ಮಡಿಕೇರಿ: ವಿಪತ್ತು ನಿರ್ವಹಣಾ ತರಬೇತಿ ಕಾರ್ಯಕ್ರಮ

KannadaprabhaNewsNetwork |  
Published : Sep 22, 2026, 02:45 AM IST
 | Kannada Prabha

ಸಾರಾಂಶ

ಫೀಲ್ಡ್ ಮಾರ್ಷಲ್ ಕೆ. ಎಂ. ಕಾರ್ಯಪ್ಪ ಕಾಲೇಜು, ಮಡಿಕೇರಿಯ ಎನ್‍ಸಿಸಿ, ಎನ್‍ಎಸ್‍ಎಸ್ ಹಾಗೂ ವೈಆರ್‍ಸಿ ಘಟಕಗಳ ಸಹಯೋಗದಲ್ಲಿ ವಿಪತ್ತು ನಿರ್ವಹಣಾ ತರಬೇತಿ ಕಾರ್ಯಕ್ರಮ ಸೋಮವಾರ ಕಾಲೇಜಿನಲ್ಲಿ ನಡೆಯಿತು.

ಮಡಿಕೇರಿ : ಫೀಲ್ಡ್ ಮಾರ್ಷಲ್ ಕೆ. ಎಂ. ಕಾರ್ಯಪ್ಪ ಕಾಲೇಜು, ಮಡಿಕೇರಿಯ ಎನ್‍ಸಿಸಿ, ಎನ್‍ಎಸ್‍ಎಸ್ ಹಾಗೂ ವೈಆರ್‍ಸಿ ಘಟಕಗಳ ಸಹಯೋಗದಲ್ಲಿ ವಿಪತ್ತು ನಿರ್ವಹಣಾ ತರಬೇತಿ ಕಾರ್ಯಕ್ರಮ ಸೋಮವಾರ ಕಾಲೇಜಿನಲ್ಲಿ ನಡೆಯಿತು. ಎನ್‍ಡಿಆರ್‌ಎಫ್‍ ಇನ್‌ಸ್ಪೆಕ್ಟರ್‌ ಪ್ರದೀಪ್ ಕುಮಾರ್ ಭಾಗವಹಿಸಿ ವಿದ್ಯಾರ್ಥಿಗಳು ಹಾಗೂ ಸ್ವಯಂ ಸೇವಕರಿಗೆ ವಿಪತ್ತು ನಿರ್ವಹಣೆ ಮತ್ತು ರಕ್ಷಣಾ ಕಾರ್ಯಗಳ ಕುರಿತು ಮಾಹಿತಿ ನೀಡಿದರು.

ವಿಪತ್ತು ಸಂಭವಿಸಿದ ಸಂದರ್ಭದಲ್ಲಿ ಸ್ಥಳೀಯ ಸಮುದಾಯದ ಜನರು ಸಾಮಾನ್ಯವಾಗಿ ಮೊದಲು ಸ್ಥಳದಲ್ಲೇ ಲಭ್ಯವಿರುವುದರಿಂದ, ವಿಪತ್ತು ನಿರ್ವಹಣೆ, ಪ್ರಥಮ ಚಿಕಿತ್ಸೆ ಹಾಗೂ ಜೀವ ರಕ್ಷಿಸುವ ಮೂಲಭೂತ ಕೌಶಲ್ಯಗಳ ಕುರಿತು ಜ್ಞಾನ ಹೊಂದಿರುವುದು ಅತ್ಯಂತ ಅಗತ್ಯ ಎಂದರು.

ಎನ್‌ಡಿಆರ್‌ಎಫ್‌ ರಕ್ಷಣಾ ಕಮಾಂಡರ್ ನಾಗರಾಜು ಎ.ಪಿ., ಅವರು ವಿದ್ಯಾರ್ಥಿಗಳಿಗೆ ವಿಪತ್ತು ನಿರ್ವಹಣೆ ಮತ್ತು ರಕ್ಷಣಾ ಕಾರ್ಯಗಳ ಕುರಿತು ತರಬೇತಿ ನೀಡಿದರು.

ಎನ್‍ಡಿಆರ್‌ಎಫ್ ತಂಡವು ವಿವಿಧ ವಿಪತ್ತು ಸಂದರ್ಭಗಳಲ್ಲಿ ಕೈಗೊಂಡ ರಕ್ಷಣಾ ಕಾರ್ಯಗಳ ಚಿತ್ರಗಳು ಹಾಗೂ ಉದಾಹರಣೆ ಸಹಿತಿ ಮಾಹಿತಿ ನೀಡಿ ಪ್ರವಾಹ, ಭೂಕುಸಿತ, ಭೂಕಂಪ, ಕಟ್ಟಡ ಕುಸಿತ ಹಾಗೂ ಇತರ ತುರ್ತು ಪರಿಸ್ಥಿತಿಗಳಲ್ಲಿ ಕೈಗೊಳ್ಳುವ ರಕ್ಷಣಾ ಕಾರ್ಯಗಳ ಕುರಿತು ಮಾಹಿತಿ ನೀಡಿದರು. ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಮೇಜರ್ ಪ್ರೋ ರಾಘವ ಬಿ. ಅವರು , ವಿಪತ್ತುಗಳು ನೈಸರ್ಗಿಕವಾಗಿರಲಿ ಅಥವಾ ಮಾನವ ನಿರ್ಮಿತವಾಗಿರಲಿ, ಅವು ಯಾವುದೇ ಸಮಯದಲ್ಲಿ ಸಂಭವಿಸಬಹುದು ಎಂದರು.

ಡಾ. ಶೈಲಶ್ರೀ ಕೆ. ಹಾಗೂ ಅಲೋಕ್ ಕೆ. ಬಿಜೈ, ಎನ್‍ಎಸ್‍ಎಸ್ ಮತ್ತು ವೈಆರ್ ಸಿ ಘಟಕಗಳ ಕಾರ್ಯಕ್ರಮಾಧಿಕಾರಿಗಳು, ಕಾಲೇಜಿನ ಬೋಧಕ ಸಿಬ್ಬಂದಿ ಹಾಗೂ ಎನ್‍ಡಿಆರ್‌ಎಫ್ ತಂಡದ ಸದಸ್ಯರು ಇದ್ದರು.

ಎನ್‍ಸಿಸಿ ಕ್ಯಾಡೆಟ್ ಸಂದೇಶ್ ಸ್ವಾಗತ ಭಾಷಣ ಮಾಡಿದರು. ಎನ್‌ಎಸ್‌ಎಸ್‌ ಸ್ವಯಂ ಸೇವಕಿ ಕುಮಾರಿ ಮೇಘಾ ವಂದಿಸಿದರು. ತೃತೀಯ ಬಿ.ಕಾಂ ವಿದ್ಯಾರ್ಥಿನಿ ಕವನಾ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮೂರ್ನಾಡಿನಲ್ಲಿ ವಿಜೃಂಭಣೆಯ ಗಣೇಶ ವಿಸರ್ಜನಾ ಮಹೋತ್ಸವ
ಕುಶಾಲನಗರ ಆನೆಕಾಡು: ಸರಣಿ ಅಪಘಾತಕ್ಕೆ ಮೂವರು ಬಲಿ