ಕನ್ನಡಪ್ರಭ ವಾರ್ತೆ ಯಳಂದೂರು
ಅವರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ಈ ಕುರಿತು ನಡೆದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಕಾಂಗ್ರೆಸ್ ಪಕ್ಷದಿಂದ ದಲಿತರನ್ನು ಹತ್ತಿಕ್ಕುವ ಕೆಲಸವಾಗುತ್ತಿದೆ. ನಾವು ಈ ಪಕ್ಷಕ್ಕೆ ಶೇ.90ರಷ್ಟು ಮತ ನೀಡಿದ್ದೇವೆ. ನಾವು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಾಗಿದ್ದೆವು. ಆದರೆ, ಇದು ನಮಗೆ ಸಿಗಲಿಲ್ಲ. ಹಳೇ ಮೈಸೂರು ಭಾಗದಲ್ಲಿ ಮಹದೇವಪ್ಪ ಪ್ರಭಾವಿ ದಲಿತ ನಾಯಕರಾಗಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಹಾಗೂ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಲು ಕಾರಣ ಇವರೇ ಆಗಿದ್ದಾರೆ. ಈ ಹಿಂದೆಯೂ ವಿ. ಶ್ರೀನಿವಾಸ್ ಪ್ರಸಾದ್‌ರನ್ನು ಸಚಿವ ಸ್ಥಾನದಿಂದ ತೆಗೆದು ಹಾಕಲಾಗಿತ್ತು. ಈಗ ಅದೇ ಚಾಳಿಯನ್ನು ಕಾಂಗ್ರೆಸ್ ಮಾಡುತ್ತಿದೆ. ಇದು ಮುಂದುವರಿದಲ್ಲಿ ದಲಿತರ ಮತಗಳು ಖಂಡಿತವಾಗಿಯೂ ಕಾಂಗ್ರೆಸ್ ಪಕ್ಷಕ್ಕೆ ಬೀಳುವುದಿಲ್ಲ. ಇವರಿಗೆ ಡಿ.ಕೆ. ಶಿವಕುಮಾರ್‌ರ ಸಚಿವ ಸಂಪುಟದ 2ನೇ ಪಟ್ಟಿಯಲ್ಲಿ ಮತ್ತೆ ಸಚಿವ ಸ್ಥಾನ ನೀಡಬೇಕು, ಇಲ್ಲವಾದಲ್ಲಿ ರಾಜ್ಯದಲ್ಲಿ ದಲಿತ ಸಂಘಟನೆಗಳು ಕಾಂಗ್ರೆಸ್ ವಿರುದ್ಧ ದೊಡ್ಡ ಹೋರಾಟ ನಡೆಸಲಿದ್ದು ಇದು ಮುಂದಿನ ಚುನಾವಣಾ ಭವಿಷ್ಯಕ್ಕೆ ಮಾರಕವಾಗಲಿದೆ ಎಂದರು.
ಮುಖಂಡ ಮದ್ದೂರು ಚಕ್ರವರ್ತಿ ಮಾತನಾಡಿ, ಮಹದೇವಪ್ಪ ಈ ಹಿಂದೆಯೂ 5 ಬಾರಿ ಸಚಿವರಾಗಿ ತಮ್ಮ ಸೇವೆ ಸಲ್ಲಿಸಿದ್ದಾರೆ. ದಲಿತರ ಪ್ರಭಾವಿ ನಾಯಕರಾಗಿದ್ದಾರೆ. ಇವರನ್ನು ಬೇಕಂತಲೇ ಹತ್ತಿಕ್ಕುವ ಕೆಲಸವನ್ನು ಮಾಡಲಾಗುತ್ತಿದೆ. ಇದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯರೇ ನೇರ ಕಾರಣವಾಗಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆದಿದ್ದು, ಜ್ಞಾನಪ್ರಕಾಶ್ ಸ್ವಾಮೀಜಿ ಕೂಡ ಮಹದೇವಪ್ಪರಿಗೆ ಸಚಿವ ಸ್ಥಾನ ನೀಡಿದಿದ್ದರೆ ದಲಿತರ ಬೀದಿಗಳಿಗೆ ಕಾಂಗ್ರೆಸ್ ಪಕ್ಷದವರು ಮತ ಕೇಳಲು ಬಾರದಂತೆ ತಡೆಯೊಡ್ಡುತ್ತೇವೆ ಎಂದು ಎಚ್ಚರಿಸಿದ್ದಾರೆ. ಹಾಗಾಗಿ ಇವರಿಗೆ ಸಚಿವ ಸ್ಥಾನವನ್ನು ನೀಡಬೇಕು ಎಂದು ಆಗ್ರಹಿಸಿದರು.ಜಾನಿ ಮಾತನಾಡಿ, ದಲಿತರು ಕಾಂಗ್ರೆಸ್‌ಗೆ ಹೆಚ್ಚು ಮತ ನೀಡುವ ಸಮುದಾಯವಾಗಿದೆ. ಹಾಗಾಗಿ ಈ ಸಮುದಾಯದ 8 ಮಂದಿಗಾದರೂ ಸಚಿವ ಸ್ಥಾನ ನೀಡಬೇಕು. ಮಹದೇವಪ್ಪ ಪ್ರಭಾವಿ ದಲಿತ ನಾಯಕರಾಗಿದ್ದು ಇವರನ್ನು ಹತ್ತಿಕ್ಕುವ ಕೆಲಸವಾಗುತ್ತಿದ್ದು, ಇದು ನಿಲ್ಲಬೇಕು. ಇವರಿಗೆ ಸಚಿವ ಸ್ಥಾನ ನೀಡದಿದ್ದಲ್ಲಿ ಹಳೇ ಮೈಸೂರು ಭಾಗದಲ್ಲಿ ಪಕ್ಷ ಶೂನ್ಯ ಸಂಪಾದನೆ ಮಾಡುತ್ತದೆ ಎಂದು ಎಚ್ಚರಿಕೆ ನೀಡಿದರು.