ಕನ್ನಡಪ್ರಭ ವಾರ್ತೆ ಮಡಿಕೇರಿಸಂವಿಧಾನ ದಿನಾಚರಣೆ ಪ್ರಯುಕ್ತ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಶುಕ್ರವಾರ ಜಾಗೃತಿ ಅಭಿಯಾನದ ಸ್ತಬ್ಧ ಚಿತ್ರಕ್ಕೆ ಚಾಲನೆ ನೀಡಿದರು.
ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಚಾಲನೆ ನೀಡಿ ಮಾತನಾಡಿದ ಅವರು, ಸಂವಿಧಾನದ ಮಹತ್ವ ತಿಳಿಯುವ ನಿಟ್ಟಿನಲ್ಲಿ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದರು.ಜಿಲ್ಲೆಯ 103 ಗ್ರಾಮ ಪಂಚಾಯಿತಿಗಳಲ್ಲಿ 22 ದಿನಗಳ ಕಾಲ ಸಂವಿಧಾನ ಜಾಗೃತಿ ಜಾಥಾ ಅಭಿಯಾನ ನಡೆಯಲಿದ್ದು, ಶಾಲಾ-ಕಾಲೇಜುಗಳು ಸೇರಿದಂತೆ ಜಿಲ್ಲೆಯ ವಿವಿಧ ಸರ್ಕಾರಿ ಮತ್ತು ಸರ್ಕಾರೇತರ ಸಂಸ್ಥೆಗಳು ಕೈಜೋಡಿಸುವಂತೆ ಕೋರಿದರು.
ಗ್ರಾ.ಪಂ. ವ್ಯಾಪ್ತಿಯಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ಸಿಗೆ ಸಹಕರಿಸುವಂತೆ ಮನವಿ ಮಾಡಿದರು.ಭಾರತ ಸಂವಿಧಾನ ಪೀಠಿಕೆ, ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪರಿಕಲ್ಪನೆ ಸಾಮಾಜಿಕ ನ್ಯಾಯ, ಆರ್ಥಿಕ, ಮತ್ತು ರಾಜಕೀಯ ಪರಿಕಲ್ಪನೆ, ಬಸವಣ್ಣನವರ ವಚನಗಳು, ಭಾರತದ ಸಂವಿಧಾನದಲ್ಲಿ ವಚನಗಳ ಪ್ರಸ್ತುತತೆ, ಜಿಲ್ಲೆಯ ಸ್ಥಳೀಯ ಐತಿಹಾಸಿಕ ವ್ಯಕ್ತಿಗಳು, ಸಾಹಿತ್ಯ ದಿಗ್ಗಜರು ಸೇರಿದಂತೆ ಪ್ರಮುಖ ವ್ಯಕ್ತಿಗಳು ಮತ್ತು ಸ್ಥಳೀಯ ಕಲೆ ಮತ್ತು ಸಂಸ್ಕೃತಿಗಳನ್ನು ಒಳಗೊಂಡ ‘ಸ್ತಬ್ಧಚಿತ್ರ’ ಮೂಲಕ ಸಂವಿಧಾನದ ಜಾಗೃತಿ ಜಾಥಾ ಅಭಿಯಾನ ನಡೆಯಲಿದೆ.
ಶಾಸಕ ಡಾ.ಮಂತರ್ ಗೌಡ, ನಗರಸಭೆ ಅಧ್ಯಕ್ಷೆ ಎನ್.ಪಿ.ಅನಿತಾ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ. ಸಿಇಒ ವರ್ಣಿತ್ ನೇಗಿ, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶೇಖರ್, ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ದಿವಾಕರ, ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಗೌರವ ಕಾರ್ಯದರ್ಶಿ ರೇವತಿ ರಮೇಶ್ ಇತರರು ಇದ್ದರು.ಎಲ್ಲೆಲ್ಲಿ ಸಂವಿಧಾನ ಜಾಗೃತಿ ಅಭಿಯಾನ: ಮಡಿಕೇರಿ ತಾಲೂಕಿನಲ್ಲಿ ಜ.27ರಂದು ಪೆರಾಜೆ, ಚೆಂಬು, ಸಂಪಾಜೆ, ಮದೆ, ಮೇಕೇರಿ ಗ್ರಾಮಗಳಲ್ಲಿ ಜಾಥ ಸಂಚರಿಸಲಿದೆ.
ಜ.28ರಂದು ಬೆಟ್ಟಗೇರಿ, ಚೇರಂಬಾಣೆ, ಕುಂದಚೇರಿ, ಕರಿಕೆ, ಜ.29ರಂದು ಭಾಗಮಂಡಲ, ಅಯ್ಯಂಗೇರಿ, ಬಲ್ಲಮಾವಟಿ, ಎಮ್ಮೆಮಾಡು, ನಾಪೋಕ್ಲು, ಜ.30ರಂದು ಕುಂಜಿಲ ಕಕ್ಕಬ್ಬೆ, ನರಿಯಂದಡ, ಕೊಣಂಜಗೇರಿಪಾರಾಣೆ, ಹೊದ್ದೂರು, ಮೂರ್ನಾಡು, ಜ.31ರಂದು ಹಾಕತ್ತೂರು, ಮರಗೋಡು, ಹೊಸ್ಕೇರಿ, ಕಡಗದಾಳು, ಕೆ.ನಿಡುಗಣೆ, ಫೆ.1ರಂದು ಗಾಳಿಬೀಡು, ಮಕ್ಕಂದೂರು.ಫೆ.1ರಂದು ಸೋಮವಾರಪೇಟೆ ಮತ್ತು ಕುಶಾಲನಗರ ತಾಲೂಕಿನ ಕೆದಕಲ್, ಚೆಟ್ಟಳ್ಳಿ, ಫೆ.2ರಂದು ಸುಂಟಿಕೊಪ್ಪ, ಹರದೂರು, ಮಾದಪುರ, ಗರ್ವಾಲೆ, ಕಿರಗಂದೂರು ಗ್ರಾಮಗಳಲ್ಲಿ ಅಭಿಯಾನ ನಡೆಯಲಿದೆ.
