ್ತು ಪರಿಣಾಮಕಾರಿ ಲಾಜಿಸ್ಟಿಕ್ಸ್ ಮತ್ತು ಸಂಗ್ರಹಣೆಗಾಗಿ ರಾಜ್ಯಗಳು ಎದುರಿಸುತ್ತಿರುವ ಅಡಚಣೆಗಳಿಂದಾಗಿ ಎನ್‌ಎಫ್‌ಎಸ್‌ಎ ಅಡಿಯಲ್ಲಿ ಮೇ ಮತ್ತು ಜೂನ್-2026 ರ ಎರಡು ಮಾಹೆಗಳ ಅಹಾರಧಾನ್ಯ ಹಂಚಿಕೆಯನ್ನು ಮುಂಗಡವಾಗಿ ಎತ್ತುವಳಿ ಮಾಡಿ ಕೂಡಲೇ ವಿತರಣೆ ಮಾಡುವಂತೆ ರಾಜ್ಯಗಳಿಗೆ ಸೂಚಿಸಿದೆ. ಈ ಪ್ರಯುಕ್ತ ಮೇ ಮತ್ತು ಜೂನ್ರ ತಿಂಗಳ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ (ಎನ್‌ಎಫ್‌ಎಸ್) ಹಂಚಿಕೆಯನ್ನು ಮೇ ತಿಂಗಳಲ್ಲಿ ವಿತರಿಸಲು ಸರ್ಕಾರವು ನಿರ್ದೇಶನ ನೀಡಿರುತ್ತದೆ.ಪ್ರಯುಕ್ತ ಕೊಡಗು ಜಿಲ್ಲೆಯ ಪ್ರತಿ ಅಂತ್ಯೋದಯ (ಎಎವೈ) ಪಡಿತರ ಚೀಟಿಗೆ 70 ಕೆ.ಜಿ (ಮೇ-35 + ಜೂನ್-35) ಅಕ್ಕಿ ಮತ್ತು ಪಿ.ಹೆಚ್.ಹೆಚ್ (ಬಿಪಿಎಲ್) ಪಡಿತರ ಚೀಟಿಯಲ್ಲಿನ ಪ್ರತಿ ಫಲಾನುಭವಿಗೆ 10 ಕೆ.ಜಿ (ಮೇ-5 + ಜೂನ್-5) ಅಕ್ಕಿಯನ್ನು ಉಚಿತವಾಗಿ ವಿತರಿಸಲಾಗುತ್ತದೆ. ಮೇ ಮತ್ತು ಜೂನ್ ತಿಂಗಳ ಆಹಾರಧಾನ್ಯವನ್ನು ಮೇ ತಿಂಗಳಿನಲ್ಲಿ ಒಟ್ಟಿಗೆ ವಿತರಣೆ ಮಾಡಬೇಕಿರುವುದರಿಂದ ವಿತರಣಾ ಸಂದರ್ಭದಲ್ಲಿ ಪ್ರತಿ ಮಾಹೆಯ ವಿತರಣೆಗೆ ಫಲಾನುಭವಿಗಳಿಂದ ಪ್ರತ್ಯೇಕ ಬಯೋ ಮೆಟ್ರಿಕ್ ಪಡೆಯುವ ಅವಕಾಶವನ್ನು ಕಲ್ಪಿಸಿದ್ದು, ಪಡಿತರ ಚೀಟಿ ಫಲಾನುಭವಿಗಳು ಮೇ ಮತ್ತು ಜೂನ್ ತಿಂಗಳ ಬಯೋ ಮೆಟ್ರಿಕ್ ನೀಡಿ ಆಹಾರಧಾನ್ಯವನ್ನು ಪಡೆಯಲು ಜಿಲ್ಲೆಯ ಎಲ್ಲ ಪಡಿತರ ಚೀಟಿದಾರರಿಗೆ ತಿಳಿಸಲಾಗಿದೆ.