ಕನ್ನಡಪ್ರಭ ವಾರ್ತೆ ಮಾಗಡಿ
ತಾಲೂಕಿನ ತಾಳೆಕೆರೆ ಹ್ಯಾಂಡ್ ಪೋಸ್ಟ್‌ನಿಂದ ಶಾನಭೋನಹಳ್ಳಿಯ ಬಾಚೇನಹಟ್ಟಿ ಗ್ರಾಮ ಪಂಚಾಯಿತಿವರೆಗೂ ರಸ್ತೆ ಕಾಮಗಾರಿ ಬಗ್ಗೆ ಅಧಿಕಾರಿಗಳಿಂದ ಮತ್ತು ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾಲತಾಣಗಳಲ್ಲಿ ರಸ್ತೆ ವಿಚಾರವಾಗಿ ಸಮಸ್ಯೆಗಳಿದೆ ಎಂಬುದರ ಬಗ್ಗೆ ನನ್ನ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳ ಸಮ್ಮುಖದಲ್ಲಿ ಸಮಸ್ಯೆಗಳಿರುವ ಜಾಗಕ್ಕೆ ಹೋಗಿ ಸಮಸ್ಯೆಯನ್ನು ಬಗೆಹರಿಸುವ ಕೆಲಸವನ್ನು ಮಾಡಲಾಗುತ್ತಿದೆ ಎಂದರು.
ಗುತ್ತಿಗೆದಾರರು ವಿಳಂಬ ಮಾಡಿದ ಪರಿಣಾಮ ಕಾಮಗಾರಿ ಕುಂಟುತ್ತ ಸಾಗಿದ್ದು, ಈಗ ಕಾಮಗಾರಿಗೆ ವೇಗ ಸಿಕ್ಕಿರುವುದರಿಂದ ಇನ್ನೂ ಆರು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಲಾಗುವುದು. ಅಧಿಕಾರಿಗಳ ಜೊತೆ 15ಕ್ಕೂ ಹೆಚ್ಚು ಬಾರಿ ಸಭೆ ನಡೆಸಿ ಕೆ-ಶಿಫ್ ರಸ್ತೆ ಕಾಮಗಾರಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ವಾಹನ ಸವಾರರಿಗೆ ಅನುಕೂಲ ಮಾಡಿಕೊಡುವ ಕೆಲಸ ಮಾಡಿಕೊಡಲಾಗುತ್ತದೆ ಎಂದು ಬಾಲಕೃಷ್ಣ ತಿಳಿಸಿದರು.ಟ್ರಾಫಿಕ್ ಜಾಮ್ ಆಗದಂತೆ ಕ್ರಮ ವಹಿಸಿ:
ರಸ್ತೆ ಕಾಮಗಾರಿ ನಡೆಯುತ್ತಿರುವುದರಿಂದ ಧೂಳು ಬರುತ್ತಿದ್ದು ಕಾಮಗಾರಿ ನಡೆಯುವ ವೇಳೆ ರಸ್ತೆಗೆ ನೀರು ಹಾಕಿಸುವ ವ್ಯವಸ್ಥೆ ಮಾಡಲಾಗುತ್ತದೆ. ಇಂದಿನ ಶಾಸಕರು ಈ ರೀತಿ ಸಭೆಗಳನ್ನು ಮಾಡಿ ಒತ್ತಡ ಹಾಕಿದ್ದರೆ ಇಷ್ಟು ಹೊತ್ತಿಗೆ ನಾಲ್ಕು ಪಥದ ರಸ್ತೆ ಕಾಮಗಾರಿ ಪೂರ್ಣ ಆಗುತ್ತಿತ್ತು. ಕೊಳ್ಳೇಗಾಲದಲ್ಲಿ ಇದೇ ಗುತ್ತಿಗೆದಾರ ಕಾಮಗಾರಿ ಮಾಡಿ ಅಲ್ಲಿ ಕೆಲಸ ಮುಗಿದಿದೆ. ಆದರೆ ಇಲ್ಲಿ ನಿಧಾನಗತಿಯಲ್ಲಿ ನಡೆಯುತ್ತಿದ್ದು, ಇದಕ್ಕೆ ವೇಗ ಕೊಡುವ ಕೆಲಸ ಮಾಡಲಾಗಿದೆ. ರಸ್ತೆ ಪಕ್ಕದಲ್ಲಿ ಎತ್ತರ ಮಾಡಿರುವುದರಿಂದ ಮನೆಗಳಿಗೆ ಜಮೀನಿಗಳಿಗೆ ಹೋಗಲು ಸಮಸ್ಯೆ ಆಗುತ್ತಿದೆ ಎಂದು ದೂರುಗಳು ಬಂದಿದೆ. ಜೊತೆಗೆ ರಸ್ತೆಗೆ ಬೀದಿ ದೀಪ ವ್ಯವಸ್ಥೆ ಮಾಡುವಂತೆ ಆಗ್ರಹ ಕೇಳಿ ಬಂದಿದ್ದು ಅಧಿಕಾರಿಗಳಿಂದ ಸಮಸ್ಯೆ ಬಗೆಹರಿಸಲಾಗುತ್ತದೆ ಎಂದು ಹೇಳಿದರು.
ತಾಲೂಕಿನ 63 ಕೆರೆಗಳನ್ನು ತುಂಬಿಸುವ ಶ್ರೀರಂಗ ಏತ ನೀರಾವರಿ ಕಾಮಗಾರಿ ಪ್ರಗತಿಯಲ್ಲಿದ್ದು ಹೇಮಾವತಿ ಹರಿಯುವ ಗೊಟ್ಟಿಗೆರೆ ಜಾಗಕ್ಕೆ ನೀರಾವರಿ ಎಂಡಿ ಅಧಿಕಾರಿ ಭೇಟಿ ನೀಡಿದ್ದು ಸ್ಥಳಕ್ಕೆ ನಾವು ಕೂಡ ಭೇಟಿ ನೀಡಿ ನಮ್ಮ ನೀರಾವರಿ ಯೋಜನೆ, ಪೂರ್ಣ ಮಾಡುವ ಹಿನ್ನೆಲೆಯಲ್ಲಿ ಅರಣ್ಯ, ರೈಲ್ವೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಸಮಸ್ಯೆಗಳು ಇದ್ದ ಪರಿಣಾಮ ಎಲ್ಲವನ್ನು ಬಗೆಹರಿಸಲಾಗಿದೆ. ರೈಸಿಂಗ್ ಮೈನ್ ಕಾಮಗಾರಿ 450 ಮೀಟರ್ ಮುಗಿದರೆ ಕಾಮಗಾರಿ ಪೂರ್ಣಗೊಳ್ಳಲಿದ್ದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರಿಂದ ಶೀಘ್ರದಲ್ಲೇ ಶ್ರೀರಂಗ ಏತ ನೀರಾವರಿಗೆ ಪ್ರಾಯೋಗಿಕವಾಗಿ ಚಾಲನೆ ನೀಡುವ ಕೆಲಸ ಆಗಲಿದೆ ಎಂದು ಬಾಲಕೃಷ್ಣ ಹೇಳಿದರು.