ಮಹಾಲಿಂಗಪುರ ಅರ್ಬನ್ ಬ್ಯಾಂಕ್‌ಗೆ ಅತ್ಯುತ್ತಮ ಪ್ರಶಸ್ತಿ

KannadaprabhaNewsNetwork |  
Published : Jul 31, 2025, 01:06 AM IST
ಮಹಾಲಿಂಗಪುರ | Kannada Prabha

ಸಾರಾಂಶ

ಜನ ಸ್ನೇಹಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಬ್ಯಾಂಕ್ ಆಡಳಿತ ಮಂಡಳಿ ಹಾಗೂ ಸಿಬ್ಬಂದಿಗಳ ಕಾರ್ಯ ವೈಖರಿಯನ್ನು ಜಿಲ್ಲಾ ಸಹಕಾರಿ ಬ್ಯಾಂಕ್ ಶ್ಲಾಘನೆ ವ್ಯಕ್ತಪಡಿಸಿದೆ.

ಕನ್ನಡಪ್ರಭ ವಾರ್ತೆ ಮಹಾಲಿಂಗಪುರ

ಪ್ರತಿ ವರ್ಷ ಬಿಡಿಸಿಸಿ ಬ್ಯಾಂಕ್ ವತಿಯಿಂದ ನೀಡುವ ಜಿಲ್ಲಾಮಟ್ಟದ ಅತ್ಯುತ್ತಮ ಸಾಧನಾ ಪ್ರಶಸ್ತಿಯಲ್ಲಿ ೨೦೨೪-೨೫ನೇ ಸಾಲಿನ ದ್ವಿತೀಯ ಸ್ಥಾನವನ್ನು ಸ್ಥಳೀಯ ಮಹಾಲಿಂಗಪುರ ಅರ್ಬನ್ ಕೋ-ಆಪ್ ಬ್ಯಾಂಕ್‌ಗೆ ಬಂದಿದೆ ಎಂದು ಬ್ಯಾಂಕ್‌ ಅಧ್ಯಕ್ಷ ಶೇಖರ ಅಂಗಡಿ ಹೇಳಿದರು.

ಬ್ಯಾಂಕ್ ಸಭಾಭವನದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾರ್ವಜನಿಕ ವಲಯದಲ್ಲಿ ಬ್ಯಾಂಕ್ ಆಡಳಿತ ಮಂಡಳಿ ಮತ್ತು ಸಿಬ್ಬಂದಿ ಉತ್ತಮ ಲೇವಾದೇವಿ ನಡೆಸಿರುವ ಪ್ರಯುಕ್ತ ಸಂಸ್ಥೆ ₹೫೧ ಲಕ್ಷ ನಿವ್ವಳ ಲಾಭ ಪಡೆದುಕೊಂಡು, ಜನ ಸ್ನೇಹಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಬ್ಯಾಂಕ್ ಆಡಳಿತ ಮಂಡಳಿ ಹಾಗೂ ಸಿಬ್ಬಂದಿಗಳ ಕಾರ್ಯ ವೈಖರಿಯನ್ನು ಜಿಲ್ಲಾ ಸಹಕಾರಿ ಬ್ಯಾಂಕ್ ಶ್ಲಾಘನೆ ವ್ಯಕ್ತಪಡಿಸಿದೆ. ಈ ಹಣಕಾಸು ಸಂಸ್ಥೆ ಹಿಂದಿನ ಮತ್ತು ಪ್ರಸ್ತುತ ಆಡಳಿತ ಮಂಡಳಿಯ ಸಂಘಟಿತ ಶ್ರಮದ ಫಲದಿಂದ ೨೦೧೬-೧೭ರ ಈಚೆ ಎರಡು ಸಲ ಪ್ರಥಮ ಹಾಗೂ ಮೂರು ಸಲ ದ್ವಿತೀಯ ಸ್ಥಾನ ಪಡೆದುಕೊಂಡು ಬ್ಯಾಂಕ್ ಬೆಳೆಯುತ್ತಿದೆ ಎಂದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷ ಗಿರೆಪ್ಪ ಕಬಾಡಿ, ಸದಸ್ಯರಾದ ಮಹಾದೇವ ಮಾರಾಪೂರ, ಫಕ್ರುದ್ದೀನ್ ಕುಂಟೋಜಿ, ಶ್ರೀಶೈಲಪ್ಪ ಹಿಪ್ಪರಗಿ, ಮಹೇಶ್ ಮುಕುಂದ, ಅಶೋಕ ಜ.ಅಂಗಡಿ ಮತ್ತು ಬ್ಯಾಂಕ್ ವ್ಯವಸ್ಥಾಪಕ ಶಿವಲಿಂಗಪ್ಪ ಗುಣದಾಳ ಹಾಗೂ ಸಿಬ್ಬಂದಿ ಶಂಕರ ಹಿಕಡಿ, ಮಹಾಲಿಂಗಪ್ಪ ಗುಜ್ಜರ, ಸುನೀತಾ ಹುಬ್ಬಳ್ಳಿ, ಇರಪಯ್ಯಾ ಮಠದ, ಮಕ್ತುಮ ದಂಡಿನ, ರಾಜು ಕಾಗಿ ಮತ್ತು ಸಲಿಮ ವಾಲಿಕಾರ ಇದ್ದರು.

ಪ್ರಶಸ್ತಿ ಪ್ರದಾನ ಸಮಾರಂಭ:

ಬಿಡಿಸಿಸಿ ಬ್ಯಾಂಕ್ ವತಿಯಿಂದ ನೀಡುವ ಜಿಲ್ಲಾಮಟ್ಟದ ಅತ್ಯುತ್ತಮ ಸಾಧನಾ ಪ್ರಶಸ್ತಿಯು ಇತ್ತೀಚೆಗೆ ಬಾಗಲಕೋಟೆ ಕಲಾ ಭವನದಲ್ಲಿ ಶಾಸಕ ಸಿದ್ದು ಸವದಿ, ಡಿಸಿಸಿ ಬ್ಯಾಂಕ್ ಜಿಲ್ಲಾ ಅಧ್ಯಕ್ಷ ಅಜಯ ಕುಮಾರ್ ಸರನಾಯಕ ಮತ್ತು ಜಿಲ್ಲಾ ನಿರ್ದೇಶಕ ಪ್ರಕಾಶ ತಪಶೆಟ್ಟಿ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಈ ವೇಳೆ ಮಹಾಲಿಂಗಪುರ ಅರ್ಬನ್ ಕೋ-ಆಪ್ ಬ್ಯಾಂಕ್‌ ಅಧ್ಯಕ್ಷ ಶೇಖರ ಅಂಗಡಿ ಹಾಗೂ ವ್ಯವಸ್ಥಾಪಕ ಶಿವಲಿಂಗಪ್ಪ ಗುಣದಾಳ ಅವರಿಗೆ ಪ್ರಶಸ್ತಿ ಫಲಕ ಮತ್ತು ಪತ್ರ ನೀಡಿ ಗೌರವಿಸಿ ಸನ್ಮಾನಿಸಲಾಯಿತು.

PREV

Recommended Stories

ಸರ್ಕಾರಿ ಶಾಲೆ ಕುಡಿವ ನೀರಿಗೆ ವಿಷ ಬೆರೆಸಿದ್ದಕ್ಕೆ ಸಿಎಂ ಗರಂ
ಡಾ.ರಾಜ್‌ಕುಮಾರ್‌ರ ನೆಚ್ಚಿನ ಸಹೋದರಿ ನಾಗಮ್ಮ ನಿಧನ