ಮಹದೇಶ್ವರ ಮಹಾರಥೋತ್ಸವ, ತೆಪ್ಪೋತ್ಸವ ಸಂಪನ್ನ

KannadaprabhaNewsNetwork |  
Published : Oct 24, 2025, 01:00 AM IST
ಸಂಪನ್ನಗೊಂಡ ಮಹಾರಥೋತ್ಸವ ಹಾಗೂ ತೆಪ್ಪೋತ್ಸವ | Kannada Prabha

ಸಾರಾಂಶ

ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕಳೆದ ಐದು ದಿನಗಳಿಂದ ನಡೆಯುತ್ತಿರುವ ಬೆಳಕಿನ ಹಬ್ಬ ದೀಪಾವಳಿ ಪ್ರಯುಕ್ತ ಹಲವು ವಿಶೇಷತೆಗಳೊಂದಿಗೆ ಮಹಾ ರಥೋತ್ಸವ 9.15 ರಿಂದ 9.55 ರವರೆಗೆ ಸಾಲೂರು ಬೃಹತ್ ಮಠದ ಶಾಂತಮಲ್ಲಿಕಾರ್ಜುನ ಸ್ವಾಮಿ ಸಾನಿಧ್ಯದಲ್ಲಿ ವಿಜೃಂಭಣೆಯಿಂದ ದೀಪಾವಳಿ ಮಹಾ ರಥೋತ್ಸವ ಸಂಭ್ರಮದಿಂದ ನಡೆಯಿತು.

ಕನ್ನಡಪ್ರಭ ವಾರ್ತೆ, ಹನೂರು

ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕಳೆದ ಐದು ದಿನಗಳಿಂದ ನಡೆಯುತ್ತಿರುವ ಬೆಳಕಿನ ಹಬ್ಬ ದೀಪಾವಳಿ ಪ್ರಯುಕ್ತ ಹಲವು ವಿಶೇಷತೆಗಳೊಂದಿಗೆ ಮಹಾ ರಥೋತ್ಸವ 9.15 ರಿಂದ 9.55 ರವರೆಗೆ ಸಾಲೂರು ಬೃಹತ್ ಮಠದ ಶಾಂತಮಲ್ಲಿಕಾರ್ಜುನ ಸ್ವಾಮಿ ಸಾನಿಧ್ಯದಲ್ಲಿ ವಿಜೃಂಭಣೆಯಿಂದ ದೀಪಾವಳಿ ಮಹಾ ರಥೋತ್ಸವ ಸಂಭ್ರಮದಿಂದ ನಡೆಯಿತು.

ಮಹಾರಥೋತ್ಸವ ವಿಶೇಷತೆ:ದೀಪಾವಳಿ ಮಹಾರಥೋತ್ಸವಕ್ಕೂ ಮುನ್ನ ಬೆಳಗ್ಗೆ 7ಕ್ಕೆ ಕೆಂಪು ಅನ್ನ ತಯಾರಿಸಿ ಅನ್ನ (ಬಲಿ ಅನ್ನ ) ಮಲೆ ಮಹದೇಶ್ವರ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸಲಾಯಿತು. ರಥದ ಚಕ್ರಗಳಿಗೆ ಬಲಿ ಅನ್ನ ಇಟ್ಟು ನಂತರ ಮಹಾ ಮಂಗಳಾರತಿ ಪೂಜೆ ಸಲ್ಲಿಸಿ, ಬೂದು ಕುಂಬಳಕಾಯಿ ಒಡೆದ ನಂತರ ಸ್ವಾಮೀಜಿಗಳು ತೆಂಗಿನಕಾಯಿ ಒಡೆಯುವ ಮೂಲಕ ಮಹಾರಥೋತ್ಸವಕ್ಕೆ ಬೇಡಗಂಪಣ ಸಮುದಾಯದ ಹೆಣ್ಣು ಮಕ್ಕಳಿಂದ ಸಾಂಪ್ರದಾಯದಂತೆ ಬೆಲ್ಲದ ಆರತಿ ಬೆಳಗಿಸಿ ನಂತರ ಚಾಲನೆ ನೀಡಲಾಯಿತು.

