ಹಿರಿಯರ ಗೌರವಿಸಿ, ಮಕ್ಕಳಿಗೆ ಮೌಲ್ಯವನ್ನು ಕಲಿಸಿ: ನ್ಯಾ.ಶುಭ

KannadaprabhaNewsNetwork |  
Published : Oct 04, 2026, 03:00 AM IST
ಚಿತ್ರ :  1ಎಂಡಿಕೆ4 :  ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಮಾತನಾಡಿದರು.  | Kannada Prabha

ಸಾರಾಂಶ

ಇಂದಿನ ಮಕ್ಕಳಿಗೆ ಶಿಕ್ಷಣ ಹಾಗೂ ವಿವಿಧ ಕೌಶಲ್ಯಗಳ ತರಬೇತಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಜೊತೆಗೆ ಮಾನವೀಯ ಮೌಲ್ಯಗಳು, ಕುಟುಂಬ ಸಂಬಂಧಗಳು ಮತ್ತು ಹಿರಿಯರನ್ನು ಗೌರವಿಸುವ ಸಂಸ್ಕೃತಿಯನ್ನು ಕಲಿಸುವ ಅಗತ್ಯವಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ತಿಳಿಸಿದ್ದಾರೆ.

ಮಡಿಕೇರಿ: ಇಂದಿನ ಮಕ್ಕಳಿಗೆ ಶಿಕ್ಷಣ ಹಾಗೂ ವಿವಿಧ ಕೌಶಲ್ಯಗಳ ತರಬೇತಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಜೊತೆಗೆ ಮಾನವೀಯ ಮೌಲ್ಯಗಳು, ಕುಟುಂಬ ಸಂಬಂಧಗಳು ಮತ್ತು ಹಿರಿಯರನ್ನು ಗೌರವಿಸುವ ಸಂಸ್ಕೃತಿಯನ್ನು ಕಲಿಸುವ ಅಗತ್ಯವಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಹಿರಿಯ ನಾಗರಿಕರ ಸ್ವಯಂ ಸೇವಾ ಸಂಸ್ಥೆಗಳು ಹಾಗೂ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ದೀರ್ಘಾಯುಷ್ಯದ ಯುಗ: ಸುದೀರ್ಘ ಜೀವನಕ್ಕಾಗಿ ಜೀವನ ಕ್ರಮಗಳ ಮರು ಚಿಂತನೆ ಎಂಬ ಘೋಷವಾಕ್ಯದೊಂದಿಗೆ ಗುರುವಾರ ನಗರದ ಶಿಶು ಕಲ್ಯಾಣ ಸಂಸ್ಥೆಯಲ್ಲಿ ನಡೆದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ, ಅವರು ಮಾತನಾಡಿದರು.ಹಿರಿಯ ವಕೀಲ ಮೀನಾ ಕುಮಾರಿ ಮಾತನಾಡಿ, ಪ್ರತಿಯೊಬ್ಬರಿಗೂ ಗೌರವಯುತವಾಗಿ ಬದುಕುವ ಹಕ್ಕಿದೆ. ವಯಸ್ಸಾಗಿದೆ ಎಂಬ ಕಾರಣಕ್ಕೆ ಯಾರಾದರೂ ಹಿರಿಯರನ್ನು ಕಡೆಗಣಿಸಿದರೆ ಅಥವಾ ಹಿಂಸಿಸಿದರೆ ಅದನ್ನು ಸಹಿಸಿಕೊಂಡು ಸುಮ್ಮನಿರಬೇಕಾಗಿಲ್ಲ. ಕಾನೂನಿನ ಮೂಲಕ ರಕ್ಷಣೆ ಪಡೆಯಲು ಅವಕಾಶವಿದೆ ಎಂದರು.

ಮಡಿಕೇರಿ ಬ್ರಹ್ಮಕುಮಾರಿ ಶಾಖೆಯ ಧನಕ್ಷ್ಮಿ ಮಾತನಾಡಿ, ವಯಸ್ಸು ಶರೀರಕ್ಕಷ್ಟೇ ಹೊರತು ಮನಸ್ಸಿಗಲ್ಲ. 60ರ ನಂತರದ ಬದುಕನ್ನು ‘ಇನ್ನು ನಮ್ಮಿಂದ ಏನೂ ಸಾಧ್ಯವಿಲ್ಲ’ ಎಂಬ ಮನಸ್ಥಿತಿಗೆ ಸೀಮಿತಗೊಳಿಸದೆ, ಉತ್ಸಾಹದಿಂದ ಪ್ರತಿಕ್ಷಣ ಅನುಭವಿಸಬೇಕು ಎಂದು ಕರೆ ನೀಡಿದರು.ಅಧ್ಯಕ್ಷತೆ ವಹಿಸಿ ಮಾತನಾಡಿದ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಸುಮಂಗಲಾ ಜಿ.ಹಿರೇಮನಿ ಅವರು, ಹಿರಿಯರ ಅನುಭವ ಮುಂದಿನ ಪೀಳಿಗೆಗೆ ದಾರಿದೀಪವಾಗಲಿ ಎಂದು ಹಾರೈಸಿದರು. ಹಿರಿಯರಾದ ತಿಮ್ಮಯ್ಯ ಮಾತನಾಡಿ ಶುಭಹಾರೈಸಿದರು.ನಾಲ್ವರು ಹಿರಿಯ ನಾಗರಿಕರನ್ನು ಗೌರವಿಸಲಾಯಿತು. ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಪ್ರಯುಕ್ತ ನಡೆದ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಯ ವಿಜೇತರಿಗೆ ಗಣ್ಯರು ಬಹುಮಾನ ವಿತರಿಸಿದರು.

ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ಪ್ರಸನ್ನ ಕುಮಾರ್, ಸಹಾಯಕ ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ ಸೀತಾಲಕ್ಷ್ಮಿ ಹಿರಿಯರಾದ ಮಾದಮಯ್ಯ, ತಿಮ್ಮಯ್ಯ, ಜಿಮ್ಮಿ ಅಣ್ಣಯ್ಯ, ಬೋಸ್ ಮೊಣ್ಣಪ್ಪ, ಮಲ್ಲಪ್ಪ, ಶಂಕರಿ ಪೊನ್ನಪ್ಪ ಸೇರಿದಂತೆ ವಿವಿಧ ಸ್ವಯಂ ಸೇವಾ ಸಂಸ್ಥೆಗಳು ಹಾಗೂ ಹಿರಿಯ ನಾಗರಿಕರ ವೇದಿಕೆಯ ಪದಾಧಿಕಾರಿಗಳು, ನಿವೃತ್ತ ನೌಕರರ ಸಂಘದ ಪದಾಧಿಕಾರಿಗಳು ಹಾಜರಿದ್ದರು. ಹಿರಿಯರಾದ ಸೀತಮ್ಮ ಪ್ರಾರ್ಥಿಸಿದರು, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿ ಕೆ.ಜಿ.ವಿಮಲ ಸ್ವಾಗತಿಸಿದರು, ಮಾಹಿತಿ ಸಲಹೆಗಾರರಾದ ನವೀನ್ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ
ಭ್ರಷ್ಟರ ಕೈಯಲ್ಲಿ ಸಿಕ್ಕು ಕಸಾಪ ಸಂಸ್ಥೆಯ ನೈತಿಕತೆ ಹಾಳು: ಪ್ರೊ.ಎಸ್.ಜಿ.ಸಿದ್ದರಾಮಯ್ಯ