ಮಡಿಕೇರಿ ದಸರಾ: ಡಿಜೆ ಬಳಕೆ ಅನುಮತಿ ಕಾನೂನು ಪ್ರಕಾರ ನಿರ್ಧರಿಸಲು ಡಿಸಿಗೆ ಹೈಕೋರ್ಟ್ ನಿರ್ದೇಶನ

KannadaprabhaNewsNetwork |  
Published : Oct 10, 2026, 02:45 AM IST
ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. | Kannada Prabha

ಸಾರಾಂಶ

ಮಡಿಕೇರಿ ದಸರಾ ಆಚರಣೆ ಸಂಬಂಧ ಸ್ತಬ್ಧಚಿತ್ರಗಳ ಮೆರವಣಿಗೆ ವೇಳೆ ಡಿಜೆ ಧ್ವನಿವರ್ಧಕ ಬಳಸಲು ಅನುಮತಿ ನೀಡಲು ಕೋರಿ ದಸರಾ ದಶಮಂಟಪ ಸಮಿತಿ ಸಲ್ಲಿಸಿರುವ ಮನವಿ ಪತ್ರವನ್ನು ಪರಿಗಣಿಸಿ ಅ.15ರೊಳಗೆ ಕಾನೂನು ಪ್ರಕಾರ ನಿರ್ಧಾರ ಕೈಗೊಳ್ಳುವಂತೆ ಕೊಡಗು ಜಿಲ್ಲಾಧಿಕಾರಿಗೆ ಹೈಕೋರ್ಟ್‌ ನಿರ್ದೇಶಿಸಿದೆ.

ಬೆಂಗಳೂರು : ಮಡಿಕೇರಿ ದಸರಾ ಆಚರಣೆ ಸಂಬಂಧ ಸ್ತಬ್ಧಚಿತ್ರಗಳ ಮೆರವಣಿಗೆ ವೇಳೆ ಡಿಜೆ ಧ್ವನಿವರ್ಧಕ ಬಳಸಲು ಅನುಮತಿ ನೀಡಲು ಕೋರಿ ದಸರಾ ದಶಮಂಟಪ ಸಮಿತಿ ಸಲ್ಲಿಸಿರುವ ಮನವಿ ಪತ್ರವನ್ನು ಪರಿಗಣಿಸಿ ಅ.15ರೊಳಗೆ ಕಾನೂನು ಪ್ರಕಾರ ನಿರ್ಧಾರ ಕೈಗೊಳ್ಳುವಂತೆ ಕೊಡಗು ಜಿಲ್ಲಾಧಿಕಾರಿಗೆ ಹೈಕೋರ್ಟ್‌ ನಿರ್ದೇಶಿಸಿದೆ.ಈ ಕುರಿತು ದಸರಾ ದಶಮಂಟಪ ಸಮಿತಿ ಅಧ್ಯಕ್ಷ ಪಾಂಡಿರಾ ಟಿ.ಪೂಣಚ್ಚ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರ ಪೀಠ ಈ ನಿರ್ದೇಶನ ನೀಡಿ ಅರ್ಜಿ ಇತ್ಯರ್ಥಪಡಿಸಿದೆ.

ಅ.21 ಮತ್ತು 22ರಂದು ಹಮ್ಮಿಕೊಂಡಿರುವ ಮಡಿಕೇರಿ ಪಟ್ಟಣದಲ್ಲಿನ ದಸರಾ ಮಹೋತ್ಸವ ಆಚರಣೆ ಹಿನ್ನೆಲೆಯಲ್ಲಿ ನಡೆಸುವ ಸ್ತಬ್ಧಚಿತ್ರ ಮೆರವಣಿಗೆ ವೇಳೆ ಡಿಜಿ ಧ್ವನಿವರ್ಧಕ ಬಳಸಲು ಅನುಮತಿ ಕೋರಿ ಅರ್ಜಿದಾರರು ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಮನವಿ ಪತ್ರ ಪರಿಗಣಿಸದಂತೆ ಕೆಲವರು ಈ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ. ಅದರಂತೆ ಅರ್ಜಿಗೆ ಆಕ್ಷೇಪಣೆ ವ್ಯಕ್ತಪಡಿಸಿರುವವರು ತಮ್ಮ ಅಹವಾಲನ್ನು ಅ.12ರೊಳಗೆ ಜಿಲ್ಲಾಧಿಕಾರಿಗೆ ಸಲ್ಲಿಸಬೇಕು. ಆ ಆಕ್ಷೇಪಣೆಯೊಂದಿಗೆ ಅರ್ಜಿದಾರರ ಮನವಿ ಪತ್ರವನ್ನು ಪರಿಗಣಿಸಿ ಅ.15ರೊಳಗೆ ಕಾನೂನು ಪ್ರಕಾರ ನಿರ್ಧಾರ ಕೈಗೊಂಡು ಅರ್ಜಿದಾರರಿಗೆ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿಗೆ ಪೀಠ ಸೂಚಿಸಿದೆ.

ಮಡಿಕೇರಿ ಪಟ್ಟಣದಲ್ಲಿ 10 ದೇವಸ್ಥಾನದ ಪರಿಕಲ್ಪನೆಯಲ್ಲಿ ಸ್ತಬ್ಧಚಿತ್ರವನ್ನು ಮೆರವಣಿಗೆ ಮಾಡಲಾಗುತ್ತದೆ. ಪ್ರತಿದೇವಸ್ಥಾನದ ಸ್ತಬ್ಧಚಿತ್ರದ ಮೆರವಣಿಯು ಆಯಾ ದೇವಸ್ಥಾನದ ಆವರಣದಿಂದ ಆರಂಭವಾಗಿ ರಾತ್ರಿ 10ಕ್ಕೆ ತಿಮ್ಮಯ್ಯ ವೃತ್ತದ ಬಳಿ ಸೇರುತ್ತವೆ. ಅಲ್ಲಿಂದ ಬೆಳಗ್ಗೆ 6 ಗಂಟೆಯವರೆಗೆ ಸ್ತಬ್ಧಚಿತ್ರ ಮೆರೆವಣಿಗೆಯು ರಾಜಬೀದಿ ಮಾರ್ಗವಾಗಿ ಬನ್ನಿಮಂಟಪವರೆಗೆ ಸಾಗುತ್ತದೆ. ಈ ವೇಳೆ ಡಿಜೆ ಧ್ವನಿವರ್ಧಕ ಬಳಕೆಗೆ ಅನುಮತಿ ಕೋರಿ ಸಲ್ಲಿಸಿರುವ ಮನವಿ ಪತ್ರವನ್ನು ಈವರೆಗೆ ಸರ್ಕಾರ ಹಾಗೂ ಜಿಲ್ಲಾಧಿಕಾರಿ ಪರಿಗಣಿಸಿಲ್ಲವೆಂದು ಅರ್ಜಿದಾರರು ಆಕ್ಷೇಪಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಳೆ ಮೈಸೂರು ಭಾಗಕ್ಕೆ ನಾಲ್ವಡಿ ಹೆಸರಿಡಿ
ಎಸ್ಐಆರ್ ರದ್ದುಪಡಿಸಲು, ಜ್ಞಾನೇಶ್ ಕುಮಾರ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