ಬಿಳಿ ಆನೆ ಉತ್ಸವ:

ಮಹಾ ರಥೋತ್ಸವ ನಂತರ ಪಾರ್ವತಿ ಪರಮೇಶ್ವರರ ಉತ್ಸವ ಮೂರ್ತಿಯನ್ನು ಬಿಳಿ ಆನೆಯ ಮೇಲೆ ಪ್ರತಿಷ್ಠಾಪಿಸಲಾಯಿತು. ದೇವಾಲಯದ ಸುತ್ತಲೂ ವಾದ್ಯಗಳೊಂದಿಗೆ ಪ್ರದಕ್ಷಿಣೆ ಹಾಕಿ ಉತ್ಸವ ಮೂರ್ತಿಯನ್ನು ಪೂಜೆ ಸಲ್ಲಿಸಿ, ಮಹಾ ಮಂಗಳಾರತಿ ಪೂಜೆಯ ನಂತರ ಬಿಳಿ ಆನೆ ಉತ್ಸವ ನಡೆಯಿತು.

ಗುರು ಬ್ರಹ್ಮೋತ್ಸವ:

ಮಲೆ ಮಹದೇಶ್ವರ ಉತ್ಸವಮೂರ್ತಿಗೆ ದೇವಾಲಯದಲ್ಲಿ ಪೂಜೆ ಸಲ್ಲಿಸಲಾಯಿತು. ಗುರು ಬ್ರಹ್ಮೋತ್ಸವ ಉತ್ಸವ ಮೂರ್ತಿಯನ್ನು ವಾದ್ಯಗಳ ಹಾಗೂ ವೀರಗಾಸೆ ಕತ್ತಿ ವರಸೆ ನವಿಲೂರು ವಾದ್ಯ ಮೇಳೆಗಳ ಜೊತೆ ದೇವಾಲಯದ ಸುತ್ತಲೂ ಪ್ರದಕ್ಷಿಣೆ ಹಾಸಲಾಯಿತು.

ಜೃಂಭಣೆಯಿಂದ ನಡೆದ ತೆಪ್ಪೋತ್ಸವ:

ರಾತ್ರಿ ದೇವಾಲಯದ ಮುಂಭಾಗ ಇರುವ ದೊಡ್ಡ ಕೆರೆಯಲ್ಲಿ ಸಾಂಪ್ರದಾಯದಂತೆ ತೆಪ್ಪೋತ್ಸವ ನಡೆಯಿತು. ವಿಶೇಷ ವಿದ್ಯುತ್ ದೀಪ ಅಲಂಕಾರ ಮಾಡಲಾಗಿತ್ತು.

ಶಾಸಕ ಎಂ. ಆರ್. ಮಂಜುನಾಥ್ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕಾರ್ಯದರ್ಶಿ ಎ. ಇ. ರಘು, ಉಪ ಕಾರ್ಯದರ್ಶಿ ಚಂದ್ರಶೇಖರ್, ಕೊಳ್ಳೇಗಾಲ ಉಪ ವಿಭಾಗ ಡಿವೈಎಸ್ಪಿ ಧರ್ಮೇಂದರ್, ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಕಾರ್ಯದರ್ಶಿ ಎ. ಇ. ರಘು , ಉಪ ವಿಭಾಗ ಡಿವೈಎಸ್ಪಿ ಧರ್ಮೇಂದರ್ ಅಪಾರ ಸಂಖ್ಯೆಯ ಭಕ್ತರು ಉಪಸ್ಥಿತರಿದ್ದರು.........

ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ ಇ ರಘು ಮಾತನಾಡಿ, ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕಳೆದ ಐದು ದಿನಗಳಿಂದ ನಡೆದ ದೀಪಾವಳಿ ಜಾತ್ರಾ ಮಹೋತ್ಸವದಲ್ಲಿ ರಾಜ್ಯದ ನಾನಾ ಭಾಗಗಳಿಂದ ಲಕ್ಷಾಂತರ ಭಕ್ತರು ಭೇಟಿ ನೀಡಿ ಮಾದಪ್ಪನ ದರ್ಶನ ಪಡೆದಿದ್ದಾರೆ. ಜೊತೆಗೆ ಬಂದಂತ ಭಕ್ತಾದಿಗಳಿಗೆ ಸಕಲಸೌಕರ್ಯ ವಿಶೇಷ ದಾಸೋಹ ವ್ಯವಸ್ಥೆ ಕುಡಿಯುವ ನೀರು ಹಾಗೂ ಶೌಚಾಲಯ ವ್ಯವಸ್ಥೆ ಸ್ವಚ್ಛತೆಗೂ ಸಹ ಆದ್ಯತೆ ನೀಡಲಾಗಿತ್ತು . ಐದು ಲಕ್ಷ ಲಾಡು ಪ್ರಸಾದ ತಯಾರಿಸಿ ನೀಡಲಾಗಿದೆ ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ : ಕುತೂಹಲ!
ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