ಕನ್ನಡಪ್ರಭ ವಾರ್ತೆ ಮಡಿಕೇರಿ
ಪ್ರಕೃತಿಯ ಮಡಿಲಲ್ಲಿ ಜಾರುತ್ತಿದ್ದ ಸೂರ್ಯನ ವಿಹಂಗಮ ದೃಶ್ಯವನ್ನು ಪ್ರವಾಸಿಗರು ಕಣ್ತುಂಬಿಕೊಂಡರು. ಮೊಬೈಲ್, ಕ್ಯಾಮರಾಗಳಲ್ಲಿ ಫೋಟೋ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದರು. ಹೊಸ ವರ್ಷಾಚರಣೆ ಸಂಭ್ರಮಿಸಲು ಕೊಡಗು ಜಿಲ್ಲೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದ್ದು, ಜಿಲ್ಲಾ ಕೇಂದ್ರ ಮಡಿಕೇರಿಯ ರಸ್ತೆಗಳಲ್ಲಿ ವಾಹನಗಳ ದಟ್ಟಣೆ ಕಂಡು ಬಂತು.
ರಸ್ತೆ ಬದಿ, ಪ್ರವಾಸಿ ತಾಣಗಳು, ಫಾಲ್ಸ್ ಬಳಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕುಳಿತು ಪಾರ್ಟಿ ಮಾಡದಂತೆ ಜಿಲ್ಲಾ ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿತ್ತು. ಪ್ರವಾಸಿಗರು ತಂಗುವ ಸ್ಥಳದಲ್ಲಿ ವರ್ಷಾಚರಣೆ ಆಚರಿಸಬೇಕು. ಅಲ್ಲಿಯೂ ಅಕ್ಕಪಕ್ಕದವರಿಗೆ ತೊಂದರೆ ನೀಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಎಚ್ಚರಿಕೆ ನೀಡಿದ್ದರು.ಅಂತಹ ಪ್ರಕರಣ ಗೊತ್ತಾದರೆ ಹೋಂಸ್ಟೇ ರೆಸಾರ್ಟ್ ಗಳ ಪರವಾನಗಿ ಶಾಶ್ವತ ರದ್ದಾಗುತ್ತದೆ ಎಂದು ಕೊಡಗು ಪೊಲೀಸ್ ವರಿಷ್ಠಾಧಿಕಾರಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದರು.