ಶಿರಾದಲ್ಲಿ ಮಡಿವಾಳ ಮಾಚಿದೇವರ ಜಯಂತ್ಯುತ್ಸವ

KannadaprabhaNewsNetwork |  
Published : Feb 12, 2026, 01:15 AM IST
೧೧ಶಿರಾ೨: ಶಿರಾದಲ್ಲಿ ನಡೆದ ಮಡಿವಾಳ ಮಾಚಿದೇವರ ಜಯಂತೋತ್ಸವ ಕಾರ್ಯಕ್ರಮದಲ್ಲಿ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಯಿತು. | Kannada Prabha

ಸಾರಾಂಶ

ಕಾಯಕ ಯೋಗಿ ಮಡಿವಾಳ ಮಾಚಿದೇವರ ತತ್ವ ಆದರ್ಶಗಳು ಸಮಾಜಕ್ಕೆ ಇಂದಿಗೂ ದಾರಿದೀಪವಾಗಿವೆ. ಬಸವಣ್ಣನವರ ಕಾಲದಲ್ಲಿ ಮಡಿವಾಳ ಮಾಚಿದೇವರು ಸಮಾಜಕ್ಕೆ ಅವರದೇ ಆದ ಸಂದೇಶ ನೀಡಿದವರು. ಅವರ ಆದರ್ಶಗಳನ್ನು ನಾವೆಲ್ಲರೂ ಪಾಲಿಸೋಣ ಎಂದು ವಿಧಾನಪರಿಷತ್ ಸದಸ್ಯ ಚಿದಾನಂದ್ ಎಂ ಗೌಡ ಹೇಳಿದರು.

ಕನ್ನಡಪ್ರಭ ವಾರ್ತೆ ಶಿರಾ

ಕಾಯಕ ಯೋಗಿ ಮಡಿವಾಳ ಮಾಚಿದೇವರ ತತ್ವ ಆದರ್ಶಗಳು ಸಮಾಜಕ್ಕೆ ಇಂದಿಗೂ ದಾರಿದೀಪವಾಗಿವೆ. ಬಸವಣ್ಣನವರ ಕಾಲದಲ್ಲಿ ಮಡಿವಾಳ ಮಾಚಿದೇವರು ಸಮಾಜಕ್ಕೆ ಅವರದೇ ಆದ ಸಂದೇಶ ನೀಡಿದವರು. ಅವರ ಆದರ್ಶಗಳನ್ನು ನಾವೆಲ್ಲರೂ ಪಾಲಿಸೋಣ ಎಂದು ವಿಧಾನಪರಿಷತ್ ಸದಸ್ಯ ಚಿದಾನಂದ್ ಎಂ ಗೌಡ ಹೇಳಿದರು.

ಅವರು ಶಿರಾ ತಾಲೂಕು ಮಡಿವಾಳ ಮಾಚಿದೇವರ ಸಂಘ, ಶ್ರೀ ವೀರಘಂಟೆ ಮಡಿವಾಳ ಮಾಚಿದೇವರ ದೇವಸ್ಥಾನ ಟ್ರಸ್ಟ್ ಇವರ ವತಿಯಿಂದ ಬುಧವಾರ ನಗರದ ಶ್ರೀ ವೀರಘಂಟೆ ಮಡಿವಾಳ ಮಾಚಿದೇವರ ದೇವಸ್ಥಾನದ ಆವರಣದಲ್ಲಿ ಏರ್ಪಡಿಸಿದ್ದ ಶ್ರೀ ಮಡಿವಾಳ ಮಾಚಿದೇವರ ಜಯಂತ್ಯುತ್ಸವ, ಶ್ರೀ ವೀರಘಂಟೆ ಮಡಿವಾಳ ಮಾಚಿದೇವರ ದೇವಸ್ಥಾನದ ೧೨ನೇ ವರ್ಷದ ವಾರ್ಷಿಕೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಮುಖ್ಯಮಂತ್ರಿಗಳ ಗೌರವ ವೈದ್ಯಕೀಯ ಸಲಹೆಗಾರರಾದ ಡಾ.ಎಚ್.ರವಿಕುಮಾರ್ ಮಾತನಾಡಿ, ರಾಜ್ಯದಲ್ಲಿ ಮಡಿವಾಳ ಸಮುದಾಯ ರಾಜಕೀಯವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದಿದ್ದು, ಸಮುದಾಯದ ಅಭಿವೃದ್ಧಿಗೆ ಎಲ್ಲರೂ ಒಗ್ಗಟ್ಟಾಗಿ ಶ್ರಮಿಸಬೇಕು. ತಮ್ಮ ಮಕ್ಕಳಿಗೆ ಕುಲಕಸುಬಿನ ಬದಲಾಗಿ ಉತ್ತಮ ಶಿಕ್ಷಣ ನೀಡಿ, ಉನ್ನತ ಅಧಿಕಾರಿಗಳನ್ನಾಗಿ ಮಾಡಬೇಕು ನಮ್ಮ ಹೋರಾಟಕ್ಕೆ ಯಾವ ಪಕ್ಷವೂ ಅಡ್ಡಿ ಬರಬಾರದು ಎಂದರು.

ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿಣಿ ಸದಸ್ಯ ಚಿ.ನಿ ಪುರುಷೋತ್ತಮ್ ಮಾತನಾಡಿ ತುಮಕೂರಿನಲ್ಲಿ ನಡೆದ ರಾಜ್ಯ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಮಾತನಾಡಿ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದರೆ ಮಡಿವಾಳ ಸಮುದಾಯವನ್ನು ಎಸ್ಸಿ ಪಟ್ಟಿಗೆ ಸೇರಿಸುವುದಾಗಿ ಘೋಷಣೆ ಮಾಡಿದ್ದರು. ಸಮುದಾಯದವರಿಗೆ ವಿಧಾನಪರಿಷತ್ ಸದಸ್ಯರನ್ನಾಗಿ ಮಾಡುವುದಾಗಿ ಹೇಳಿದ್ದರು. ಆದರೆ ಇದುವರೆಗೂ ಆಗಿಲ್ಲ. ಆದ್ದರಿಂದ ಎಲ್ಲರೂ ಒಗ್ಗಟ್ಟಾಗಿ ದೊಡ್ಡ ಮಟ್ಟದ ಹೋರಾಟ ಮಾಡಬೇಕು ಎಂದರು.

ಕಾರ್ಯಕ್ರಮದಲ್ಲಿ ಶ್ರೀ ಮಾಚಿದೇವ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ. ಶ್ರೀ ಬಸವ ಮಾಚಿದೇವ ಸ್ವಾಮೀಜಿಗಳು ದಿವ್ಯ ಸಾನಿಧ್ಯ ವಹಿಸಿ ಆರ್ಶೀವನ ನೀಡಿದರು. ತುಮಕೂರು ಹಾಲು ಒಕ್ಕೂಟದ ನಿರ್ದೇಶಕ ಎಸ್ ಆರ್ ಗೌಡ, ದೇವರಾಜ ಅರಸು ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷರಾದ ರಘು ಕೌಟಿಲ್ಯ ಮಾತನಾಡಿದರು. ಕಾರ್ಯಕ್ರಮಕ್ಕೂ ಮುನ್ನ ಶ್ರೀ ಮಡಿವಾಳ ಮಾಚಿದೇವರ ಭಾವಚಿತ್ರವನ್ನು ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮಾಡಲಾಯಿತು. ಮಡಿವಾಳ ಮಾಚಿದೇವರ ಅಭಿವೃದ್ಧಿ ನಿಗಮದ ಅಧ್ಯಕ್ಷ ಸಿ.ನಂಜಪ್ಪ, ಜಿಲ್ಲಾ ಮಡಿವಾಳ ಸಂಘದ ಅಧ್ಯಕ್ಷ ಲಕ್ಷ್ಮಣ್, ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಆರ್.ಪ್ರಕಾಶ್, ನಗರಸಭಾ ಸದಸ್ಯರಾದ ಆರ್.ರಾಮು, ಉಮಾ ವಿಜಯರಾಜ್, ಸ್ವಾತಿ ಮಂಜೇಶ್, ರಾಧಾಕೃಷ್ಣ, ಎಸ್.ಎನ್.ಮಹೇಶ್ಕುಮಾರ್, ಮಾಜಿ ಸದಸ್ಯ ಆರ್.ರಾಘವೇಂದ್ರ, ಮಾಜಿ ಜಿ ಪಂ ಉಪಾಧ್ಯಕ್ಷ ಮುದಿಮಡು ರಂಗಶಾಮಯ್ಯ, ರಾಜ್ಯ ಜೆಡಿಎಸ್ ಪರಿಷತ್ ಸದಸ್ಯ ಆರ್ ಉಗ್ರೇಶ್, ತಾಲೂಕು ಜೆಡಿಎಸ್ ಅಧ್ಯಕ್ಷ ಸತ್ಯಪ್ರಕಾಶ್, ಸಂತೇಪೇಟೆ ನಟರಾಜ್, ಶಿರಾ ತಾಲೂಕು ಮಡಿವಾಳ ಸಂಘದ ಅಧ್ಯಕ್ಷ ಬಿ.ಕೆ.ಈಶ್ವರ್, ಎಚ್.ಬಿ.ಜ್ಞಾನೇಶ್, ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಕುಮಾರ್, ವಕೀಲರದ ವಿಶ್ವೇಶ್ವರಯ್ಯ, ನಟರಾಜ.ಡಿ. ಸೇರಿದಂತೆ ಹಲವರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಾಯಕತ್ವ ಗೊಂದಲ ಮಧ್ಯೆ 13 ಕೈ ಶಾಸಕರು ವಿದೇಶಕ್ಕೆ :
ವಿದ್ಯಾರ್ಥಿಗಳ ಗೋಳು, ಕೇಳೋರು ಯಾರು?