ಮಡಿಕೇರಿ: ನ.2,3ರಂದು ಪತ್ರಕರ್ತರ ರಾಜ್ಯಮಟ್ಟದ ಕ್ರಿಕೆಟ್‌

KannadaprabhaNewsNetwork |  
Published : Oct 07, 2026, 02:45 AM IST
ಚಿತ್ರ : 6ಎಂಡಿಕೆ3 : ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಾಚರಣಿಯಂಡ ಅನು ಕಾರ್ಯಪ್ಪ  ಮಾತನಾಡಿದರು.  | Kannada Prabha

ಸಾರಾಂಶ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನ.2 ಹಾಗೂ 3 ರಂದು ಮಡಿಕೇರಿಯಲ್ಲಿ ರಾಜ್ಯಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾಟ ಆಯೋಜಿಸಲಾಗಿದೆ ಎಂದು ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಾಚರಣಿಯಂಡ ಅನು ಕಾರ್ಯಪ್ಪ ತಿಳಿಸಿದರು.

ಮಡಿಕೇರಿ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನ.2 ಹಾಗೂ 3 ರಂದು ಮಡಿಕೇರಿಯಲ್ಲಿ ರಾಜ್ಯಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾಟ ಆಯೋಜಿಸಲಾಗಿದೆ ಎಂದು ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಾಚರಣಿಯಂಡ ಅನು ಕಾರ್ಯಪ್ಪ ತಿಳಿಸಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ ಪಂದ್ಯಾಟದ ಆತಿಥ್ಯವನ್ನು ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ವಹಿಸಿಕೊಂಡಿದ್ದು, ಅಗತ್ಯ ಸಿದ್ಧತೆ ಕೈಗೊಳ್ಳಲಾಗಿದೆ ಎಂದರು.

ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಮೈದಾನ ಹಾಗೂ ಜ. ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಒಟ್ಟು ನಾಲ್ಕು ಪಿಚ್‌ಗಳನ್ನು ಸಿದ್ಧಪಡಿಸಲಾಗುವುದು. ವಿವಿಧ ಜಿಲ್ಲೆಯ ಒಟ್ಟು 24 ತಂಡಗಳು ಪಂದ್ಯಾಟದಲ್ಲಿ ಪಾಲ್ಗೊಳ್ಳಲಿದ್ದು, ಕೊಡಗು ಜಿಲ್ಲೆಯ ಎರಡು ತಂಡಗಳೂ ಸ್ಪರ್ಧಿಸಲಿವೆ ಎಂದು ಹೇಳಿದರು.

ಉದ್ಘಾಟನೆಗೆ ಉಪಮುಖ್ಯಮಂತ್ರಿ ಹಾಗೂ ಕ್ರೀಡಾ ಸಚಿವ ಡಾ. ಜಿ. ಪರಮೇಶ್ವರ್ ಅವರನ್ನು ಆಹ್ವಾನಿಸಲಾಗಿದೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಂಡ ಹಾಗೂ ರಾಜಕಾರಣಿಗಳ ನಡುವೆ ವಿಶೇಷ ಪ್ರದರ್ಶನ ಪಂದ್ಯವನ್ನೂ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಅನು ಕಾರ್ಯಪ್ಪ ಮಾಹಿತಿ ನೀಡಿದರು.ಬಹುಮಾನ: ವಿಜೇತ ತಂಡಕ್ಕೆ 1 ಲಕ್ಷ ರು., ರನ್ನರ್‌ಅಪ್ ತಂಡಕ್ಕೆ 50 ಸಾವಿರ ರು, ತೃತೀಯ ಸ್ಥಾನಕ್ಕೆ 25 ಸಾವಿರ ರು ಹಾಗೂ ಚತುರ್ಥ ಸ್ಥಾನಕ್ಕೆ 15 ಸಾವಿರ ರು. ನಗದು ಬಹುಮಾನದೊಂದಿಗೆ ಆಕರ್ಷಕ ಟ್ರೋಫಿ ನೀಡಲಾಗುವುದು. ಪ್ರತಿ ಪಂದ್ಯಕ್ಕೂ ‘ಮ್ಯಾನ್ ಆಫ್ ದಿ ಮ್ಯಾಚ್’ ಪ್ರಶಸ್ತಿ ಸೇರಿದಂತೆ ವಿವಿಧ ವೈಯಕ್ತಿಕ ವಿಭಾಗಗಳಲ್ಲಿ ಬಹುಮಾನಗಳನ್ನು ನೀಡಲಾಗುವುದು ಎಂದರು.

ಶಿಸ್ತು ಸಮಿತಿ ಸಂಚಾಲಕಿ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕಿ ಬಿ.ಆರ್. ಸವಿತಾ ರೈ ಮಾತನಾಡಿ, ಪಂದ್ಯಾಟವನ್ನು ಸಂಪೂರ್ಣ ಶಿಸ್ತುಬದ್ಧವಾಗಿ ಆಯೋಜಿಸಲಾಗುವುದು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2026-27ನೇ ಸಾಲಿನ ಸದಸ್ಯತ್ವ ಹೊಂದಿರುವವರಿಗೆ ಮಾತ್ರ ಪಂದ್ಯಾಟದಲ್ಲಿ ಆಡಲು ಅವಕಾಶವಿದೆ. ನಕಲಿ ಸದಸ್ಯತ್ವ ಕಾರ್ಡ್ ಬಳಸಿ ಪಾಲ್ಗೊಳ್ಳುವುದು ಕಂಡುಬಂದಲ್ಲಿ ಸಂಬಂಧಿಸಿದ ತಂಡವನ್ನು ಪಂದ್ಯಾಟದಿಂದಲೇ ಹೊರಗಿಡಲಾಗುವುದು. ಅತ್ಯಂತ ಪಾರದರ್ಶಕ ಹಾಗೂ ವ್ಯವಸ್ಥಿತವಾಗಿ ಪಂದ್ಯಾಟ ನಡೆಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಹಾಗೂ ಪ್ರಚಾರ ಸಮಿತಿ ಸಂಚಾಲಕ ಹೆಚ್.ಜೆ. ರಾಕೇಶ್, ಕ್ರೀಡಾ ಸಮಿತಿ ಸಂಚಾಲಕ ಸಂತೋಷ್ ರೈ ಮಾತನಾಡಿದರು. ಕೊಡಗು ಪ್ರೆಸ್‌ಕ್ಲಬ್ ಅಧ್ಯಕ್ಷ ಬೊಳ್ಳಜಿರ ಬಿ. ಅಯ್ಯಪ್ಪ ಹಾಗೂ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಖಜಾಂಚಿ ಸುನೀಲ್ ಪೊನ್ನೇಟಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕ್ಷೇತ್ರದ ಅಭಿವೃದ್ಧಿಗೆ ಪ್ರಶಸ್ತಿ ಮನ್ನಣೆ: ಪೂಂಜಾ
ಕೇಂದ್ರ ಸರ್ಕಾರದ ಕುಮ್ಮಕ್ಕಿನಿಂ ದೌರ್ಜನ್ಯ: ಜ್ಯೋತಿ ಹೆಬ್ಬಾರ್ ಆಕ್ರೋಶ