ಮಡಿಕೇರಿ: ನಾಳೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

KannadaprabhaNewsNetwork |  
Published : Jun 20, 2024, 01:07 AM IST
೩೨ | Kannada Prabha

ಸಾರಾಂಶ

ಮಡಿಕೇರಿ ಕೆಳಗಿನ ಗೌಡ ಸಮಾಜದಲ್ಲಿಅಂತಾರಾಷ್ಟ್ರೀಯ ಯೋಗ ದಿನಾಚರಣೆ ಶುಕ್ರವಾರ ನಡೆಯಲಿದೆ ಎಂದು ಆಯುಷ್ ಇಲಾಖಾ ಅಧಿಕಾರಿ ಡಾ.ರೇಣುಕಾ ದೇವಿ ತಿಳಿಸಿದ್ದಾರೆ. ಆಯುಷ್ ಇಲಾಖೆಯ ಸಂಯುಕ್ತಾಶ್ರಯದಲ್ಲಿ ನಗರದ ಗೌಡ ಸಮಾಜದಲ್ಲಿ ಬೆಳಗ್ಗೆ 6.30 ಗಂಟೆಗೆ ಯೋಗ ದಿನಾಚರಣೆಯ ಕಾರ್ಯಕ್ರಮಗಳು ಆರಂಭಗೊಳ್ಳಲಿವೆ.

ಕನ್ನಡಪ್ರಭ ವಾರ್ತೆ ಮಡಿಕೇರಿ

‘ಸ್ವಂತಕ್ಕಾಗಿ ಮತ್ತು ಸಮಾಜಕ್ಕಾಗಿ ಯೋಗ’ ಧ್ಯೇಯ ವಾಕ್ಯದೊಂದಿಗೆ ಪ್ರಸಕ್ತ ಸಾಲಿನ 10 ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಗರದ ಕೆಳಗಿನ ಗೌಡ ಸಮಾಜದಲ್ಲಿ ಶುಕ್ರವಾರ ನಡೆಯಲಿದೆ ಎಂದು ಆಯುಷ್ ಇಲಾಖಾ ಅಧಿಕಾರಿ ಡಾ.ರೇಣುಕಾ ದೇವಿ ತಿಳಿಸಿದ್ದಾರೆ.

ನಗರದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, 2015ರಲ್ಲಿ ಆರಂಭಗೊಂಡ ಯೋಗ ದಿನಾಚರಣೆ ದಶಕದ ಆಚರಣೆಯ ಹಂತದಲ್ಲಿದೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ,

ಆಯುಷ್ ಇಲಾಖೆಯ ಸಂಯುಕ್ತಾಶ್ರಯದಲ್ಲಿ ನಗರದ ಗೌಡ ಸಮಾಜದಲ್ಲಿ ಬೆಳಗ್ಗೆ 6.30 ಗಂಟೆಗೆ ಯೋಗ ದಿನಾಚರಣೆಯ ಕಾರ್ಯಕ್ರಮಗಳು ಆರಂಭಗೊಳ್ಳಲಿವೆ ಎಂದರು.ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಕಾರ್ಯಕ್ರಮ ಉದ್ಘಾಟಿಸಲಿದ್ದು, ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲೆಯ ಶಾಸಕರು, ಸಂಸದರು ಸೇರಿದಂತೆ ಹಲವು ಗಣ್ಯರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.

ನಗರದ ಯೋಗ ಸಂಘಟನೆಯ ಸಂಚಾಲಕ ಕೆ.ಕೆ.ಮಹೇಶ್ ಕುಮಾರ್ ಮಾತನಾಡಿ, ಯೋಗ ದಿನದಂದು ಪ್ರತಿಯೊಬ್ಬರು ಅಭ್ಯಾಸ ಮಾಡಬಹುದಾದ ಅತ್ಯಂತ ಸರಳವಾದ 19 ಆಸನಗಳನ್ನು ಮತ್ತು ನಾಲ್ಕು ಪ್ರಾಣಾಯಾಮಗಳ ಪ್ರಾತ್ಯಕ್ಷಿಕೆಯನ್ನು ಏಕಕಾಲಕ್ಕೆ ಬೆಳಗ್ಗೆ 7 ರಿಂದ 7.45ರ ವರೆಗೆ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು.

ಯೋಗ ದಿನಾಚರಣೆಯಲ್ಲಿ ವಯಸ್ಸಿನ ಮಿತಿಗಳಿಲ್ಲದೆ ಯಾರು ಬೇಕಾದರೂ ಪಾಲ್ಗೊಳ್ಳಬಹುದು. ಸುಮಾರು ಒಂದು ಸಾವಿರ ಮಂದಿ ಯೋಗಭ್ಯಾಸದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇರುವುದಾಗಿ

ಮಾಹಿತಿ ನೀಡಿದರು.

ಆಯುಷ್‌ ವೈದ್ಯರ ಸಂಘಟನೆ ನೀಮಾದ ಅಧ್ಯಕ್ಷ ಡಾ.ರಾಜಾರಾಂ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಈ ಬಾರಿ ಕಾಶ್ಮೀರದಲ್ಲಿ ಯೋಗ ದಿನಾಚರಣೆಗೆ ಚಾಲನೆಯನ್ನಿತ್ತು ಪಾಲ್ಗೊಳ್ಳಲಿದ್ದಾರೆ. ಹಾಗೆಯೇ ದಕ್ಷಿಣದ ಕಾಶ್ಮೀರವೆಂದೇ ಪ್ರಖ್ಯಾತವಾದ ಕೊಡಗಿನ ಮಡಿಕೇರಿಯಲ್ಲಿ ಅದಕ್ಕೆ ಸ್ಪಂದನ ರೂಪವಾಗಿ ಎಲ್ಲರೂ ಒಗ್ಗೂಡಿ ಯೋಗ ದಿನವನ್ನು ಆಚರಿಸುತ್ತಿರುವುದಾಗಿ ತಿಳಿಸಿದರು.

ನೀಮಾ ಸಂಘಟನೆಯಿಂದ ಮುಂದಿನ ಸಾಲಿನ ಯೋಗ ದಿನಾಚರಣೆಯವರೆಗೆ ಒಂದು ವರ್ಷದ ಅವಧಿಯವರೆಗೆ ಜಿಲ್ಲೆಯ ಪೊಲೀಸ್ ಸಿಬ್ಬಂದಿಗೆ ಅವರ ಯಾವುದೇ ಆರೋಗ್ಯ ಸಮಸ್ಯೆಗಳಿಗೆ ‘ಯೋಗ ಸಲಹೆ’ಯನ್ನು ಉಚಿತವಾಗಿ ನೀಡಲು ನಿರ್ಧರಿಸಿರುವುದಾಗಿ ಮಾಹಿತಿ ನೀಡಿದರು.

ಆಯುಷ್ ಇಲಾಖೆಯ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ವ್ಯದ್ಯಾಧಿಕಾರಿ ಡಾ.ಅರುಣ್, ಪತಂಜಲಿ ಯೋಗ ಶಿಕ್ಷಣ ಕೇಂದ್ರದ ಶಿಕ್ಷಕ ಸುಧಾಕರ್ ಸುದ್ದಿಗೋಷ್ಠಿಯಲ್ಲಿದ್ದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