ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ದೇವಾಲಯದ ಬಳಿ ಮಾಘ ಶುದ್ಧ ಹುಣ್ಣಿಮೆ ಪೂರ್ವ ಸಿದ್ಧತೆಗಳ ಕುರಿತು ಮಾತನಾಡಿ, ಮಾಘ ಶುದ್ಧ ಹುಣ್ಣಿಮೆಯಂದು ಇಲ್ಲಿನ ಕಾವೇರಿ ನದಿಯಲ್ಲಿ ಸ್ನಾನ ಮಾಡಿ ಶ್ರೀ ನಿಮಿಷಾಂಬ ದೇವಿ ದರ್ಶನ ಪಡೆದರೆ ಇಷ್ಟಾರ್ಥ ಸಿದ್ಧಿಸುವ ನಂಬಿಕೆಯಿದ್ದು, ಬರುವ ಭಕ್ತರಿಗೆ ಸೂಕ್ತ ಮೂಲ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ. ಅಂದು ಮಧ್ಯ ರಾತ್ರಿ 2 ಗಂಟೆಯಿಂದಲೇ ದೇವಿ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತಿದೆ. ವಿಶೇಷ ಪೂಜೆಗಳೊಂದಿಗೆ ಹೋಮ- ಹವನ ಹಮ್ಮಿಕೊಂಡಿರುವುದಾಗಿ ತಿಳಿಸಿದರು.
ಪ್ರತಿ ವರ್ಷದಂತೆ ಈ ವರ್ಷವೂ ಫೆ.1 ರ ಮಧ್ಯ ರಾತ್ರಿ 1 ಗಂಟೆಯಿಂದಲೇ ಇಲ್ಲಿನ ಕಾವೇರಿ ನದಿಯಲ್ಲಿ ಭಕ್ತರಿಗೆ ಮಾಘ ಶುದ್ಧ ಸ್ನಾನಕ್ಕೆ ವ್ಯವಸ್ಥೆ ಮಾಡಲಾಗಿದೆ. ಫೆ.2ರ ರಾತ್ರಿ 10 ಗಂಟೆಯವರೆಗೂ ಮಾಘ ಶುದ್ಧ ಸ್ನಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ಬರುವ ಭಕ್ತರಿಗೆ ಸೂಕ್ತ ಮೂಲ ಸೌಲಭ್ಯಗಳನ್ನು ಕಲ್ಪಿಸುತ್ತಿರುವುದಾಗಿ ತಿಳಿಸಿದರು.ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಕಾವೇರಿ ನದಿಯಲ್ಲಿ ಮಧ್ಯರಾತ್ರಿಯಿಂದಲೇ ಸ್ನಾನ ಮಾಡಲು ಹಾಗೂ ಬಟ್ಟೆ ಬದಲಿಸಿಕೊಳ್ಳಲು ನದಿ ತೀರದಲ್ಲಿ ಬ್ಯಾರಿಕೇಡ್‌ಗಳ ನಿರ್ಮಿಸಿ ಸಿದ್ಧತೆಗಳ ಅಗತ್ಯ ಕ್ರಮಕೈಗೊಳ್ಳಲಾಗಿದೆ. ನದಿ ಪಾತ್ರದಲ್ಲಿ ಮುಂಜಾಗ್ರತ ಕ್ರಮವಾಗಿ ಅಗ್ನಿ ಶಾಮಕ ದಳ ನಿಯೋಜನೆ, ವಿದ್ಯುತ್ ದೀಪಗಳ ವ್ಯವಸ್ಥೆ ಹಾಗೂ ವಾಹನಗಳ ನಿಲುಗಡೆಗಾಗಿ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ, ಕಾನೂನು ಬಾಹಿರ ಚಟುವಟಿಕೆಗೆ ಅವಕಾಶ ನೀಡದಂತೆ ಸೂಕ್ಷ್ಮ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗುತ್ತಿದೆ.
ಫೆ.1ರ ಸಂಜೆಯಿಂದಲೇ ಸ್ಥಳೀಯ ಹಾಗೂ ನುರಿತ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ದೇವಾಲಯದ ಮುಂಭಾಗದ ವೇದಿಕೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಭಕ್ತಿ ಗೀತೆ, ಸುಗಮ ಸಂಗೀತ, ಭಜನೆ, ಹರಿಕಥೆ, ಭರತನಾಟ್ಯ ಸೇರಿದಂತೆ ವಿವಿಧ ಸಂಗೀತ ಕಾರ್ಯಕ್ರಮಗಳು ನಡೆಯಲಿವೆ.
ನಿಮಿಷಾಂಬ ದೇಗುಲದಲ್ಲಿ ಫೆ.1 ರಂದು ನಡೆಯುವ ಮಾಘ ಶುದ್ಧ ಪೌರ್ಣಮಿ ಮಹೋತ್ಸವಕ್ಕೆ ಲಕ್ಷಾಂತರ ಭಕ್ತರು ಬರುವ ನಿರೀಕ್ಷೆಯಿದೆ. ಜಿಲ್ಲಾಡಳಿತ ಹಾಗೂ ಕ್ಷೇತ್ರದ ಶಾಸಕರ ಸಹಕಾರದೊಂದಿಗೆ ಈಗಾಗಲೇ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.