ಫೆ.3ರಂದು ಐಗೂರು, ಬೇಲೂರು, ತೋಳೂರು ಶೆಟ್ಟಳ್ಳಿ, ಬೆಟ್ಟದಳ್ಳಿ, ಶಾಂತಳ್ಳಿ, ಫೆ.4ರಂದು ಸೋಮವಾರಪೇಟೆ ಪಟ್ಟಣ ಪಂಚಾಯಿತಿ, ಹಾನಗಲ್ಲು, ಚೌಡ್ಲು, ದೊಡ್ಡಮಳ್ತೆ, ಗೌಡಳ್ಳಿ ಇಲ್ಲಿ ಅಭಿಯಾನ ನಡೆಯಲಿದೆ.ಫೆ.5ರಂದು ಬೆಸ್ಸೂರು, ಕೊಡ್ಲಿಪೇಟೆ, ಬ್ಯಾಡಗೊಟ್ಟ, ಹಂಡ್ಲಿ, ಶನಿವಾರಸಂತೆ, ಫೆ.6ರಂದು ದುಂಡಳ್ಳಿ, ನಿಡ್ತ, ಆಲೂರು ಸಿದ್ದಾಪುರ, ಗಣಗೂರು, ನೇರುಗಳಲೆ. ಫೆ.7ರಂದು ಶಿರಂಗಾಲ, ತೊರೆನೂರು, ಹೆಬ್ಬಾಲೆ, ಕೂಡಿಗೆ, ಕೂಡುಮಂಗಳೂರು ಇಲ್ಲಿ ಅಭಿಯಾನ ನಡೆಯಲಿದೆ.
ಫೆ.8ರಂದು ನಾಕೂರು ಶಿರಂಗಾಲ, 7ನೇ ಹೊಸಕೋಟೆ, ಕಂಬಿಬಾಣೆ, ಕೊಡಗರಹಳ್ಳಿ, ಗುಡ್ಡೆಹೊಸೂರು, ಫೆ.9ರಂದು ಕುಶಾಲನಗರ ಪುರಸಭೆ, ನಂಜರಾಯಪಟ್ಟಣ, ವಾಲ್ನೂರು ತ್ಯಾಗತ್ತೂರು, ನೆಲ್ಲಿಹುದಿಕೇರಿ.ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲೂಕಿನಲ್ಲಿ ಫೆ.10ರಂದು ಸಿದ್ದಾಪುರ, ಮಾಲ್ದಾರೆ, ಚೆನ್ನಯ್ಯನ ಕೋಟೆ, ಪಾಲಿಬೆಟ್ಟ, ಫೆ.11ರಂದು ಹೊಸೂರು, ಕಾರ್ಮಾಡು, ಅಮ್ಮತ್ತಿ, ಕಣ್ಣಂಗಾಲ, ಹಾಲುಗುಂದ, ಫೆ.12ರಂದು ಬಿಳುಗುಂದ, ಚೆಂಬೆಳ್ಳೂರು, ಕಾಕೋಟು ಪರಂಬು, ಕದನೂರು, ಕೆದಮುಳ್ಳೂರು, ಫೆ.13ರಂದು ವಿರಾಜಪೇಟೆ ಪುರಸಭೆ, ಬೇಟೋಳಿ, ಆರ್ಜಿ, ಬಿಟ್ಟಂಗಾಲ, ಬಿ.ಶೆಟ್ಟಿಗೇರಿ, ಫೆ.14ರಂದು ಹಾತೂರು, ಗೋಣಿಕೊಪ್ಪಲು, ಅರುವತ್ತೋಕ್ಲು, ಪೊನ್ನಂಪೇಟೆ, ಕಿರುಗೂರು, ಫೆ.15ರಂದು ಹುದಿಕೇರಿ, ಬಿರುನಾಣಿ, ಟಿ.ಶೆಟ್ಟಿಗೇರಿ, ಶ್ರೀಮಂಗಲ ಮತ್ತು ಕುಟ್ಟ ಗ್ರಾಮದಲ್ಲಿ ಸಂವಿಧಾನ ಜಾಗೃತಿ ಜಾಥ ನಡೆಯಲಿದೆ. ಫೆ.16ರಂದು ಕೆ.ಬಾಡಗ, ನಾಲ್ಕೇರಿ, ಕಾನೂರು, ಬಲ್ಯಮಂಡೂರು, ನಿಟ್ಟೂರು, ಫೆ.17ರಂದು ಬಾಳಲೆ, ಪೊನ್ನಪ್ಪಸಂತೆ, ಮಾಯಮುಡಿ, ದೇವರಪುರ, ತಿತಿಮತಿ, ಈ ಪ್ರದೇಶಗಳಲ್ಲಿ ಸಂವಿಧಾನ ಜಾಗೃತಿ ಅಭಿಯಾನ ನಡೆಯಲಿದೆ.