ಆ.3ಕ್ಕೆ ಡಾ.ವೀರಣ್ಣಗೆ ಮಾಗನೂರು ಬಸಪ್ಪ ಪ್ರಶಸ್ತಿ ಪ್ರದಾನ

KannadaprabhaNewsNetwork |  
Published : Jul 26, 2024, 01:38 AM IST
25ಕೆಡಿವಿಜಿ3-ದಾವಣಗೆರೆಯಲ್ಲಿ ಗುರುವಾರ ಕಸಾಪ ಜಿಲ್ಲಾಧ್ಯಕ್ಷ ಬಿ.ವಾಮದೇವಪ್ಪ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. | Kannada Prabha

ಸಾರಾಂಶ

ದಾವಣಗೆರೆ ಜಿಲ್ಲಾ ಘಟಕ ಹಾಗೂ ಶರಣ ಮಾಗನೂರು ಬಸಪ್ಪ ಪ್ರತಿಷ್ಟಾನದಿಂದ ದಾವಣಗೆರೆಯಲ್ಲಿ ಸ್ಥಾಪಿತ ರಾಜ್ಯಮಟ್ಟದ ಆರೂಢ ದಾಸೋಹಿ ಶರಣ ಮಾಗನೂರು ಬಸಪ್ಪ 2023ರ ಪ್ರಶಸ್ತಿ ಪ್ರದಾನ ಸಮಾರಂಭವು ನಡೆಯಲಿದೆ

ಕನ್ನಡಪ್ರಭ ವಾರ್ತೆ ದಾವಣಗೆರೆ

ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕ ಹಾಗೂ ಶರಣ ಮಾಗನೂರು ಬಸಪ್ಪ ಪ್ರತಿಷ್ಟಾನದಿಂದ ಸ್ಥಾಪಿತ ರಾಜ್ಯಮಟ್ಟದ ಆರೂಢ ದಾಸೋಹಿ ಶರಣ ಮಾಗನೂರು ಬಸಪ್ಪ ಪ್ರಶಸ್ತಿ-2024 ಪ್ರದಾನ ಸಮಾರಂಭವು ಆ.3ರಂದು ನಗರದ ಕುವೆಂಪು ಕನ್ನಡ ಭವನದಲ್ಲಿ ನಡೆಯಲಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಬಿ.ವಾಮದೇವಪ್ಪ ತಿಳಿಸಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಂದು ಬೆಳಗ್ಗೆ 11ಕ್ಕೆ ಹರಿಹರದ ಪಂಚಮಸಾಲಿ ಪೀಠದ ಶ್ರೀ ವಚನಾನಂದ ಸ್ವಾಮೀಜಿ ಸಾನ್ನಿಧ್ಯದಲ್ಲಿ ಪ್ರತಿಷ್ಟಾನದ ಅಧ್ಯಕ್ಷ, ಹಿರಿಯ ಉದ್ಯಮಿ ಎಂ.ಬಿ.ಸಂಗಮೇಶ್ವರ ಗೌಡ ಅಧ್ಯಕ್ಷತೆಯಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಡಾ.ಸಿ.ಸೋಮಶೇಖರ ಅಭಿನಂದನಾ ನುಡಿಗನ್ನಾಡುವರು ಎಂದರು.

ಧಾರವಾಡದ ವಚನ ಸಾಹಿತ್ಯ ಸಂಶೋಧಕ ಡಾ.ವೀರಣ್ಣ ಬಿ.ರಾಜೂರಗೆ 2024ನೇ ಸಾಲಿನ ಪ್ರಶಸ್ತಿ ಪ್ರದಾನ ಮಾಡಿ, ಗೌರವಿಸಲಾಗುವುದು. ಹಿರಿಯ ಜವಳಿ ಉದ್ಯಮಿ ಬಿ.ಸಿ.ಉಮಾಪತಿ ಶ್ರೀ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆ ಆಡಳಿತಾಧಿಕಾರಿ ಡಾ.ಎಚ್.ವಿ.ವಾಮದೇವಪ್ಪ, ಕಸಾಪ ಜಿಲ್ಲಾಧ್ಯಕ್ಷ ಬಿ.ವಾಮದೇವಪ್ಪ, ನಿಕಟ ಪೂರ್ವ ಅಧ್ಯಕ್ಷ ಡಾ.ಎಚ್.ಎಸ್.ಮಂಜುನಾಥ ಕುರ್ಕಿ ಮುಖ್ಯ ಅತಿಥಿಯಾಗಿ ಭಾಗವಹಿಸುವರು ಎಂದರು.

