
ಮಡಿಕೇರಿ: ಕಾರ್ಮಿಕ ಕಾಯ್ದೆಗಳ ಕುರಿತು ಜಿಲ್ಲಾ ಕಾರ್ಮಿಕ ಅಧಿಕಾರಿ ಯತ್ನಟ್ಟಿ ಮತ್ತು ತಂಡದವರು ಜಿಲ್ಲೆಯ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಜಾಗೃತಿ ಮೂಡಿಸಿದರು. ಪೊನ್ನಂಪೇಟೆ ತಾಲೂಕಿನ ಕೊಳತೋಡು, ಬೈಗೋಡು, ಮತ್ತಿತರ ಪ್ರದೇಶಗಳಿಗೆ ಭೇಟಿ ನೀಡಿ ಬಾಲ್ಯವ್ಯವಸ್ಥೆ ಹಾಗೂ ಕಿಶೋರಾವಸ್ಥೆ ಬಗ್ಗೆ ಕಾರ್ಮಿಕ ಕಾಯ್ದೆಯಡಿ ವಿವಿಧ ಅಂಗಡಿ ಹಾಗೂ ವಾಣಿಜ್ಯ ಸಂಸ್ಥೆಗಳಿಗೆ ಭೇಟಿ ನೀಡಿ ಅರಿವು ಮೂಡಿಸಲಾಯಿತು.
ಹಿರಿಯ ಕಾರ್ಮಿಕ ನಿರೀಕ್ಷಕರಾದ ಎಂ.ಸಿ.ಮಾದಪ್ಪ, ಪೊಲೀಸ್ ಇಲಾಖೆಯ ಸಹಾಯಕ ಉಪ ನಿರೀಕ್ಷಕರಾದ ಸುಮತಿ, ಕಾರ್ಮಿಕ ಇಲಾಖೆಯ ಯೋಜನಾ ನಿರ್ದೇಶಕರಾದ ಶಿರಾಝ್ ಅಹ್ಮದ್, ನವೀನ್ ಇತರರ ಉಪಸ್ಥಿತಿಯಲ್ಲಿ ಕಾರ್ಮಿಕರ ಹಕ್ಕುಗಳು, ಕಾಯ್ದೆಗಳ ಬಗ್ಗೆ ಅರಿವು ಮೂಡಿಸಲಾಗಿದೆ ಎಂದು ಹೇಳಿದರು. ಮಡಿಕೇರಿ ನಗರ, ಕುಶಾಲನಗರ ತಾಲೂಕಿನ ಚೆಟ್ಟಳ್ಳಿ, ನೆಲ್ಯಹುದಿಕೇರಿ, ವಿರಾಜಪೇಟೆ ತಾಲೂಕಿನ ಸಿದ್ದಾಪುರ ಹಾಗೂ ಮಾಲ್ದಾರೆ, ಮಡಿಕೇರಿ ತಾಲೂಕಿನ ಬೆಟ್ಟಗೇರಿ, ಕೊಟ್ಟೂರು, ಐವತ್ತೋಕ್ಲು, ಕಾರುಗುಂದ, ಮದೆನಾಡು ಹಾಗೂ ಕಾಟಿಗೇರಿ, ದೇವರಕೊಲ್ಲಿ, ಸಂಪಾಜೆ, ಕಡಮಕಲ್ಲು, ಬೋಯಿಕೇರಿ, ಕುಶಾಲನಗರ ತಾಲೂಕಿನ ಏಳನೇ ಹೊಸಕೋಟೆ, ಕೊಡಗರಹಳ್ಳಿ, ವಿರಾಜಪೇಟೆ ತಾಲೂಕಿನ ಬಿಟ್ಟಂಗಾಲ, ತಿತಿಮತಿ, ಪೊನ್ನಂಪೇಟೆ ತಾಲೂಕಿನ ಗೋಣಿಕೊಪ್ಪ, ಕಮಟೆ, ಅಂಬೂರು, ಕಾನೂರು, ಕೂಡಿಗೆ, ವಿರಾಜಪೇಟೆ ಬಳಿಯ ಚಿಕ್ಕಪೇಟೆ ಹೀಗೆ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಅರಿವು ಮೂಡಿಸಲಾಗಿದೆ ಎಂದು ಅವರು ಹೇಳಿದ್ದಾರೆ.