ಕನ್ನಡಪ್ರಭ ವಾರ್ತೆ ಮಡಿಕೇರಿ
ಕಾಲೇಜ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ರೋಟರಿ ಸಂಸ್ಥೆಯ ಅಧ್ಯಕ್ಷ ಎಂ.ಸುದಯ್ ನಾಣಯ್ಯ, ಆಡಳಿತ ವ್ಯವಸ್ಥೆ ಜಾರಿಗೆ ಬಂದಲ್ಲಿಂದ ತೆರಿಗೆ ಸಂಗ್ರಹ ಅದರ ಭಾಗವಾಗಿ ಸೇರಿಕೊಂಡಿದೆ. ಈ ವಿಚಾರದಲ್ಲಿ ಮೈಸೂರಿನ ಮಹಾರಾಜ ನಾಲ್ವಡಿ ಕೃಷ್ಣರಾಜ್ ಒಡೆಯರ್ ಉತ್ತಮ ಆಡಳಿತಗಾರರಾಗಿ ಪ್ರಸಿದ್ಧಿ ಪಡೆದಿದ್ದರು. ಸಂವಿಧಾನ ರಚನೆ ನಂತರ ಅದರಡಿ ರೂಪಿಸಿದ ಕಾಯ್ದೆಯನ್ವಯ ದೇಶದಲ್ಲಿ ತೆರಿಗೆ ಸಂಗ್ರಹ ಮಾಡಲಾಗುತ್ತಿದೆ ಎಂದರು.
ಈಶ್ವರ್ ಭಟ್ ಮಾತನಾಡಿ, ಆದಾಯ ತೆರಿಗೆ ಕಾಯ್ದೆಯಲ್ಲಿ ಆದಾಯವನ್ನು ವಿವಿಧ ರೀತಿಯಲ್ಲಿ ವಿಂಗಡಿಸಲಾಗಿದೆ. ಅದರನ್ವಯ ತೆರಿಗೆಯನ್ನು ಜನರಿಂದ ಪಡೆಯಲಾಗುತ್ತದೆ ಎಂದರು.ಅಧ್ಯಕ್ಷತೆ ವಹಿಸಿ ಮಾತನಾಡಿದ ಆದಾಯ ತೆರಿಗೆ ಇಲಾಖೆ ಅಧಿಕಾರಿ ದಿವಾಕರ್ ರಾವ್, ಆದಾಯ ತೆರಿಗೆ ಪಾವತಿಯಿಂದ ದೇಶದಲ್ಲಿ ಅತ್ಯುನ್ನತ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸರ್ಕಾರಕ್ಕೆ ಸಾಧ್ಯವಾಗಿದೆ. ದೇಶದ ಅಭ್ಯುದಯದ ದೃಷ್ಟಿಯಿಂದ ಆದಾಯ ಗಳಿಸುವ ಪ್ರತಿಯೊಬ್ಬರು ಪ್ರಾಮಾಣಿಕವಾಗಿ ಆದಾಯ ತೆರಿಗೆ ಪಾವತಿಸಬೇಕು ಎಂದರು.