ಮಡಿಕೇರಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ

KannadaprabhaNewsNetwork |  
Published : Jun 24, 2026, 03:45 AM IST
ಚಿತ್ರ : 23ಎಂಡಿಕೆ1 : ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಜಿಲ್ಲಾ ನ್ಯಾಯಾಲಯದಲ್ಲಿ ತಪಾಸಣೆ.  | Kannada Prabha

ಸಾರಾಂಶ

ಮಡಿಕೇರಿ ನಗರದ ಹೊರ ವಲಯದಲ್ಲಿರುವ ಜಿಲ್ಲಾ ನ್ಯಾಯಾಲಯವನ್ನು ಮಧ್ಯಾಹ್ನ 2 ಗಂಟೆಗೆ ಸೈನೆಡ್ ಬಾಂಬ್ ಬಳಸಿ ಸ್ಫೋಟಿಸುತ್ತೇವೆ ಎಂಬ ಇಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ನ್ಯಾಯಾಲಯದಲ್ಲಿ ಆತಂಕ ಸೃಷ್ಟಿಯಾಯಿತು.

ಮಡಿಕೇರಿ: ಮಡಿಕೇರಿ ನಗರದ ಹೊರ ವಲಯದಲ್ಲಿರುವ ಜಿಲ್ಲಾ ನ್ಯಾಯಾಲಯವನ್ನು ಮಧ್ಯಾಹ್ನ 2 ಗಂಟೆಗೆ ಸೈನೆಡ್ ಬಾಂಬ್ ಬಳಸಿ ಸ್ಫೋಟಿಸುತ್ತೇವೆ ಎಂಬ ಇಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ನ್ಯಾಯಾಲಯದಲ್ಲಿ ಆತಂಕ ಸೃಷ್ಟಿಯಾಯಿತು. ಸೆಷನ್ಸ್‌ ಜಡ್ಜ್ ಕಚೇರಿಗೆ ಬಂದ ಬೆದರಿಕೆ ಸಂದೇಶದಿಂದ ಮಂಗಳವಾರ ನ್ಯಾಯಾಲಯದ ಕಾರ್ಯ ಕಲಾಪಗಳನ್ನು ತಾತ್ಕಾಲಿಕವಾಗಿ ಸ್ಥಗಿತವಾಗಿತ್ತು. ಪೊಲೀಸರು ನ್ಯಾಯಾಲಯದಲ್ಲಿ ತಪಾಸಣೆ ನಡೆಸಿದರು. ನ್ಯಾಯಲಯದ ಹೊರಗೆ ನ್ಯಾಯಾಧೀಶರು, ವಕೀಲರು, ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಕಾಯುವ ಪ್ರಸಂಗ ಎದುರಾಯಿತು. ಮಡಿಕೇರಿ ಜಿಲ್ಲಾ ನ್ಯಾಯಾಲಯಕ್ಕೆ ಎರಡನೇ ಬಾರಿಗೆ ಬೆದರಿಕೆ ಸಂದೇಶ ಬಂದಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ ₹1.02 ಕೋಟಿ ಮೌಲ್ಯದ ಮದ್ಯ ಜಪ್ತಿ
ವಿಚಿತ್ರ ದೇಹ ರಚನೆಯ ಕರು ಜನನ