ಗೊಲ್ಲರಹಳ್ಳಿ ಡೇರಿ ಅಧ್ಯಕ್ಷರಾಗಿ ಮಹಾದೇವ ಅವಿರೋಧ ಆಯ್ಕೆ

KannadaprabhaNewsNetwork |  
Published : Aug 03, 2025, 11:45 PM IST
3ಕೆಎಂಎನ್ ಡಿ19 | Kannada Prabha

ಸಾರಾಂಶ

ಸಂಘದ ಎಲ್ಲಾ ನಿರ್ದೇಶಕರು ಒಗ್ಗೂಡಿ ನನ್ನನ್ನು ಅಧ್ಯಕ್ಷನಾಗಿ ಆಯ್ಕೆ ಮಾಡಿರುವುದಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ. ಸಂಘದಲ್ಲಿ ಮುಂದಿನ ದಿನಗಳಲ್ಲಿ ಪಾರದರ್ಶಕ ಆಡಳಿತಕ್ಕೆ ಒತ್ತು ನೀಡುವ ಮೂಲಕ ಸಹಕಾರ ಸಂಘದ ಸರ್ವಾಂಗೀಣ ಅಭಿವೃದ್ಧಿಗಾಗಿ ಶ್ರಮಿಸಲಾಗುವುದು.

ಕನ್ನಡಪ್ರಭ ವಾರ್ತೆ ಹಲಗೂರು

ಸಮೀಪದ ಗೊಲ್ಲರಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಕೆ.ಮಹಾದೇವ, ಉಪಾಧ್ಯಕ್ಷರಾಗಿ ಜಿ.ಭಾಗ್ಯ ಅವಿರೋಧವಾಗಿ ಆಯ್ಕೆಯಾದರು.

ಐದು ವರ್ಷ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರ ಸ್ಥಾನಕ್ಕೆ ಕೆ.ಮಹದೇವ, ಉಪಾಧ್ಯಕ್ಷ ಸ್ಥಾನಕ್ಕೆ ಜಿ.ಭಾಗ್ಯ ಹೊರತು ಪಡಿಸಿ ಬೇರೆ ಯಾರು ನಾಮಪತ್ರ ಸಲ್ಲಿಸದ ಕಾರಣ ಚುನಾವಣಾಧಿಕಾರಿ ತ್ಯಾಗರಾಜ್ ಪ್ರಸಾದ್ ಅವಿರೋಧವಾಗಿ ಆಯ್ಕೆ ಘೋಷಣೆ ಮಾಡಿದರು.

ನೂತನ ಅಧ್ಯಕ್ಷ ಕೆ.ಮಹದೇವ ಮಾತನಾಡಿ, ಸಂಘದ ಎಲ್ಲಾ ನಿರ್ದೇಶಕರು ಒಗ್ಗೂಡಿ ನನ್ನನ್ನು ಅಧ್ಯಕ್ಷನಾಗಿ ಆಯ್ಕೆ ಮಾಡಿರುವುದಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ. ಸಂಘದಲ್ಲಿ ಮುಂದಿನ ದಿನಗಳಲ್ಲಿ ಪಾರದರ್ಶಕ ಆಡಳಿತಕ್ಕೆ ಒತ್ತು ನೀಡುವ ಮೂಲಕ ಸಹಕಾರ ಸಂಘದ ಸರ್ವಾಂಗೀಣ ಅಭಿವೃದ್ಧಿಗಾಗಿ ಶ್ರಮಿಸಲಾಗುವುದು ಎಂದು ಭರವಸೆ ನೀಡಿದರು.

ಈ ವೇಳೆ ಸಂಘದ ನಿರ್ದೆರ್ಶಕರಾದ ಗೋಪಾಲ್, ಎನ್‌.ಡಿ.ವೆಂಕಟೇಶ, ನಾಗರಾಜು, ಮಹದೇವ, ಸಿದ್ದಯ್ಯ ಎಚ್.ರವಿ ,ರಾಜೇ ಸ್ವಾಮಿ, ಚೆನ್ನಮ್ಮ, ಶಿವಮುತ್ತಮ್ಮ, ಕಾರ್ಯದರ್ಶಿ ಶಿವಲಿಂಗೇಗೌಡ ಮತ್ತು ಸಿಬ್ಬಂದಿ ಕಿರಣ್, ಉಮೇಶ್ ಸೇರಿದಂತೆ ಹಲವರು ಇದ್ದರು.

ವಯೋನಿವೃತ್ತಿ ಹೊಂದಿದ ಶಿಕ್ಷಕರಿಗೆ ಅಭಿನಂದನೆ

ಪಾಂಡವಪುರ:

ಪಟ್ಟಣದ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಸರ್ಕಾರಿ ನೌಕರರ ಸಂಘದ ರಾಜ್ಯ ಸಂಘಟನ ಕಾರ್ಯದರ್ಶಿ ಎಂ.ಜಯರಾಮು ಅವರ ಅಭಿನಂದನೆ ಸಮಾರಂಭದಲ್ಲಿ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ತಾಲೂಕು ಸಂಘದಿಂದ ವಯೋನಿವೃತ್ತಿ ಹೊಂದಿದ ಶಿಕ್ಷಕರಾದ ನಾಗೇಗೌಡ, ಯಶೋಧಮ್ಮ, ಯೋಗರಾಜು, ಲತಾಮಣಿ, ಹಿಹೃದಯ ಮೇರಿ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.

ಈ ವೇಳೆ ತಾಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಎಲ್.ಎಸ್.ಕೇಶವಮೂರ್ತಿ, ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷ ರಮೇಶ್ ಬೀರಶೆಟ್ಟಹಳ್ಳಿ, ಪ್ರೌಢ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ಕೃಷ್ಣೇಗೌಡ, ಕಾರ್ಯದರ್ಶಿ ವಿಜಯ್ ಕುಮಾರ್, ನಿರ್ದೇಶಕ ಯುವರಾಜ್, ಕರುಣಕುಮಾರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸುರೇಂದ್ರಕುಮಾರ್, ಪ್ರಾಥಮಿಕ ಶಾಲಾ ಪಧವೀಧರ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಎಂ.ಕೆ.ವಿಜಯ್ ಕುಮಾರ್, ಗಡ್ಡ ಚಂದ್ರಶೇಖರ್, ವಿಜಯ್ ಕುಮಾರ್, ಶಿವಕುಮಾರ್, ಸೋಮಶೇಖರ್, ಯೋಗನರಸಿಂಹೇಗೌಡ, ಬಡ್ತಿ ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷೆ ಮಂಜುಳ, ಅನುಸೂಯ, ಹೇಮಾವತಿ ಸೇರಿದಂತೆ ಹಲವರು ಇದ್ದರು.

PREV

Recommended Stories

2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...