ಮಡಿಕೇರಿ: ಮಾವು, ಹಲಸು ಮೇಳಕ್ಕೆ ಜಿಲ್ಲಾಧಿಕಾರಿ ಚಾಲನೆ

KannadaprabhaNewsNetwork |  
Published : May 25, 2024, 12:45 AM IST
ಚಿತ್ರ : 24ಎಂಡಿಕೆ5 : ಮಾವು ಮತ್ತು ಹಲಸು ಮೇಳಕ್ಕೆ ಜಿಲ್ಲಾಧಿಕಾರಿ ಚಾಲನೆ  | Kannada Prabha

ಸಾರಾಂಶ

ಮಡಿಕೇರಿ ನಗರದ ಅಂಚೆ ಕಚೇರಿಯ ಎದುರು ಇರುವ ಹೈಟೆಕ್ ಮಾರಾಟ ಮಳಿಗೆಯ ಆವರಣದಲ್ಲಿ ಮೇ 26ರ ವರೆಗೆ ಆಯೋಜಿಸಲಾದ ‘ಮಾವು ಮತ್ತು ಹಲಸು ಮೇಳ’ಕ್ಕೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಶುಕ್ರವಾರ ಚಾಲನೆ ನೀಡಿದರು.

ಕನ್ನಡಪ್ರಭ ವಾರ್ತೆ ಮಡಿಕೇರಿ

ತೋಟಗಾರಿಕಾ ಇಲಾಖೆಯ ಅಂಗ ಸಂಸ್ಥೆಯಾದ ಕೊಡಗು ಜಿಲ್ಲಾ ಹಾಪ್ ಕಾಮ್ಸ್ ಸಂಸ್ಥೆ ವತಿಯಿಂದ ನಗರದ ಅಂಚೆ ಕಚೇರಿಯ ಎದುರು ಇರುವ ಹೈಟೆಕ್ ಮಾರಾಟ ಮಳಿಗೆಯ ಆವರಣದಲ್ಲಿ ಮೇ 26ರ ವರೆಗೆ ಆಯೋಜಿಸಲಾದ ‘ಮಾವು ಮತ್ತು ಹಲಸು ಮೇಳ’ಕ್ಕೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಶುಕ್ರವಾರ ಚಾಲನೆ ನೀಡಿದರು.ಚಾಲನೆ ನೀಡಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್ ರಾಜಾ, ಮಲ್ಲಿಕಾ, ಸಿಂಧೂರ, ಬಾದಾಮಿ, ರಸಪುರಿ, ತೋತಾಪುರಿ ಸೇರಿದಂತೆ ವಿವಿಧ ರೀತಿಯ ಮಾವು ಮತ್ತು ಹಲಸು ಮಾರಾಟಕ್ಕೆ ಇವೆ ಎಂದರು.ಮಾವು ಮತ್ತು ಹಲಸು ಪ್ರಿಯರಿಗೆ ಆರೋಗ್ಯದಾಯಕ ಹಣ್ಣುಗಳನ್ನು ಕೊಳ್ಳಲು ಸೂಕ್ತ ವ್ಯವಸ್ಥೆ ಕಲ್ಪಿಸುವುದು ಮಾವು ಮೇಳದ ಉದ್ದೇಶವಾಗಿದೆ. ಮಾವು ಮತ್ತು ಹಲಸು ಬೆಳೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ವಿವಿಧ ಜಿಲ್ಲೆಗಳಲ್ಲಿ ಮಾವು ಮತ್ತು ಹಲಸು ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಎಚ್.ಆರ್.ಯೋಗೇಶ್ ಮಾತನಾಡಿ, ನೈಸರ್ಗಿಕವಾಗಿ ಮಾಗಿಸಿದ ಕಾರ್ಬೈಡ್ ಮುಕ್ತ ಹಣ್ಣುಗಳನ್ನು ರೈತರಿಂದ ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡುವುದು ಮಾವು ಮೇಳದ ಉದ್ದೇಶವಾಗಿದೆ ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಕೊಡಗು ಜಿಲ್ಲಾ ಹಾಪ್‌ಕಾಮ್ಸ್ ಅಧ್ಯಕ್ಷ ಬಿದ್ದಾಟಂಡ ರಮೇಶ್ ಚಂಗಪ್ಪ, ಉಪಾಧ್ಯಕ್ಷ ಮಲ್ಲಂಡ ಮಧುದೇವಯ್ಯ, ನಿರ್ದೇಶಕರಾದ ನಾಗೇಶ್ ಕುಂದಲ್ಪಾಡಿ, ಕಾಂಗೀರ ಸತೀಶ್, ಬಿ.ಎ.ಹರೀಶ್, ಎಸ್.ಪಿ.ಪೊನ್ನಪ್ಪ, ಬೇಬಿ ಪೂವಯ್ಯ, ಲೀಲಾ ಮೇದಪ್ಪ, ಎಂ.ಮನೋಹರ್, ಪೂವಪ್ಪ ನಾಯಕ, ಉಮೇಶ್‌ರಾಜ ಅರಸ್, ಸುಧೀರ್, ಹಾಪ್‌ಕಾಮ್ಸ್ ಸಿಇಒ ರೇಷ್ಮ ಗಿರೀಶ್, ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಮುತ್ತಪ್ಪ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಚೈತ್ರ ‌ನವರಾತ್ರಿ ನಿಮಿತ್ತ ಕನ್ನಡ ಗೀತೆ ಜತೆ ಮೋದಿ ಶುಭಾಶಯ -ದಿನಕ್ಕೊಂದು ಭಾಷೆಯ ಗೀತೆ ಪೋಸ್ಟ್‌
ಸೌದೆ ಒಲೆಗೆ ಖಾನಾವಳಿ ಮೊರೆ-ಒಂದು ಕ್ವಿಂಟಲ್ ಕಟ್ಟಿಗೆಗೆ 900 ರು. ವೆಚ್ಚ