ಜು. 27ರಂದು ಬೆಳಗ್ಗೆ 10.30ಕ್ಕೆ ಬೀದರ್ ನಗರದ ಡಾ.ಚನ್ನಬಸವ ಪಟ್ಟದೇವರ ರಂಗಮಂದಿರದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಬೀದರ್ ಮತ್ತು ದಾವಣಗೆರೆ ಜಿಲ್ಲಾ ಘಟಕ ಹಾಗೂ ಶರಣ ಮಾಗನೂರು ಬಸಪ್ಪ ಪ್ರತಿಷ್ಟಾನದಿಂದ ದಾವಣಗೆರೆಯಲ್ಲಿ ಸ್ಥಾಪಿತ ರಾಜ್ಯಮಟ್ಟದ ಆರೂಢ ದಾಸೋಹಿ ಶರಣ ಮಾಗನೂರು ಬಸಪ್ಪ 2023ರ ಪ್ರಶಸ್ತಿ ಪ್ರದಾನ ಸಮಾರಂಭವು ನಡೆಯಲಿದೆ ಎಂದು ತಿಳಿಸಿದರು.

ಬಸವ ಕಲ್ಯಾಣದ ಅನುಭವ ಮಂಟಪದ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದೇವರು ಶ್ರೀಗಳ ಸಾನ್ನಿಧ್ಯದಲ್ಲಿ ಪ್ರತಿಷ್ಟಾನದ ಅಧ್ಯಕ್ಷ ಎಂ.ಬಿ.ಸಂಗಮೇಶ್ವರ ಗೌಡರ ಅಧ್ಯಕ್ಷತೆಯಲ್ಲಿ ಶ್ರೀಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಹುಲುಸೂರಿನ ಶ್ರೀ ಗುರು ಬಸವೇಶ್ವರ ಸಂಸ್ಥಾನ ಮಠದ ಡಾ.ಶಿವಾನಂದ ಸ್ವಾಮೀಜಿ ನೇತೃತ್ವದಲ್ಲಿ ಬೀದರ್ ಜಿಲ್ಲೆ ಬಾಲ್ಕಿ ಹಿರೇಮಠ ಸಂಸ್ಥಾನದ ಶ್ರೀ ಗುರುಬಸವ ಪಟ್ಟದೇವರ ಸಮ್ಮುಖದಲ್ಲಿ ಕಾರ್ಯಕ್ರಮ ನಡೆಯಲಿದೆ. ಅರಣ್ಯ ಸಚಿವ ಈಶ್ವರ ಖಂಡ್ರೆ ಸಮಾರಂಭ ಉದ್ಘಾಟಿಸುವರು ಎಂದು ಮಾಹಿತಿ ನೀಡಿದರು.

ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಉಪ ಕುಲಪತಿ ಪ್ರೊ.ಶರಣಪ್ಪ ವಿ.ಹಲಸೆ, ಸುರೇಶ ಚೆನ್ನಹಟ್ಟಿ, ಡಾ.ಬಸವರಾಜ ಬಲ್ಲೂರು, ಕಸಾಪ ಅಧ್ಯಕ್ಷ ಬಿ.ವಾಮದೇವಪ್ಪ, ನಿಕಟ ಪೂರ್ವ ಜಿಲ್ಲಾಧ್ಯಕ್ಷ ಡಾ.ಎಚ್.ಎಸ್. ಮಂಜುನಾಥ ಕುರ್ಕಿ, ಬಿ.ಜಿ.ಶಟಕಾರ, ಬಾಬು ವಾಲಿ, ಶರಣಪ್ಪ ಮಿಠಾರೆ, ಸೋಮಶೇಖರ ಪಾಟೀಲ್, ರಾಜೇಂದ್ರ ಕುಮಾರ ಗಂಧಗೆ, ಬಸವರಾಜ ಧನ್ನೂರ, ಜೈರಾಜ ಖಂಡ್ರೆ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದರು.

ಕನ್ನಡ ಸಾಹಿತ್ಯ ಪರಿಷತ್ನ ಕೆ.ರಾಘವೇಂದ್ರ ನಾಯರಿ, ಎಸ್.ಆರ್. ಶಿರಗುಂಬಿ, ಹಿರಿಯ ಪತ್ರಕರ್ತ ಜಿಗಳಿ ಪ್ರಕಾಶ, ಎಸ್.ಎಂ.ಮಲ್ಲಮ್ಮ, ರೇವಣಸಿದ್ದಪ್ಪ ಅಂಗಡಿ, ಮಂಜುನಾಥ ಇದ್ದರು.

PREV

Recommended Stories

ಮಗುವಿಗೆ ಗಂಟೆಯೊಳಗಾಗಿ ತಾಯಿಯ ಎದೆ ಹಾಲು ನೀಡಿ
ಸರ್ಕಾರಿ ಶಾಲೆಗಳ ಉಳಿವು, ಪರಿಸರ ಬಗ್ಗೆ ಜಾಗೃತಿ ಮೂಡಿಸಲು ಸೈಕಲ್​ ಮೂಲಕ ರಾಜ್ಯ ಪರ್ಯಟನೆ